ಬ್ರೇಕಿಂಗ್ ನ್ಯೂಸ್
02-10-22 08:07 pm Mangalore Correspondent ಕರಾವಳಿ
ಮಂಗಳೂರು, ಅ.2 : ಆಮ್ ಆದ್ಮಿ ಪಕ್ಷದ ದಕ್ಷಿಣ ಕನ್ನಡ ಜಿಲ್ಲಾ ಘಟಕದ ವತಿಯಿಂದ ನಾಗರಿಕ ಕುಂದುಕೊರತೆ ಹೆಸರಲ್ಲಿ ಪೋರ್ಟಲ್ ತೆರೆಯಲಾಗಿದ್ದು ಕರ್ನಾಟಕ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಮೈಕಲ್ ಎಫ್. ಸಲ್ದಾನ ಮಂಗಳೂರಿನಲ್ಲಿ ಅಧಿಕೃತವಾಗಿ ಬಿಡುಗಡೆ ಮಾಡಿದ್ದಾರೆ.
ನಾಗರಿಕರು ತಮ್ಮ ಸಮಸ್ಯೆಗಳು, ಸಾರ್ವಜನಿಕ ಕುಂದು ಕೊರತೆಗಳ ಬಗ್ಗೆ ಪೋರ್ಟಲ್ ನಲ್ಲಿ ದಾಖಲಿಸಬಹುದಾಗಿದ್ದು ಈ ಪೋರ್ಟಲ್ ಮಂಗಳೂರಿನಲ್ಲಿ ಸಂಚಲನ ತರಲಿದ್ದು, ಒಂದು ವರ್ಷದೊಳಗೆ ಇಡೀ ದೇಶಕ್ಕೆ ಮಾದರಿಯಾಗಲಿದೆ. ಈ ಪೋರ್ಟಲ್ ಆಡಳಿತ ವ್ಯವಸ್ಥೆಯ ಮೇಲೆ ಒತ್ತಡ ಹೇರುವ ಕೆಲಸ ಮಾಡುತ್ತದೆ. ಜನಪ್ರತಿನಿಧಿಗಳು ಜನಪರ ಕೆಲಸ ಮಾಡಲು ಕಾರಣವಾಗುತ್ತದೆ ಎಂದು ಮೈಕೆಲ್ ಸಲ್ದಾನ ಹೇಳಿದರು.
ಅರವಿಂದ್ ಕೇಜ್ರಿವಾಲ್ ಒಬ್ಬ ಹಾರ್ಡ್‌ಕೋರ್ ವೃತ್ತಿಪರ ವ್ಯಕ್ತಿ. ಅವರನ್ನು ನಾನು ಹತ್ತಿರದಿಂದ ಕಂಡಿದ್ದೇನೆ. ಅವರು ಮಾಹಿತಿ ಇಟ್ಟುಕೊಂಡು ಸಂಪೂರ್ಣ ಡೇಟಾದೊಂದಿಗೆ ಕಾರ್ಯ ನಿರ್ವಹಿಸುತ್ತಾರೆ. ಅಂಥವರ ನೇತೃತ್ವದ ಪಕ್ಷದೊಂದಿಗೆ ಕೈಜೋಡಿಸುವುದು ತುಂಬಾ ಹೆಮ್ಮೆಯ ವಿಚಾರ. ಇಂದಿನ ಆಡಳಿತದಲ್ಲಿ ಪಕ್ಷಾಂತರ ವಿರೋಧಿ ಕಾನೂನು ಬಹಳಷ್ಟು ದುರ್ಬಳಕೆಯಾಗುತ್ತಿದೆ. ಕಳೆದ ಒಂದು ವರ್ಷದಲ್ಲಿ 167 ಶಾಸಕರನ್ನು ಖರೀದಿಸಲಾಗಿದೆ ಮತ್ತು ಆರು ರಾಜ್ಯ ಸರ್ಕಾರಗಳನ್ನು ಬಲವಂತದಿಂದ ಪತನ ಮಾಡಲಾಗಿದೆ. ಇದರಿಂದ ದೇಶದ ಮೇಲೆ ಕೆಟ್ಟ ಪರಿಣಾಮ ಉಂಟಾಗುತ್ತದೆ ಎಂದು ನ್ಯಾಯಮೂರ್ತಿ ಮೈಕಲ್ ಎಫ್. ಸಲ್ದಾನ ಅಭಿಪ್ರಾಯ ಪಟ್ಟರು.
