ಬ್ರೇಕಿಂಗ್ ನ್ಯೂಸ್
30-09-22 09:05 pm Mangalore Correspondent ಕರಾವಳಿ
ಉಳ್ಳಾಲ, ಸೆ.30 : ಅಭಿವೃದ್ಧಿ ಕಾಮಗಾರಿಗಳಲ್ಲಿ ತಾರತಮ್ಯ ಧೋರಣೆ ಅನುಸರಿಸುತ್ತಾ ಬಂದಿರುವ ಉಳ್ಳಾಲ ಕ್ಷೇತ್ರದ ಶಾಸಕ ಯು.ಟಿ ಖಾದರ್ ಅವರ ರಾಜಕಾರಣ ಯುಗಾಂತ್ಯಗೊಳಿಸಲು ನಮ್ಮ ಪಕ್ಷದೊಳಗಿನ ಒಗ್ಗಟ್ಟಿನ ಮಂತ್ರವೇ ಸೂತ್ರವೆಂದು ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದಿರೆ ಕಾರ್ಯಕರ್ತರಿಗೆ ಕರೆ ನೀಡಿದರು.
ಪಂಡಿತ್ ಹೌಸ್ ಜಂಕ್ಷನ್ ನ ಮಾಯಾದೀಪ ಕಾಂಪ್ಲೆಕ್ಸಲ್ಲಿ ಶುಕ್ರವಾರ ಭಾರತೀಯ ಜನತಾ ಪಕ್ಷ ಮಂಗಳೂರು ವಿಧಾನಸಭಾ ಕ್ಷೇತ್ರದ ನೂತನ ಕಾರ್ಯಾಲಯ ಉದ್ಘಾಟಿಸಿ ಅವರು ಮಾತನಾಡಿದರು. ನವರಾತ್ರಿಯ ಶುಭ ದಿನದಂದೇ ಪಕ್ಷದ ನೂತನ ಕಾರ್ಯಾಲಯವು ಉದ್ಘಾಟನೆಗೊಂಡಿದ್ದು ಕಾರ್ಯಕರ್ತರಿಗೆ ವಿಶೇಷ ಶಕ್ತಿ ನೀಡಿದಂತಾಗಿದೆ. ಕಾರ್ಯಕರ್ತರ ಭಾವನೆಗೆ ಪೂರಕವಾದ ಕಾರ್ಯಾಲಯವನ್ನ ಕ್ಷೇತ್ರಾಧ್ಯಕ್ಷರು ನಿರ್ಮಿಸಿರುವುದು ಅಭಿನಂದನೀಯ. ಮುಂದಿನ ಬಾರಿ ಉಳ್ಳಾಲದಲ್ಲಿ ಬಿಜೆಪಿ ಪಕ್ಷದ ಶಾಸಕ ಗೆದ್ದು ಬರುವ ಸಂಕಲ್ಪ ತೊಟ್ಟು ಪ್ರತಿ ಕಾರ್ಯಕರ್ತರು ಶ್ರಮಿಸಬೇಕೆಂದು ಕರೆ ನೀಡಿದರು.
ಹೆಂಗಸರಿದ್ದಾರೆಂದು ಖಾದರ್ ಭಾಷಣ
ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಸತೀಶ್ ಕುಂಪಲ ಮಾತನಾಡಿ ಮೊನ್ನೆ ಕೊಲ್ಯದಲ್ಲಿ ನಡೆದ ಸರಕಾರಿ ಪ್ರಾಯೋಜಕತ್ವದ ಸೀಮಂತ ಕಾರ್ಯಕ್ರಮದಲ್ಲಿ ಅಲ್ಲಿ ನೆರೆದಿದ್ದ ಹೆಂಗಸರ ಧೈರ್ಯದಲ್ಲಿ ಶಾಸಕ ಯು.ಟಿ.ಖಾದರ್ ಭಾಷಣ ಮಾಡಿದ್ದಾರೆ. 20-30 ಸಾವಿರ ಮತಗಳಿಂದ ಗೆಲ್ಲುತ್ತಿದ್ದೇನೆಂದು ಬೀಗುತ್ತಿರುವ ನಿಮ್ಮನ್ನ ಅದೇ 20-30 ಸಾವಿರ ಮತಗಳ ಅಂತರದಲ್ಲೇ ಸೋಲುಣಿಸಲೂ ಕ್ಷೇತ್ರದ ಮತದಾರರಿಗೆ ತಿಳಿದಿದ್ದು ಮುಂಬರುವ ಮಾರ್ಚ್ ನಲ್ಲಿ ಖಾದರ್ ರಾಜಕೀಯ ಅಂತ್ಯಗೊಳ್ಳಲಿದೆ ಎಂದರು.
ಅಲ್ಪಸಂಖ್ಯಾತರ ಮತ ಬೇಟೆಗಾಗಿ ಉಳ್ಳಾಲದ ಕಡಲ್ಕೊರೆತ ಸಂತ್ರಸ್ತರನ್ನ ಕೋಟೆಕಾರಲ್ಲಿ ನೆಲೆಸಲು ಅವಕಾಶ ಕಲ್ಪಿಸಲು ಮಾಡುತ್ತಿರುವ ಸಂಚು ನಮಗೆ ತಿಳಿದಿದೆ. ನೀವು ಭಾರತ್ ಜೋಡೊ ಯಾತ್ರೆ ಮಾಡುವ ಬದಲು ಆದಷ್ಟು ಶೀಘ್ರನೇ ಕುತ್ತಾರು ವಿ.ವಿ. ರಸ್ತೆಯನ್ನ ಸಂಪೂರ್ಣಗೊಳಿಸುವಂತೆ ಆಗ್ರಹಿಸಿದರು.
ಬಿಜೆಪಿ ಕ್ಷೇತ್ರಾಧ್ಯಕ್ಷರಾದ ಚಂದ್ರಹಾಸ್ ಪಂಡಿತ್ ಹೌಸ್ ಸಭಾಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಉಪಾಧ್ಯಕ್ಷರಾದ ಸಂತೋಷ್ ಕುಮಾರ್ ಬೋಳಿಯಾರ್, ಕಸ್ತೂರಿ ಪಂಜ, ಮಾಜಿ ಶಾಸಕರಾದ ಕೆ.ಜಯರಾಮ ಶೆಟ್ಟಿ, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಧನಲಕ್ಷ್ಮಿ ಗಟ್ಟಿ , ಕ್ಷೇತ್ರ ಪ್ರಮುಖರಾದ ಜಯಶ್ರೀ ಕರ್ಕೇರ ಮೊದಲಾದವರು ಉಪಸ್ಥಿತರಿದ್ದರು.
Mangalore New BJP office inaugurated in Ullal.
15-05-25 10:16 pm
HK News Desk
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
15-05-25 09:09 pm
HK News Desk
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
15-05-25 08:04 pm
Mangalore Correspondent
Lashkar Terror HQ, Pakistan: ಧ್ವಂಸಗೊಂಡ ಲಷ್ಕರ್...
15-05-25 06:36 pm
Lokayukta raid, Mangalore: ಸರ್ವೆ ಇಲಾಖೆ ಮೇಲ್ವಿ...
15-05-25 03:33 pm
Kundapur Suicide: ಸಾಲಬಾಧೆ, ತಂದೆ- ಮಗ ಬಾವಿಗೆ ಹಾ...
15-05-25 01:34 pm
Manjunath Bhandary, Kukke Temple, Mangalore:...
14-05-25 08:05 pm
15-05-25 11:06 pm
HK News Desk
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm