ನರಿಕೊಂಬು ; ತಾಯಿ, ಮಗ ವಿಷ ಸೇವಿಸಿ ಆತ್ಮಹತ್ಯೆ ಯತ್ನ, ತಾಯಿ ಸಾವು

07-09-22 07:17 pm       Mangalore Correspondent   ಕರಾವಳಿ

ವೃದ್ಧ ತಾಯಿ ಮತ್ತು ಮಧ್ಯವಯಸ್ಕ ಮಗ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮದಲ್ಲಿ ನಡೆದಿದೆ. ಇಬ್ಬರನ್ನೂ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದು, ತಾಯಿ ಗಿರಿಜಾ (60) ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

ಬಂಟ್ವಾಳ, ಸೆ.7: ವೃದ್ಧ ತಾಯಿ ಮತ್ತು ಮಧ್ಯವಯಸ್ಕ ಮಗ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮದಲ್ಲಿ ನಡೆದಿದೆ. ಇಬ್ಬರನ್ನೂ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದು, ತಾಯಿ ಗಿರಿಜಾ (60) ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಪುತ್ರ ರಾಮಚಂದ್ರ (40) ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.

ಮೃತ ಗಿರಿಜಾ ಅವರಿಗೆ ಮೂವರು ಗಂಡು ಮಕ್ಕಳು ಹಾಗೂ ಓರ್ವ ಪುತ್ರಿ ಇದ್ದಾರೆ. ಪತಿ ನಿಧನ ಹೊಂದಿದ್ದು, ಮೂವರು ಗಂಡು ಮಕ್ಕಳಿಗೆ ಅಂಗ ವೈಕಲ್ಯ ಹೊಂದಿದ್ದಾರೆ. ಇವರು ಸಂಬಂಧಿಕರ ಮನೆಯಲ್ಲಿ ವಾಸವಿದ್ದು, ಈ ವೇಳೆ ತಾಯಿ, ಮಗ ವಿಷ ಸೇವಿಸಿ ಅಸ್ವಸ್ಥರಾಗಿದ್ದಾರೆ. ಸಂಬಂಧಿಕರು ಬಳಿಕ ಅವರನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲು ಮಾಡಿದ್ದರು. ಆದರೆ ಚಿಕಿತ್ಸೆ ಫಲಿಸದೆ ಮಹಿಳೆ ಸಾವನ್ನಪ್ಪಿದ್ದಾರೆ. ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

Bantwal Mother and son consume poison and commit suicide, mother found dead in Mangalore. The deceased has been identified as Girija.