ಬ್ರೇಕಿಂಗ್ ನ್ಯೂಸ್
28-09-22 09:41 pm Mangalore Correspondent ಕರಾವಳಿ
ಮಂಗಳೂರು, ಸೆ.28: ಪಿಎಫ್ಐ ಸೇರಿದಂತೆ ಎಂಟು ಸಹವರ್ತಿ ಸಂಘಟನೆಗಳನ್ನು ಬ್ಯಾನ್ ಮಾಡಿರುವ ಹಿನ್ನೆಲೆಯಲ್ಲಿ ಮಂಗಳೂರು ನಗರದ ಪಿಎಫ್ಐ ಕಚೇರಿಗಳಿಗೆ ತೆರಳಿದ ಪೊಲೀಸರು, ಕಚೇರಿಯಲ್ಲಿರುವ ದಾಖಲೆ ಪತ್ರಗಳು, ಡಿಜಿಟಲ್ ಸಾಕ್ಷ್ಯಗಳನ್ನು ವಶಕ್ಕೆ ಪಡೆದು ಕಚೇರಿಗಳಿಗೆ ಬೀಗ ಜಡಿದಿದ್ದಾರೆ.
ಮಂಗಳೂರಿನ ಸ್ಟೇಟ್ ಬ್ಯಾಂಕ್ ವೃತ್ತದ ಬಳಿಯ ನೆಲ್ಲಿಕಾಯಿ ರಸ್ತೆಯಲ್ಲಿರುವ ಪಿಎಫ್ಐ ಕಚೇರಿಗೆ ಸಂಜೆ ವೇಳೆಗೆ ತೆರಳಿದ ಪೊಲೀಸರು ಅಲ್ಲಿ ಪರಿಶೀಲನೆ ನಡೆಸಿದ್ದಾರೆ. ಎರಡು ದಿನಗಳಿಂದ ಕಚೇರಿಗೆ ಬೀಗ ಹಾಕಲಾಗಿತ್ತು. ಹಾಕಿದ್ದ ಬೀಗವನ್ನು ಒಡೆದು ಒಳನುಗ್ಗಿದ ಪೊಲೀಸರು ಅಲ್ಲಿ ಪರಿಶೀಲನೆ ನಡೆಸಿದ್ದಾರೆ. ಡಿಜಿಟಲ್ ಸಾಕ್ಷ್ಯಗಳು, ಪಿಎಫ್ಐ ಕುರಿತ ಬರಹಗಳು, ಅಲ್ಲಿಯೇ ಇದ್ದ ಕ್ಯಾಂಪಸ್ ಫ್ರಂಟ್ ಕಚೇರಿ, ಅದರ ಹೆಸರಲ್ಲಿದ್ದ ಫಲಕಗಳು, ಬಾವುಟಗಳನ್ನು ವಶಕ್ಕೆ ಪಡೆದಿದ್ದಾರೆ.
ಅದೇ ಕಟ್ಟಡದಲ್ಲಿದ್ದ ವುಮನ್ಸ್ ಫ್ರಂಟ್ ಕಚೇರಿಗೂ ದಾಳಿ ನಡೆಸಿದ ಪೊಲೀಸರು ಅಲ್ಲಿರುವ ಕೆಲವೊಂದು ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಸ್ಥಳಕ್ಕೆ ಪೊಲೀಸ್ ಕಮಿಷನರ್ ಶಶಿಕುಮಾರ್ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಮಾಧ್ಯಮಕ್ಕೆ ಹೇಳಿಕೆ ನೀಡಿದ ಶಶಿಕುಮಾರ್, ಪಿಎಫ್ಐ ಮತ್ತು ಸಹವರ್ತಿ ಸಂಘಟನೆಗಳನ್ನು ಬ್ಯಾನ್ ಮಾಡಿರುವುದರಿಂದ ಅವುಗಳ ಕಚೇರಿಯನ್ನು ಸೀಜ್ ಮಾಡುವಂತೆ ರಾಜ್ಯ ಸರಕಾರದಿಂದ ಸೂಚನೆ ಬಂದಿತ್ತು. ಸಂಘಟನೆಗಳ ಕಚೇರಿಗಳನ್ನು ಬೀಗ ಜಡಿದು ಸೀಲ್ ಮಾಡಲಾಗಿದೆ. ಮಂಗಳೂರು ನಗರ ಉಪವಿಭಾಗದ ಮೂರು ಕಡೆ ಕಾರ್ಯಾಚರಣೆ ನಡೆಸಲಾಗಿದೆ.
ಸಂಘಟನೆಗಳಿಗೆ ಸಂಬಂಧಿಸಿದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಯಾವೆಲ್ಲ ವಸ್ತುಗಳನ್ನು ವಶಕ್ಕೆ ಪಡೆಯಬೇಕೆಂದು ಸೂಚನೆ ನೀಡಲಾಗಿದೆ. ಅದನ್ನು ಪಾಲನೆ ಮಾಡುತ್ತೇವೆ. ಅದರಂತೆ ಕಚೇರಿಗಳನ್ನು ಸೀಜ್ ಮಾಡಲಾಗುತ್ತದೆ ಎಂದು ಹೇಳಿದರು.
ಉಳಿದಂತೆ, ಪಣಂಬೂರು ಠಾಣೆ ವ್ಯಾಪ್ತಿಯ ಕಸಬಾ ಬೆಂಗ್ರೆ, ಸುರತ್ಕಲ್ ಠಾಣೆ ವ್ಯಾಪ್ತಿಯ ಚೊಕ್ಕಬೆಟ್ಟು, ಕಾಟಿಪಳ್ಳ, ಬಜ್ಪೆ ಠಾಣೆ ವ್ಯಾಪ್ತಿಯ ಅಡ್ಡೂರು, ಕಿನ್ನಿಪದವು, ಉಳ್ಳಾಲ ಠಾಣೆ ವ್ಯಾಪ್ತಿಯ ಕೆಸಿ ರೋಡ್, ಕೊಣಾಜೆ ಠಾಣೆ ವ್ಯಾಪ್ತಿಯ ಇನೋಳಿ, ಮಂಗಳೂರು ಗ್ರಾಮಾಂತರ ಠಾಣೆ ವ್ಯಾಪ್ತಿಯ ಮಲ್ಲೂರು, ಪಾಂಡೇಶ್ವರ ಠಾಣೆ ವ್ಯಾಪ್ತಿಯ ನೆಲ್ಲಿಕಾಯಿ ರಸ್ತೆ, ಬಂದರು ಠಾಣೆ ವ್ಯಾಪ್ತಿಯ ಕುದ್ರೋಳಿ ಕರ್ಬಾಳ ರಸ್ತೆಯಲ್ಲಿರುವ ಪಿಎಫ್ಐ ಕಚೇರಿಗಳಿಗೆ ಬೀಗ ಹಾಕಿ ಪೊಲೀಸರು ಸೀಲ್ ಹೊಡೆದಿದ್ದಾರೆ. ಬಂದರು ಠಾಣೆ ಬಳಿಯ ಅಜೀಜುದ್ದೀನ್ ರಸ್ತೆಯಲ್ಲಿರುವ ಸಿಎಫ್‌ಐ ಕಚೇರಿ, ರಾವ್ ಅಂಡ್ ರಾವ್ ಸರ್ಕಲ್ ಬಳಿಯಿರುವ ಇನ್ಫಾರ್ಮೇಶನ್ ಅಂಡ್ ಎಂಪವರ್ ಮೆಂಟ್ ಕಚೇರಿಗೂ ಬೀಗ ಜಡಿಯಲಾಗಿದೆ. ಕೇಂದ್ರ ಸರಕಾರ ನಿಷೇಧ ಮಾಡಿರುವ ಎಂಟು ಸಂಘಟನೆಗಳ ಕಚೇರಿಗಳನ್ನು ಸೀಜ್ ಮಾಡಲು ರಾಜ್ಯ ಸರಕಾರ ಪೊಲೀಸರಿಗೆ ಸೂಚನೆ ನೀಡಿದೆ.
PFI ban in India, PFI offices in Mangalore near Nelikai road near state bank were sealed by Mangalore city Police. The PFI and its affiliate organisations have been declared an "unlawful association" under the Unlawful Activities (Prevention) Act (UAPA), the government said, citing the outfit's links with the Students Islamic Movement of India (SIMI), Jamat-ul-Mujahideen Bangladesh (JMB) and Islamic State or ISIS, and said the PFI is involved in several criminal and terror cases.
15-05-25 10:16 pm
HK News Desk
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
15-05-25 09:09 pm
HK News Desk
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
15-05-25 08:04 pm
Mangalore Correspondent
Lashkar Terror HQ, Pakistan: ಧ್ವಂಸಗೊಂಡ ಲಷ್ಕರ್...
15-05-25 06:36 pm
Lokayukta raid, Mangalore: ಸರ್ವೆ ಇಲಾಖೆ ಮೇಲ್ವಿ...
15-05-25 03:33 pm
Kundapur Suicide: ಸಾಲಬಾಧೆ, ತಂದೆ- ಮಗ ಬಾವಿಗೆ ಹಾ...
15-05-25 01:34 pm
Manjunath Bhandary, Kukke Temple, Mangalore:...
14-05-25 08:05 pm
15-05-25 11:06 pm
HK News Desk
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm