ಬ್ರೇಕಿಂಗ್ ನ್ಯೂಸ್
28-09-22 08:04 pm Mangalore Correspondent ಕರಾವಳಿ
ಉಳ್ಳಾಲ, ಸೆ.28 : ಚುನಾವಣೆಯಲ್ಲಿ ಇಪ್ಪತ್ತು, ಮೂವತ್ತು ಸಾವಿರ ಮತಗಳ ಅಂತರದಲ್ಲಿ ಗೆದ್ದವನಿಗೆ ಸಾಮೂಹಿಕ ಸೀಮಂತದಲ್ಲಿ ರಾಜಕೀಯ ಲಾಭ ಪಡೆಯುವ ಅಗತ್ಯತೆ ಇಲ್ಲ. ನಾಲ್ಕು ಜನ ಬಂದು ಬೊಬ್ಬೆ ಹೊಡೆದರೆ ಇಂತಹ ಮಾದರಿ ಕಾರ್ಯಕ್ರಮದ ಬಗ್ಗೆ ಊರಿಗೆ ಢಂಗುರ ಬಾರಿಸಿದಂತಾಯ್ತು. ಅವರಿಗೆ ನನ್ನ ಅಭಿನಂದನೆ ಎಂದು ಬಜರಂಗದಳದ ಕಾರ್ಯಕರ್ತರಿಗೆ ಶಾಸಕ ಯು.ಟಿ ಖಾದರ್ ಟಾಂಗ್ ನೀಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಿಶು ಅಭಿವೃದ್ಧಿ ಯೋಜನೆ ಮಂಗಳೂರು ಗ್ರಾಮಾಂತರ ತಾಲೂಕು ಮಟ್ಟದ ಪೋಷಣ್ ಮಾಸಾಚರಣೆ ಪ್ರಯುಕ್ತ ಬುಧವಾರ ಕೊಲ್ಯದ ನಾರಾಯಣಗುರು ಸಭಾಭವನದಲ್ಲಿ ನಡೆದ ಅನ್ನಪ್ರಾಶನ, ಪೌಷ್ಟಿಕ ಆಹಾರ ,ಶಿಶು ಪ್ರದರ್ಶನ ಹಾಗೂ ಸಾಮೂಹಿಕ ಸೀಮಂತ ಕಾರ್ಯಕ್ರಮವನ್ನುದ್ದೇಶಿಸಿ ಅವರು ಮಾತನಾಡಿದರು.


ಕಾರ್ಯಕ್ರಮ ಆರಂಭಕ್ಕೂ ಮೊದಲು ಸಭಾಂಗಣದ ಹೊರಗೆ ಹಾಕಲಾಗಿದ್ದ ಫ್ಲೆಕ್ಸ್ ವಿಚಾರದಲ್ಲಿ ಬಜರಂಗದಳದ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಫ್ಲೆಕ್ಸಲ್ಲಿ ಉಳ್ಳಾಲ ಶಾಸಕ ಯು.ಟಿ ಖಾದರ್ ಮತ್ತು ಅವರ ಪಕ್ಕದಲ್ಲಿ ಸ್ಥಳೀಯ ಹಿಂದು ಗರ್ಭಿಣಿ ಮಹಿಳೆಯೋರ್ವರ ಭಾವಚಿತ್ರ ಹಾಕಲಾಗಿತ್ತು. ಕಾರ್ಯಕ್ರಮದ ಆಯೋಜಕರು ಫ್ಲೆಕ್ಸ್ ನಲ್ಲಿ ಸ್ಥಳೀಯ ಹಿಂದು ಕಾರ್ಯಕರ್ತನ ಸಹೋದರಿ ಗರ್ಭಿಣಿಯಾಗಿದ್ದ ಭಾವಚಿತ್ರವನ್ನ ಅನುಮತಿ ಇಲ್ಲದೆ ಜಾಲತಾಣದಿಂದ ನಕಲು ಮಾಡಿ ಮುದ್ರಿಸಿದ್ದರು. ಇದರ ವಿರುದ್ಧ ಬಜರಂಗದಳದ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ ಪರಿಣಾಮ ಕಾರ್ಯಕ್ರಮ ಆಯೋಜಕರು ಫ್ಲೆಕ್ಸನ್ನ ತೆರವುಗೊಳಿಸಿದ್ದರು.


ಸಾಮೂಹಿಕ ಸೀಮಂತ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಖಾದರ್, ಗರ್ಭಿಣಿಯರಿಗೆ ಅಗತ್ಯ ಉಳ್ಳ ಅರ್ಥಪೂರ್ಣ ಕಾರ್ಯಕ್ರಮವನ್ನ ಆಯೋಜಿಸಲಾಗಿದೆ. ಸೇರಿರುವ ಗರ್ಭಿಣಿಯರನ್ನ ಉದ್ದೇಶಿಸಿ ಮಾತನಾಡಿದ ಅವರು ಟೆನ್ಷನ್ ರಹಿತ ಆರೋಗ್ಯವಂತ ಮಗು ಮತ್ತು ತಾಯಂದಿರು ಸಮಾಜದಲ್ಲಿ ರೂಪುಗೊಳ್ಳಲಿ ಎಂದು ಹಾರೈಸಿದರು.
ಶಾಸಕ ಖಾದರ್ ಅವರು ಮಕ್ಕಳಿಗೆ ಅನ್ನಪ್ರಾಶನ ನಡೆಸಿದರು. ಸುಮಂಗಲೆಯರಿಂದ ಗರ್ಭಿಣಿಯರಿಗೆ ಬಾಗಿನ, ಫಲ, ಪುಷ್ಪ, ಉಡುಗೊರೆ, ಆರತಿ ಎತ್ತಿ ಸಾಮೂಹಿಕ ಸೀಮಂತ ನಡೆಸಲಾಯಿತು.
Banner of a pregnant woman without permission at Ullal, UT Khader slams Bajarangdal members.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
06-09-26 01:14 pm
HK News Desk
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
05-09-26 08:58 pm
HK News Staffer
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm