ಬ್ರೇಕಿಂಗ್ ನ್ಯೂಸ್
23-09-22 10:56 pm Mangalore Correspondent ಕರಾವಳಿ
ಮಂಗಳೂರು, ಸೆ.23: ದಸರಾ ಹಿನ್ನೆಲೆಯಲ್ಲಿ ಮಂಗಳೂರು ತಾಲೂಕು ವ್ಯಾಪ್ತಿಗೆ ಸಂಬಂಧಿಸಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ನಾಲ್ಕು ದಿನಗಳ ಹೆಚ್ಚುವರಿಯಾಗಿ ದಸರಾ ರಜೆಯನ್ನು ನೀಡಲಾಗಿದೆ. ಈ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯಿಂದ ಸೆ.28ರಿಂದ ಅ.1ರ ವರೆಗೆ ನಾಲ್ಕು ದಿನಗಳ ಹೆಚ್ಚುವರಿ ರಜೆ ಘೋಷಿಸಿ ಆದೇಶ ಮಾಡಲಾಗಿದೆ.
ದಸರಾ ರಜೆಯನ್ನು ಶೈಕ್ಷಣಿಕ ವೇಳಾಪಟ್ಟಿಯ ಪ್ರಕಾರ ಅ.3ರಿಂದ 16ರ ವರೆಗೆ ನಿಗದಿ ಪಡಿಸಲಾಗಿದೆ. ಆದರೆ ಮಂಗಳೂರಿನಲ್ಲಿ ಸೆ.26ರಿಂದಲೇ ಕುದ್ರೋಳಿ, ಮಂಗಳೂರು ದಸರಾ ಉತ್ಸವ ಇರುವುದರಿಂದ ಅದೇ ಸಂದರ್ಭದಲ್ಲಿ ರಜೆ ನೀಡಬೇಕೆಂದು ಒತ್ತಾಯ ಕೇಳಿಬಂದಿತ್ತು. ಇದಕ್ಕೆ ಪೂರಕವಾಗಿ ಮಂಗಳೂರಿನ ಶಾಸಕ ವೇದವ್ಯಾಸ ಕಾಮತ್, ಶಿಕ್ಷಣ ಸಚಿವರಿಗೂ ಮನವಿ ನೀಡಿದ್ದರು. ಅದರಂತೆ, ಜಿಲ್ಲಾಧಿಕಾರಿಗಳು ಮಂಗಳೂರಿನ ಮಟ್ಟಿಗೆ ರಜೆಯನ್ನು ಸೆ.26ರಿಂದ ಅ.10ರ ವರೆಗೆ ಮಾಡಬಹುದೆಂದು ಶಿಕ್ಷಣ ಸಚಿವರು ಸೂಚನೆ ನೀಡಿದ್ದರು. ಅದನ್ನೇ ಅನುಸರಿಸಿ ಕೆಲವು ಖಾಸಗಿ ಶಾಲೆಗಳು ಈಗಾಗಲೇ ಸೆ.27ರಿಂದ ತೊಡಗಿ ಅ.10ರ ವರೆಗೆ ರಜೆ ನೀಡಲು ಮುಂದಾಗಿತ್ತು.
ಆದರೆ ಇದರ ನಡುವೆಯೇ ಶಿಕ್ಷಣ ಇಲಾಖೆಯಿಂದ ಮಂಗಳೂರು ತಾಲೂಕು ವ್ಯಾಪ್ತಿಗೆ ಸಂಬಂಧಿಸಿ ಪ್ರಾಥಮಿಕ ಶಾಲೆ ಮತ್ತು ಪ್ರೌಢಶಾಲೆಗಳಿಗೆ ನವರಾತ್ರಿ ಹಬ್ಬದ ಆಚರಣೆಗೆ ಪೂರಕವಾಗುವಂತೆ ದಸರಾ ರಜೆಯನ್ನು ಸೆ.28ರಿಂದ ಅ.1ರ ವರೆಗೆ ಹೆಚ್ಚುವರಿಯಾಗಿ ನಾಲ್ಕು ದಿನಗಳ ಕಾಲ ನೀಡಲು ಆದೇಶ ಮಾಡಲಾಗಿದೆ. ಇದರ ನಡುವೆ ಅ.2ರಂದು ಮಹಾತ್ಮ ಗಾಂಧಿ ಜಯಂತಿಯನ್ನು ಶಾಲೆಯಲ್ಲಿ ಆಚರಣೆ ಮಾಡಬೇಕು. ಮತ್ತು ಹೆಚ್ಚುವರಿ ನೀಡಿರುವ ರಜೆಗಳನ್ನು ನವೆಂಬರ್ ತಿಂಗಳಲ್ಲಿ ಶನಿವಾರ ಪೂರ್ತಿ ತರಗತಿ ನಡೆಸುವ ಮೂಲಕ ಸರಿದೂಗಿಸಬೇಕು ಎಂದು ಸೂಚಿಸಲಾಗಿದೆ.
Mangalore Dasara 2022, extra 4 days holidays for schools ordered by the Education department. With Mangaluru Dasara beginning from September 26, holidays have been declared for all primary and high school students from September 28 to October 16.
13-07-25 08:37 pm
HK News Desk
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
ಬೀದಿನಾಯಿಗಳಿಗೆ ಬಿರಿಯಾನಿ ಭಾಗ್ಯ ; ಶಾಲೆಗಳಲ್ಲಿ ಮಕ...
12-07-25 07:07 pm
ಧರ್ಮಸ್ಥಳ ಘಟನೆ ; ಒಬ್ಬ ವ್ಯಕ್ತಿಯ ಪರವಾಗಿ ವಕೀಲರು ದ...
11-07-25 06:36 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm