ಬ್ರೇಕಿಂಗ್ ನ್ಯೂಸ್
26-09-22 10:17 pm Mangalore Correspondent ಕರಾವಳಿ
ಮಂಗಳೂರು, ಸೆ.26 : ಐದು ತಿಂಗಳಿನಿಂದ ವೇತನ ಪಾವತಿಸದೆ ಸತಾಯಿಸುತ್ತಿರುವ ಶಿಕ್ಷಣ ಇಲಾಖೆಯ ವಿರುದ್ಧ ಆಕ್ರೋಶಗೊಂಡ ದ.ಕ. ಜಿಲ್ಲೆಯ ಪ್ರಾಥಮಿಕ ಮತ್ತು ಪ್ರೌಢಶಾಲಾ ಅತಿಥಿ ಶಿಕ್ಷಕರು ಹಂಪನಕಟ್ಟೆಯ ಮಿನಿ ವಿಧಾನಸೌಧದ ಮುಂಭಾಗ ಧರಣಿ ನಡೆಸಿದ್ದಾರೆ.
ಬಾಕಿ ವೇತನ ತಕ್ಷಣ ಬಿಡುಗಡೆಗೊಳಿಸುವಂತೆ ಪಟ್ಟು ಹಿಡಿದು ಪ್ರತಿಭಟನೆ ನಡೆಸಿದ್ದಾರೆ. ಉದ್ಯೋಗ ಭದ್ರತೆ ನೀಡಬೇಕು, ತಿಂಗಳಿಗೆ ಕನಿಷ್ಟ 22,000 ರೂಪಾಯಿ ವೇತನ ನೀಡುವುದು, ಮಹಿಳಾ ಶಿಕ್ಷಕಿಯರಿಗೆ ಹೆರಿಗೆ ರಜೆ ಸೌಲಭ್ಯ ಒದಗಿಸುವುದು, ವರ್ಷದ 12 ತಿಂಗಳು ವೇತನ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಬೆಳಗ್ಗಿನಿಂದ ಸಂಜೆಯ ವರಗೂ ಧರಣಿ ನಡೆದಿದ್ದು ಜಿಲ್ಲೆಯ ವಿವಿಧೆಡೆಯ 300 ಕ್ಕೂ ಹೆಚ್ಚು ಅತಿಥಿ ಶಿಕ್ಷಕರು ಪಾಲ್ಗೊಂಡಿದ್ದರು.


ಈ ನಡುವೆ, ಪ್ರತಿಭಟನೆಗೆ ಮಣಿದ ಜಿಲ್ಲಾಡಳಿತ ಮತ್ತು ಶಿಕ್ಷಣ ಇಲಾಖೆಯ ಆಯುಕ್ತರು ಮಂಗಳೂರು ತಾಲೂಕು ವ್ಯಾಪ್ತಿಯ ಇಬ್ಬರು ಕ್ಷೇತ್ರ ಶಿಕ್ಷಣಾಧಿಕಾರಿಗಳನ್ನು ಧರಣಿ ನಿರತರೊಂದಿಗೆ ಮಾತುಕತೆಗೆ ಕಳುಹಿಸಿಕೊಟ್ಟರು. 'ಬಾಕಿ ವೇತನ ಈಗಾಗಲೇ ಬಿಡುಗಡೆಗೊಂಡಿದೆ. ಎರಡು ದಿನಗಳಲ್ಲಿ ಶಿಕ್ಷಕರ ಖಾತೆಗೆ ಜಮಾ ಮಾಡಲಾಗುವುದು' ಎಂದು ಭರವಸೆ ನೀಡಿದರು. ಎರಡು ದಿನಗಳಲ್ಲಿ ಬಾಕಿ ವೇತನ ಸಂದಾಯ ಆಗದಿದ್ದಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಅನಿರ್ಧಿಷ್ಟ ಧರಣಿ ನಡೆಸುವ ತೀರ್ಮಾನದೊಂದಿಗೆ ಧರಣಿ ನಡೆಸುವ ಬಗ್ಗೆ ನಿರ್ಧಾರಕ್ಕೆ ಬರಲಾಗಿದೆ.


ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್, ಡಿವೈಎಫ್ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ, ಮುಖಂಡರಾದ ಸಂತೋಷ್ ಬಜಾಲ್, ಬಿ ಕೆ ಇಮ್ತಿಯಾಜ್, ಸಂತೋಷ್ ಬಜಾಲ್, ನವೀನ್ ಕೊಂಚಾಡಿ, ಕಾಂಗ್ರೆಸ್ ನಾಯಕ ಮಿಥುನ್ ರೈ, ಅತಿಥಿ ಶಿಕ್ಷಕರ ಸಂಘದ ಪುತ್ತೂರು ತಾಲೂಕು ಅಧ್ಯಕ್ಷೆ ಜಯಮಾಲ ಧರಣಿ ನಿರತರನ್ನು ಉದ್ದೇಶಿಸಿ ಮಾತನಾಡಿದರು. ಪ್ರಾಥಮಿಕ ಮತ್ತು ಪ್ರೌಢಶಾಲಾ ಅತಿಥಿ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷೆ ಚಂದ್ರಿಕಾ, ಕಾರ್ಯದರ್ಶಿ ಚಿತ್ರಲೇಖ ಕೆ, ಮುಖಂಡರಾದ ರೇವತಿ ಬಂಟ್ವಾಳ, ಸೌಮ್ಯ ಕಡಬ, ಕಾವ್ಯ ಸುಳ್ಯ, ಕವಿತಾ ನಾಯಕ್, ಜ್ಯೋತಿ ಮುಂತಾದವರು ಧರಣಿಯ ನೇತೃತ್ವ ವಹಿಸಿದ್ದರು.
Guest lectures protest in Mangalore for no increase in salary since five months.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
06-09-26 01:14 pm
HK News Desk
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
05-09-26 08:58 pm
HK News Staffer
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm