ಬ್ರೇಕಿಂಗ್ ನ್ಯೂಸ್
12-10-22 07:07 pm Mangalore Correspondent ಕರಾವಳಿ
ಉಳ್ಳಾಲ, ಅ.12: ಸೋಮೇಶ್ವರ ಸಮುದ್ರ ತೀರದ ರುದ್ರಪಾದೆಯಿಂದ ಅಚಾನಕ್ಕಾಗಿ ಸಮುದ್ರಕ್ಕೆ ಬಿದ್ದ ವ್ಯಕ್ತಿಯನ್ನ ಸ್ಥಳದಲ್ಲೇ ಇದ್ದ ವಿದೇಶಿ ಪ್ರವಾಸಿಗನೊಬ್ಬ ರಕ್ಷಿಸಿದ ಘಟನೆ ನಡೆದಿದ್ದು, ಘಟನೆಯಲ್ಲಿ ಅಸ್ವಸ್ಥಗೊಂಡ ವ್ಯಕ್ತಿಯನ್ನು ವೆನ್ಲಾಕ್ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಸೋಮೇಶ್ವರ ರೈಲ್ವೇ ನಿಲ್ದಾಣದ ಬಳಿಯ ಬಾಡಿಗೆ ಮನೆ ನಿವಾಸಿ ಪ್ರವೀಣ್ ಚೆಟ್ಟಿಯಾರ್(41) ರಕ್ಷಿಸಲ್ಪಟ್ಟ ವ್ಯಕ್ತಿ. ಇಂದು ಮಧ್ಯಾಹ್ನದ ವೇಳೆ ಪ್ರವೀಣ್ ಅವರು ಸೋಮೇಶ್ವರ ಕಡಲ ತೀರದ ರುದ್ರ ಪಾದೆಯಲ್ಲಿ ವಿಹರಿಸುತ್ತಿದ್ದ ವೇಳೆ ಸಮುದ್ರಕ್ಕೆ ಬಿದ್ದಿದ್ದಾರೆ. ಈ ವೇಳೆ ಅಲ್ಲೇ ಮೀನಿಗೆ ಗಾಳ ಹಾಕುತ್ತಿದ್ದ ಸ್ವೀಡನ್ ದೇಶದ ಪ್ರವಾಸಿಗ ಆ್ಯಡಮ್ ಎಂಬಾತ ತಕ್ಷಣ ಸಮುದ್ರಕ್ಕೆ ಧುಮುಕಿ ಪ್ರವೀಣನ್ನ ಮೇಲಕ್ಕೆತ್ತಿ ಪ್ರಥಮ ಚಿಕಿತ್ಸೆ ನೀಡಿದ್ದಾರೆ. ನೀರು ಕುಡಿದು ತೀವ್ರ ಅಸ್ವಸ್ಥಗೊಂಡಿದ್ದ ಪ್ರವೀಣ ಅವರನ್ನು ಸ್ಥಳೀಯರು ಸೇರಿ ಮಂಗಳೂರಿನ ಜಿಲ್ಲಾಸ್ಪತ್ರೆಗೆ ದಾಖಲು ಮಾಡಿದ್ದಾರೆ. ಪ್ರವೀಣ್ ಅವರು ಸದ್ಯ ಪ್ರಾಣಾಪಾಯದಿಂದ ಪಾರಾಗಿದ್ದಾರೆಂದು ತಿಳಿದು ಬಂದಿದ್ದು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಪ್ರವೀಣ್ ಪ್ರಾಣ ರಕ್ಷಿಸಿದ ವಿದೇಶಿ ಪ್ರಜೆ ಆ್ಯಡಮ್ ಅವರ ಕಾರ್ಯದ ಬಗ್ಗೆ ಸ್ಥಳೀಯರು ಮತ್ತು ಪೊಲೀಸರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಒಂದೂವರೆ ತಿಂಗಳ ಭಾರತ ದೇಶದ ಪ್ರವಾಸದಲ್ಲಿರುವ ಆ್ಯಡಮ್ ಅವರು ಚೆನ್ನೈ ಇನ್ನಿತರ ಬೀಚ್ ಗಳಿಗೆ ಭೇಟಿ ನೀಡಿದ್ದು ನಿನ್ನೆ ಸೋಮೇಶ್ವರ ಬೀಚ್ ಆಗಮಿಸಿದ್ದು ಪ್ರವೀಣ್ ಪಾಲಿಗೆ ಆಪತ್ಬಾಂಧವನಾಗಿದ್ದಾರೆ.

ಸೋಮೇಶ್ವರ ಬೀಚಲ್ಲಿ ಆತ್ಮಹತ್ಯೆ, ನೀರಪಾಲಾಗುವ ಅವಘಡ ನಿರಂತರ ಆಗುತ್ತಿರುತ್ತದೆ. ಅನೇಕ ಸಂದರ್ಭಗಳಲ್ಲಿ ಇಲ್ಲಿ ಸಮುದ್ರ ಪಾಲಾಗುತ್ತಿದ್ದವರನ್ನ ಕರಾವಳಿ ಕಾವಲು ಪಡೆಯ ಜೀವ ರಕ್ಷಕ ಸಿಬ್ಬಂದಿ ರಕ್ಷಿಸಿದ್ದಾರೆ. ಆದರೆ ಇತ್ತೀಚಿನ ದಿನಗಳಲ್ಲಿ ಪ್ರವಾಸೋದ್ಯಮ ಇಲಾಖೆಯು ಈ ಪ್ರದೇಶದಲ್ಲಿ ಖಾಯಂ ಜೀವರಕ್ಷಕ ಸಿಬ್ಬಂದಿಗಳನ್ನ ನೇಮಿಸದೆ ನಿರ್ಲಕ್ಷ ವಹಿಸಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Man saved from drowning by foreign national at Someshwara beach at Ullal in Mangalore.
01-11-25 09:33 pm
HK News Desk
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
02-11-25 05:13 pm
HK News Desk
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
01-11-25 11:05 pm
Mangalore Correspondent
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ; ಫೈನಲ್ಸ್ ಮಾತ್ರ ಬ...
01-11-25 10:31 pm
ನೃತ್ಯ ಸಾಧಕಿ ರೆಮೋನಾ, ಶ್ವಾನ ಪ್ರೇಮಿ ರಜನಿ ಶೆಟ್ಟಿ,...
31-10-25 10:47 pm
MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm