ದ.ಕ‌. ಜಿಲ್ಲಾಧಿಕಾರಿಯ ಮೊಬೈಲ್ ನಂಬರ್ ಹ್ಯಾಕ್ ; ಡೀಸಿ ಹೆಸರಲ್ಲಿ ಹಣ ಕೇಳಿದರೆ ಮೋಸ ಹೋಗದಿರಿ ! 

14-09-22 08:08 pm       Mangalore Correspondent   ಕರಾವಳಿ

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ‌.ವಿ. ಅವರ ಮೊಬೈಲ್ ನಂಬರ್ ಹ್ಯಾಕ್ ಆಗಿದ್ದು, 8590710748 ಮೊಬೈಲ್ ನಂಬರ್ ನಿಂದ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರ ಹೆಸರು ಹಾಗೂ ಫೋಟೋ ಬಳಸಿ ವಾಟ್ಸ್ ಅಪ್ ಮೂಲಕ ಸಂದೇಶ  ಕಳುಹಿಸಿ ಅಪರಿಚಿತರು ಸಹಾಯ ಅಥವಾ ಹಣವನ್ನು ಕೇಳಿದರೆ ಮೋಸ ಹೋಗಬೇಡಿ ಎಂದು ದ.ಕ. ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆವಿ ಹೇಳಿದ್ದಾರೆ.‌

ಮಂಗಳೂರು, ಸೆ.14 : ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ‌.ವಿ. ಅವರ ಮೊಬೈಲ್ ನಂಬರ್ ಹ್ಯಾಕ್ ಆಗಿದ್ದು, 8590710748 ಮೊಬೈಲ್ ನಂಬರ್ ನಿಂದ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರ ಹೆಸರು ಹಾಗೂ ಫೋಟೋ ಬಳಸಿ ವಾಟ್ಸ್ ಅಪ್ ಮೂಲಕ ಸಂದೇಶ  ಕಳುಹಿಸಿ ಅಪರಿಚಿತರು ಸಹಾಯ ಅಥವಾ ಹಣವನ್ನು ಕೇಳಿದರೆ ಮೋಸ ಹೋಗಬೇಡಿ ಎಂದು ದ.ಕ. ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆವಿ ಹೇಳಿದ್ದಾರೆ.‌

ಆ ನಂಬರ್ ಹ್ಯಾಕ್ ಆಗಿರುವುದರಿಂದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಅವರದ್ದಾಗಿರುವುದಿಲ್ಲ.  ಆದಕಾರಣ ಯಾರು ಕೂಡ ಯಾವುದೇ ರೀತಿಯಲ್ಲಿ ಸಹಾಯ ಅಥವಾ ಹಣವನ್ನು ಕೇಳಿದರೆ ಆ ನಂಬರ್ ಗೆ ವರ್ಗಾಯಿಸದಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಮನವಿ ಮಾಡಿದ್ದಾರೆ.

UGC India's Twitter account hacked, 3rd government account targeted in 2  days | Latest News India - Hindustan Times

8590710748 ಈ ನಂಬರ್ ನಿಂದ ಯಾವುದೇ ರೀತಿಯ ಮನವಿ ಬಂದಲ್ಲಿ ಅದನ್ನು ಬ್ಲಾಕ್ ಮಾಡಿ, ಜಿಲ್ಲಾಡಳಿತದ ಗಮನಕ್ಕೆ ತರುವಂತೆಯೂ ಜಿಲ್ಲಾಧಿಕಾರಿ ಕೋರಿದ್ದಾರೆ. ಇತ್ತೀಚೆಗೆ ಸೈಬರ್ ಹ್ಯಾಕರ್ಸ್ ಮೈಲ್, ಫೇಸ್‌ಬುಕ್‌ ಹ್ಯಾಕ್ ಮಾಡುವುದು ಮಾಮೂಲಿ ಆಗಿತ್ತು. ಆಮೂಲಕ ಫೋಟೊ ಬಳಸಿ ಹಣ ಕೇಳಿ ಯಾಮಾರಿಸುತ್ತಿದ್ದರು. ಒಂದು ವರ್ಷದ ಹಿಂದೆ ಉಡುಪಿ ಜಿಲ್ಲಾಧಿಕಾರಿಯ ಫೇಸ್ಬುಕ್ ಹ್ಯಾಕ್ ಮಾಡಿದ್ದು ಬೆಳಕಿಗೆ ಬಂದಿತ್ತು. ಇದೀಗ ಮೊಬೈಲ್ ನಂಬರನ್ನೇ ಹ್ಯಾಕ್ ಮಾಡಿ, ಯಾಮಾರಿಸುವ ಪ್ರಯತ್ನ ನಡೆದಿದೆ.

Mangalore DC Mobile number hacked, hackers demand money using the same number and WhatsApp using his profile picture. Dc has requested the public to be alert and not to give any money if demanded.