ಆಮ್ ಆದ್ಮಿ ಪಕ್ಷ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸಂತೋಷ ಕಾಮತ್ ಮಾತನಾಡಿ, ನಮ್ಮ ಪಕ್ಷ ಐದು ವಿಚಾರಗಳಿಗೆ ಹೆಚ್ಚು ಒತ್ತು ನೀಡುತ್ತದೆ. ಎಲ್ಲಾ ಮಕ್ಕಳಿಗೂ ವಿದ್ಯಾಭ್ಯಾಸದ ವ್ಯವಸ್ಥೆ ಸಿಗಬೇಕು, ಎಲ್ಲಾ ನಾಗರಿಕರಿಗೂ ಉತ್ತಮ ಆರೋಗ್ಯ ವ್ಯವಸ್ಥೆ ಸಿಗಬೇಕು, ಭ್ರಷ್ಟಾಚಾರದ ವಿರುದ್ಧ ಹೋರಾಡಿ ಭ್ರಷ್ಟಾಚಾರ ನಿರ್ಮೂಲನೆ ಮಾಡಬೇಕು. ಎಲ್ಲ ಜನತೆಗೂ ಮೂಲಸೌಕರ್ಯಗಳ ವ್ಯವಸ್ಥೆ ಕಲ್ಪಿಸಬೇಕು, ನಮ್ಮ ದೇಶದ ಮೇಲೆ ಗೌರವ ಅಭಿಮಾನದೊಂದಿಗೆ ಈ ದೇಶದಲ್ಲಿರುವುದಕ್ಕೆ ಹೆಮ್ಮೆ ಪಡಬೇಕು. ಈ ಪಂಚ ಸೂತ್ರ ನಮ್ಮ ಪಕ್ಷದ ಸಿದ್ಧಾಂತವಾಗಿದೆ ಎಂದು ಹೇಳಿದರು.
ಬಿಜೈ ಚರ್ಚ್ ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಂಬರುವ ವಿಧಾನಸಭಾ ಚುನಾವಣೆ ಹಾಗೂ ಪಾಲಿಕೆ ಚುನಾವಣೆಗೆ ಸಂಬಂಧಪಟ್ಟಂತೆ ಕೆಲವೊಂದು ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಘೋಷಿಸಲಾಯಿತು. ವೇದಿಕೆಯಲ್ಲಿ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಮಿತಿ ಸದಸ್ಯ ಅಶೋಕ ಅದಮಲೆ, ಆಮ್ ಆದ್ಮಿ ಪಕ್ಷದ ರಾಜ್ಯ ಜತೆ ಕಾರ್ಯದರ್ಶಿ ವಿವೇಕಾನಂದ ಸಾಲಿನ್ಸ್, ಆಮ್ ಆದ್ಮಿ ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಪುಚ್ಚಪಾಡಿ, ಮಹಿಳಾ ವಿಭಾಗದ ಅಧ್ಯಕ್ಷೆ ಬೆನೆಟ್ ನವಿತಾ ಮೊರಾಸ್ ಮುಂತಾದವರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಸಂಚಾಲಕ ವಿಜಯನಾಥ ವಿಠ್ಠಲ ಶೆಟ್ಟಿ, ಪುತ್ತೂರು ವಿಧಾನಸಭಾ ಕ್ಷೇತ್ರದ ಸಂಚಾಲಕ ವಿಶುಕುಮಾರ್, ಮಂಗಳೂರು ಉತ್ತರ ಕ್ಷೇತ್ರದ ಮುಖಂಡ ಸಂದೀಪ್ ಶೆಟ್ಟಿ, ದ.ಕ. ಜಿಲ್ಲಾ ಅಪ್ ಖಜಾಂಚಿ ಆವ್ರೆನ್ ಡಿಸೋಜಾ, ಕಚೇರಿ ಸಂಚಾಲಕ ರವಿಪ್ರಸಾದ್, ಜತೆ ಕಾರ್ಯದರ್ಶಿ ಡೆಸ್ಮಂಡ್ ಡಿಸೋಜಾ ಮತ್ತಿತರರು ಉಸ್ಥಿತರಿದ್ದರು.
ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಸಂಚಾಲಕ ಪ್ರಸಾದ್ ಬಜೀಲಕೆರಿ ಸ್ವಾಗತಿಸಿದರು. ಮಾಧ್ಯಮ ಸಂಚಾಲಕ ವೆಂಕಟೇಶ್ ಎನ್. ಬಾಳಿಗಾ ಮುಖ್ಯ ಅತಿಥಿಗಳ ಪರಿಚಯ ಮಾಡಿದರು. ಡೆಲನ್ ಲೋಬೊ ನಿರುಪಿಸಿದರು. ಬೆನೆಟ್ ನವಿತಾ ಮೊರಾಸ್ ವಂದಿಸಿದರು.
Former Justice (retired) of the Bombay High Court and Karnataka High Court, Justice Michael Saldanha inaugurated ‘Civic grievance portal’ an visionary initiative by the Aam Aadmi Party (AAP) Dakshina Kannada district here at Bejai church hall on Sunday, October 2.
15-05-25 10:16 pm
HK News Desk
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
15-05-25 09:09 pm
HK News Desk
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
15-05-25 08:04 pm
Mangalore Correspondent
Lashkar Terror HQ, Pakistan: ಧ್ವಂಸಗೊಂಡ ಲಷ್ಕರ್...
15-05-25 06:36 pm
Lokayukta raid, Mangalore: ಸರ್ವೆ ಇಲಾಖೆ ಮೇಲ್ವಿ...
15-05-25 03:33 pm
Kundapur Suicide: ಸಾಲಬಾಧೆ, ತಂದೆ- ಮಗ ಬಾವಿಗೆ ಹಾ...
15-05-25 01:34 pm
Manjunath Bhandary, Kukke Temple, Mangalore:...
14-05-25 08:05 pm
15-05-25 11:06 pm
HK News Desk
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm