ಬ್ರೇಕಿಂಗ್ ನ್ಯೂಸ್
22-09-22 09:43 am HK News Desk ಕರಾವಳಿ
ಮಂಗಳೂರು, ಸೆ.22: ಎನ್ಐಎ ಅಧಿಕಾರಿಗಳು ಮಂಗಳೂರು ನಗರದ ಹಲವೆಡೆ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಬೆಳ್ಳಂಬೆಳಗ್ಗೆ ಎಸ್ಡಿಪಿಐ- ಪಿಎಫ್ಐ ಕಚೇರಿ ಸೇರಿದಂತೆ ನಾಯಕರ ಮನೆಗಳಿಗೆ ದಾಳಿ ನಡೆಸಿದ್ದಾರೆ.
ಇದೇ ವೇಳೆ, ಎನ್ಐಎ ದಾಳಿಯನ್ನು ಖಂಡಿಸಿ ಎಸ್ಡಿಪಿಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಸ್ಟೇಟ್ ಬ್ಯಾಂಕ್ ವೃತ್ತದ ಬಳಿಯ ನೆಲ್ಲಿಕಾಯಿ ರಸ್ತೆಯಲ್ಲಿರುವ ಎಸ್ಡಿಪಿಐ ಕಚೇರಿಗೆ ನಸುಕಿನಲ್ಲಿ ಮೂರು ಗಂಟೆ ವೇಳೆಗೆ ಮೀಸಲು ಪಡೆಯ ಭದ್ರತೆಯೊಂದಿಗೆ ಎನ್ಐಎ ಎಂಟ್ರಿ ಕೊಟ್ಟಿದೆ. ಇದರ ಬೆನ್ನಲ್ಲೇ ಎಸ್ಡಿಪಿಐ ಕಾರ್ಯಕರ್ತರು ಸೇರಿದ್ದು ಎನ್ಐಎ ಗೋ ಬ್ಯಾಕ್ ಘೋಷಣೆ ಕೂಗಿದ್ದಾರೆ.
ಮಂಗಳೂರಿನಲ್ಲಿ ಕಾವೂರು, ಕುಳೂರಿನ ಪಂಜಿಮೊಗರಿನಲ್ಲೂ ಎನ್ಐಎ ದಾಳಿಯಾಗಿದೆ. ಜೋಕಟ್ಟೆಯಲ್ಲಿ ಎಸ್ಡಿಪಿಐ ಈ ಹಿಂದಿನ ಜಿಲ್ಲಾಧ್ಯಕ್ಷ ಅತ್ತಾವುಲ್ಲಾ ಜೋಕಟ್ಟೆ ಅವರ ಮನೆಗೂ ದಾಳಿಯಾಗಿದೆ. ಯಾವ ಕಾರಣಕ್ಕಾಗಿ ದಾಳಿ ನಡೆದಿದೆ ಎನ್ನೋದು ಗೊತ್ತಾಗಿಲ್ಲ. ರಾಜ್ಯದ ವಿವಿಧ ಕಡೆ ದಾಳಿ ನಡೆದಿರುವುದರಿಂದ ಶಿವಮೊಗ್ಗದಲ್ಲಿ ಬಂಧಿತರಾಗಿರುವ ಐಸಿಸ್ ಶಂಕಿತ ಉಗ್ರರ ಪ್ರಕರಣ ಸಂಬಂಧಿಸಿ ದಾಳಿ ನಡೆದಿರಲೂ ಬಹುದು. ಎಎನ್ಐ ಅಧಿಕಾರಿಗಳಿಗೆ ಅರೆಸೇನಾ ಮೀಸಲು ಪಡೆಗಳು ಭದ್ರತೆ ನೀಡಿವೆ.
ಪೊಲೀಸ್ ಕಮಿಷನರ್ ಶಶಿಕುಮಾರ್ ಸೂಚನೆಯಂತೆ ಪ್ರತಿಭಟನೆ ನಡೆಸಿದ ಎಸ್ಡಿಪಿಐ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಾವೂರು, ಕುಳೂರು, ಜೋಕಟ್ಟೆಯಲ್ಲಿ ನೂರಕ್ಕೂ ಹೆಚ್ಚು ಮಂದಿಯನ್ನು ಬಸ್ಸಿನಲ್ಲಿ ತುಂಬಿಸಿ ವಶಕ್ಕೆ ಪಡೆದಿದ್ದಾರೆ. ನೆಲ್ಲಿಕಾಯಿ ರಸ್ತೆಯನ್ನು ಬಂದ್ ಮಾಡಲಾಗಿದ್ದು ಅಲ್ಲಿ ಪ್ರತಿಭಟನೆ ನಡೆಸಿದ ಹಲವರನ್ನು ಪೊಲೀಸರು ಹೊತ್ತೊಯ್ದಿದ್ದಾರೆ.
Sleuths of NIA raided the offices of SDPI and PFI in the city, early in the morning on Thursday September 22. The raid was conducted in offices around the city simultaneously. NIA sleuths raided in teams on the offices at Nellikai Road, Bajpe, Kulai and Kavoor.
05-02-25 06:39 pm
HK News Desk
Santosh Lad, PM Modi: ಪ್ರಧಾನಿ ಮೋದಿ ಒಬ್ಬ ಮನುಷ್...
05-02-25 04:44 pm
ಮೈಕ್ರೋ ಫೈನಾನ್ಸ್ ಕಿರುಕುಳ ; ರಾಜ್ಯದಲ್ಲಿ ಒಂದೇ ದಿನ...
05-02-25 12:29 pm
Haveri Nurse, Feviquick; ಬಾಲಕನ ಕೆನ್ನೆಯ ಗಾಯಕ್ಕ...
04-02-25 11:32 pm
Bangalore RTO, Luxury car tax: ತೆರಿಗೆ ಪಾವತಿಸದ...
04-02-25 11:04 pm
06-02-25 05:37 pm
HK News Desk
ಅಮೆರಿಕದಲ್ಲಿ ಅಕ್ರಮ ವಲಸಿಗರ ಗಡೀಪಾರು ; ಪ್ರಧಾನಿ ಮೋ...
06-02-25 02:21 pm
Kerala Suicide, Ragging: ಕೇರಳದಲ್ಲಿ 15ರ ಬಾಲಕ ಮ...
04-02-25 10:49 pm
Rashtrapati Bhavan, Poonam Gupta; ಜಗತ್ತಿನ ಎರಡ...
04-02-25 05:34 pm
Rail projects, Budget, Karnataka: ರೈಲ್ವೇಗೆ 2....
03-02-25 11:01 pm
05-02-25 10:51 pm
Mangalore Correspondent
SKG Bank robbery, Kinnigoli, Kotekar Robbery,...
05-02-25 10:43 pm
Musical program Swara Sanidhya, Mangalore; ಫೆ...
05-02-25 07:32 pm
Puttur News, Demolish, Ashok Rai: ಬಿಜೆಪಿ ಮುಖಂ...
05-02-25 06:46 pm
Mangalore gun misfire, congress, chittaranjan...
04-02-25 07:47 pm
06-02-25 04:35 pm
HK News Desk
Raichur Rape, Crime: ರಾಯಚೂರಿನಲ್ಲಿ ಎರಡನೇ ಕ್ಲಾಸ...
06-02-25 12:00 pm
Bangalore crime, Illicit affair: ಶೀಲ ಶಂಕಿಸಿ ನ...
05-02-25 04:29 pm
Ullal Police Station, Mangalore, Crime: ಪಿಎಸ್...
03-02-25 05:46 pm
Bangalore honeytrap case, Crime: ಮದುವೆಗೆ ವಧು...
02-02-25 09:00 pm