ಉಡುಪಿಯಲ್ಲಿ ಆಟೋ ದರ ಏರಿಕೆ ; ಒಂದೂವರೆ ಕಿಮೀಗೆ ಕನಿಷ್ಠ ದರ 40 ರೂ.ಗೆ ಏರಿಕೆ ! 

19-09-22 08:44 pm       Udupi Correspondent   ಕರಾವಳಿ

ಉಡುಪಿ ಜಿಲ್ಲಾ ಸಾರಿಗೆ ಪ್ರಾಧಿಕಾರವು ಅ.1ರಿಂದ ಜಾರಿಗೆ ಬರುವಂತೆ ಉಡುಪಿ ಜಿಲ್ಲೆಯಲ್ಲಿ ಸಂಚರಿಸುವ ಆಟೋ ರಿಕ್ಷಾಗಳಿಗೆ ಪ್ರಯಾಣ ದರವನ್ನು ಪರಿಷ್ಕರಿಸಿ ಆದೇಶ ಹೊರಡಿಸಿದ್ದು, ಅದರಂತೆ 1.5 ಕಿ.ಮೀ. ವರೆಗೆ ಕನಿಷ್ಠ ದರವನ್ನು 40 ರೂ.ಗೆ ಏರಿಸಲಾಗಿದೆ. 

ಉಡುಪಿ, ಸೆ.19 : ಉಡುಪಿ ಜಿಲ್ಲಾ ಸಾರಿಗೆ ಪ್ರಾಧಿಕಾರವು ಅ.1ರಿಂದ ಜಾರಿಗೆ ಬರುವಂತೆ ಉಡುಪಿ ಜಿಲ್ಲೆಯಲ್ಲಿ ಸಂಚರಿಸುವ ಆಟೋ ರಿಕ್ಷಾಗಳಿಗೆ ಪ್ರಯಾಣ ದರವನ್ನು ಪರಿಷ್ಕರಿಸಿ ಆದೇಶ ಹೊರಡಿಸಿದ್ದು, ಅದರಂತೆ 1.5 ಕಿ.ಮೀ. ವರೆಗೆ ಕನಿಷ್ಠ ದರವನ್ನು 40 ರೂ.ಗೆ ಏರಿಸಲಾಗಿದೆ. 

ಅನಂತರದ ಪ್ರತಿ ಕಿ.ಮೀ.ಗೆ ದರವನ್ನು 20 ರೂ.ಗೆ ನಿಗದಿ ಪಡಿಸಲಾಗಿದೆ. ಆದುದರಿಂದ ಜಿಲ್ಲೆಯ ಎಲ್ಲಾ ಆಟೋ ರಿಕ್ಷಾ ಚಾಲಕ, ಮಾಕರು ತಮ್ಮ ಅಟೋ ರಿಕ್ಷಾಗಳಿಗೆ ಕಾನೂನಿನ ಪ್ರಕಾರ ಅನುಮತಿ ಇರುವ ಫಾಗ್ ಮೀಟರ್ ಕಡ್ಡಾಯವಾಗಿ ಅಳವಡಿಸಿಕೊಂಡು ಮೇಲಿನ ದರಕ್ಕೆ ಅನುಗುಣವಾಗಿ ಕಾನೂನು ಮಾಪನ ಶಾಸ್ತ್ರ ಇಲಾಖೆಯಿಂದ ಸೆ.31ರೊಳಗೆ ಕಡ್ಡಾಯವಾಗಿ ಸೀಲ್ ಮಾಡಿಸಿಕೊಳ್ಳುವಂತೆ, ತಪ್ಪಿದರೆ ಕಾನೂನು ಕ್ರಮ ಎದುರಿಸುವಂತೆ ಉಡುಪಿ ಜಿಲ್ಲಾ ಪ್ರಾದೇಶಿಕ ಸಾರಿಗೆ ಅಧಿಕಾರಿ ಹಾಗೂ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಪ್ರಭಾರ ಕಾರ್ಯದರ್ಶಿ ರವಿಶಂಕರ್ ಪಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Auto fare increases to Rs 40 at Udupi for 1.5 Kms.