ಬ್ರೇಕಿಂಗ್ ನ್ಯೂಸ್

Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿಂಗರತಿ ಲೈಂಗಿಕ ದೌರ್ಜನ್ಯ ; ಬೇಕಲ ಶಿಕ್ಷಣಾಧಿಕಾರಿ, ರೈಲ್ವೇ ಉದ್ಯೋಗಿ, ಜಮಾತೆ ಇಸ್ಲಾಮಿ, ಲೀಗ್ ಕಾರ್ಯಕರ್ತರು ಸೇರಿ ಹತ್ತು ಮಂದಿ ಪೊಲೀಸ್ ಬಲೆಗೆ, ಕಾಸರಗೋಡಿನಲ್ಲಿ ಸಂಚಲನ ಮೂಡಿಸಿದ ಪ್ರಕರಣ     |    ಬಂಗ್ಲೆಗುಡ್ಡೆ ಕಾಡಿನಲ್ಲಿ 9 ಕಡೆ ಮನುಷ್ಯನ ಎಲುಬು, ಬುರುಡೆಗಳು ಪತ್ತೆ, ಧರ್ಮಸ್ಥಳ ಪ್ರಕರಣಕ್ಕೆ ಮತ್ತೆ ತಿರುವು, ಎಸ್ಐಟಿ ಶೋಧ ಕಾರ್ಯ ಮುಂದುವರಿಕೆಬಂಗ್ಲೆಗುಡ್ಡೆ ಕಾಡಿನಲ್ಲಿ 9 ಕಡೆ ಮನುಷ್ಯನ ಎಲುಬು, ಬುರುಡೆಗಳು ಪತ್ತೆ, ಧರ್ಮಸ್ಥಳ ಪ್ರಕರಣಕ್ಕೆ ಮತ್ತೆ ತಿರುವು, ಎಸ್ಐಟಿ ಶೋಧ ಕಾರ್ಯ ಮುಂದುವರಿಕೆ    |    Mahesh Shetty Timarodi, Arms, FIR: ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಬೆಳ್ತಂಗಡಿಯಲ್ಲಿ ಮತ್ತೊಂದು ಎಫ್ಐಆರ್, ಅಕ್ರಮ ಶಸ್ತ್ರಾಸ್ತ್ರ ಕಾಯ್ದೆಯಡಿ ಕೇಸು ದಾಖಲು    |   

ಮಂಗಳೂರು ತಹಸೀಲ್ದಾರ್ ಪುರಂದರ ಹೆಗ್ಡೆ ಬಂಧನ ; ಲಂಚಕ್ಕೆ ಕೈಯೊಡ್ಡಿ ಲೋಕಾಯುಕ್ತ ಬಲೆಗೆ ಬಿದ್ದ ದೊಡ್ಡ ಕುಳ ! 

01-10-22 10:29 am       Mangalore Correspondent   ಕರಾವಳಿ

ಲಂಚದ ಹಣಕ್ಕೆ ಬೇಡಿಕೆ ಒಡ್ಡಿದ್ದ ಆರೋಪದಲ್ಲಿ ಮಂಗಳೂರು ತಹಸೀಲ್ದಾರ್ ಪುರಂದರ್ ಹೆಗ್ಡೆ ಅವರನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ. 

ಮಂಗಳೂರು, ಅ.1 : ಲಂಚದ ಹಣಕ್ಕೆ ಬೇಡಿಕೆ ಒಡ್ಡಿದ್ದ ಆರೋಪದಲ್ಲಿ ಮಂಗಳೂರು ತಹಸೀಲ್ದಾರ್ ಪುರಂದರ್ ಹೆಗ್ಡೆ ಅವರನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ. 

ಮಂಗಳೂರಿನ ಮಿನಿ ವಿಧಾನ ಸೌಧದಲ್ಲಿರುವ ತಾಲೂಕು ಕಚೇರಿಗೆ ನಿನ್ನೆ ದಾಳಿ ನಡೆಸಿದ್ದ ಲೋಕಾಯುಕ್ತ ಅಧಿಕಾರಿಗಳು, ತಹಸೀಲ್ದಾರ್ ಅವರ ಸಹಾಯಕ ಅಧಿಕಾರಿ ಶಿವಾನಂದ ನಾಟೇಕರ್ ನನ್ನು ಬಂಧಿಸಿದ್ದರು. ಲಂಚ ಸ್ವೀಕರಿಸುವಾಗಲೇ ರೆಡ್ ಹ್ಯಾಂಡ್ ಆಗಿ ಅಧಿಕಾರಿ ಸಿಕ್ಕಿಬಿದ್ದಿದ್ದ.‌

ಜಾಗ ಮಾರಾಟಕ್ಕೆ ಸಲುವಾಗಿ ಎನ್ಓಸಿ ಕೇಳಿದ್ದ ಅರ್ಜಿದಾರನಲ್ಲಿ ಹತ್ತು ಸಾವಿರ ಲಂಚ ಕೇಳಿದ್ದ ಆರೋಪದಲ್ಲಿ ಲೋಕಾಯುಕ್ತಕ್ಕೆ ದೂರು ನೀಡಲಾಗಿತ್ತು. ಹಣಕ್ಕೆ ಬೇಡಿಕೆ ಇಟ್ಟಿದ್ದ ಅಧಿಕಾರಿಯನ್ನು ಲೋಕಾಯುಕ್ತ ರೆಡ್ ಹ್ಯಾಂಡ್ ಆಗಿ ಬಂಧಿಸಿತ್ತು. ಆರೋಪಿ ವಿಚಾರಣೆ ವೇಳೆ ತಹಸೀಲ್ದಾರ್ ಪರವಾಗಿ ಹಣ ಕೇಳಿದ್ದಾಗಿ ತಿಳಿಸಿದ್ದು ಅದರಂತೆ ತಹಸೀಲ್ದಾರ್ ಪುರಂದರ ಹೆಗ್ಡೆ ಅವರನ್ನು ವಿಚಾರಣೆಗೆ ಒಳಪಡಿಸಲಾಗಿತ್ತು. 

ಆರೋಪ ಕಂಡುಬಂದ ಹಿನ್ನೆಲೆಯಲ್ಲಿ ಶುಕ್ರವಾರ ರಾತ್ರಿಯೇ ತಹಸೀಲ್ದಾರ್ ಪುರಂದರ ಹೆಗ್ಡೆ ಅವರನ್ನು ಲೋಕಾಯುಕ್ತ ಬಂಧಿಸಿದ್ದು ನ್ಯಾಯಾಧೀಶರ ಮುಂದೆ ಹಾಜರು ಪಡಿಸಿ ಜೈಲಿಗಟ್ಟಿದೆ. ಲೋಕಾಯುಕ್ತ ಎಸ್ಪಿ ಲಕ್ಷ್ಮಿಗಣೇಶ್, ಡಿವೈಎಸ್ಪಿ ಚಲುವರಾಜ್ ನೇತೃತ್ವದಲ್ಲಿ ದಾಳಿ ನಡೆಸಲಾಗಿತ್ತು. ಇತ್ತೀಚೆಗೆ ಲೋಕಾಯುಕ್ತಕ್ಕೆ ಫುಲ್ ಪವರ್ ಸಿಕ್ಕ ಬಳಿಕ ಮೊದಲ ಬಾರಿಗೆ ಲೋಕಾಯುಕ್ತ ಮಂಗಳೂರಿನಲ್ಲಿ ರೈಡ್ ಮಾಡಿದ್ದು ಭ್ರಷ್ಟರ ಎದೆಯಲ್ಲಿ ನಡುಕ ಹುಟ್ಟಿಸಿದೆ.

Mangalore Mini Vidhana Soudha Tahsildhar Purandar Hedge has been arrested by Lokayukta for demanding bribe. Assistant Tahsildhar Shivanand also was trapped by officers while he was caught taking a bribe red handed.