ಬ್ರೇಕಿಂಗ್ ನ್ಯೂಸ್
16-10-22 12:18 pm Mangalore Correspondent ಕರಾವಳಿ
ಮಂಗಳೂರು, ಅ.16 : ಸುರತ್ಕಲ್ ಟೋಲ್ ಗೇಟ್ ವಿರೋಧಿ ಹೋರಾಟವನ್ನು ಹತ್ತಿಕ್ಕಲು ದಕ್ಷಿಣ ಕನ್ನಡ ಜಿಲ್ಲಾಡಳಿತ ಮುಂದಾಗಿದೆ. ಅ.18ರ ಹೋರಾಟಕ್ಕೆ ಭಾರೀ ಜನಬೆಂಬಲ ವ್ಯಕ್ತವಾಗಿರುವುದರಿಂದ ಪೊಲೀಸರು ಹೋರಾಟದ ಮುಂಚೂಣಿಯಲ್ಲಿರುವ ಪ್ರಮುಖರನ್ನು ಟಾರ್ಗೆಟ್ ಮಾಡಿದ್ದಾರೆ. ನೂರಕ್ಕೂ ಹೆಚ್ಚು ಪ್ರಮುಖರ ಮನೆಗಳಿಗೆ ನುಗ್ಗಿ ನೊಟೀಸ್ ನೀಡತೊಡಗಿದ್ದಾರೆ. ಹೋರಾಟ ಕೈಬಿಡುವಂತೆ ಬಾಂಡ್ ಬರೆದುಕೊಡುವಂತೆ ತಾಕೀತು ಮಾಡಿದ್ದಾರೆ.
ಎರಡು ಲಕ್ಷ ರೂಪಾಯಿ ಬಾಂಡ್ ಕೊಡಬೇಕು, ಸರ್ಕಾರಿ ಅಧಿಕಾರಿಯ ಜಾಮೀನಿನೊಂದಿಗೆ ಪೊಲೀಸ್ ಕಮಿಷನರ್ ಕಚೇರಿಗೆ ಹಾಜರಾಗುವಂತೆ ಸುರತ್ಕಲ್ ಪೊಲೀಸರು ಸೂಚನೆ ನೀಡಿದ್ದಾರೆ. ಅಕ್ಟೋಬರ್ 18ರಂದು ಸುರತ್ಕಲ್ ಟೋಲ್ ತೆರವುಗೊಳಿಸುವ ನಿರ್ಣಾಯಕ ಹೋರಾಟಕ್ಕೆ ಕರೆ ನೀಡಿದ್ದು ಅಂದು ಸಾವಿರಾರು ಜನರು ಮುತ್ತಿಗೆ ಹಾಕಿ ಟೋಲ್ ಗೇಟ್ ತೆರವುಗೊಳಿಸಲು ತೀರ್ಮಾನಿಸಲಾಗಿದೆ. ಈ ನಡುವೆ, ಜಿಲ್ಲಾಡಳಿತ ಹೆದ್ದಾರಿ ಅಧಿಕಾರಿಗಳ ಜೊತೆ ಮತ್ತು ಹೋರಾಟಗಾರರ ಜೊತೆಗೆ ಮಾತುಕತೆ ನಡೆಸಿತ್ತು. ಆದರೆ, ಹೋರಾಟಗಾರರು ಟೋಲ್ ಗೇಟ್ ತೆರವಿಗೆ ದಿನಾಂಕ ಘೋಷಿಸದ ಹೊರತು ಪ್ರತಿಭಟನೆ ಕೈಬಿಡಲ್ಲ ಎಂದಿದ್ದರು.

ಹೋರಾಟಕ್ಕೆ ಬಿಜೆಪಿ ಹೊರತುಪಡಿಸಿ ಉಳಿದೆಲ್ಲ ರಾಜಕೀಯ ಪಕ್ಷಗಳು, ಹಲವಾರು ಸಂಘ- ಸಂಸ್ಥೆಗಳು ಬೆಂಬಲ ನೀಡಿದ್ದು ಬಿಜೆಪಿ ಸರ್ಕಾರವ ಮೇಲೆ ತೀವ್ರ ಒತ್ತಡಕ್ಕೆ ಬಿದ್ದಿದೆ. ಸುರತ್ಕಲ್, ಮೂಡುಬಿದ್ರೆ, ಮೂಲ್ಕಿ, ಮಂಗಳೂರಿನ ವಿವಿಧೆಡೆ ಪ್ರಚಾರ ಅಭಿಯಾನ ನಡೆದಿದ್ದು ಐದು ಸಾವಿರಕ್ಕೂ ಹೆಚ್ಚು ಜನ ಸೇರುವ ಸಾಧ್ಯತೆ ಕಂಡುಬಂದಿದೆ. ಇದರಿಂದಾಗಿ ಹೋರಾಟವನ್ನೇ ಹತ್ತಿಕ್ಕುವ ಸರ್ವಾಧಿಕಾರಿ ಧೋರಣೆಯನ್ನು ಮಂಗಳೂರು ಪೊಲೀಸರ ಮೂಲಕ ಮಾಡಲಾಗುತ್ತಿದೆ. ರಾತ್ರೋರಾತ್ರಿ ಪೊಲೀಸರು ಕಾರ್ಯಾಚರಣೆಗೆ ಇಳಿದಿದ್ದು ಮಹಿಳಾ ಹೋರಾಟಗಾರರ ಮನೆಗೆ ಮಧ್ಯರಾತ್ರಿ ತೆರಳಿ ನೋಟೀಸ್ ನೀಡಿದ್ದಾರೆ. ಕಾಂಗ್ರೆಸ್ ನಾಯಕಿ, ಹೋರಾಟಗಾರ್ತಿ ಪ್ರತಿಭಾ ಕುಳಾಯಿ ಮನೆಗೂ ಮಧ್ಯರಾತ್ರಿ 11.45ರ ವೇಳೆಗೆ ಹೋಗಿದ್ದಾರೆ. ಇವರಲ್ಲದೆ, ಹೋರಾಟಕ್ಕೆ ಕೈಜೋಡಿಸಿರುವ ಸಾಮಾನ್ಯ ಮಹಿಳೆಯರು, ರಾಜಕೀಯ ಪಕ್ಷಗಳಲ್ಲಿ ಗುರುತಿಸಿಕೊಂಡಿರುವ ಪ್ರಮುಖರ ಮನೆಗಳಿಗೆ ಪೊಲೀಸರು ರಾತ್ರಿ ವೇಳೆ ತೆರಳಿ ನೋಟೀಸ್ ನೀಡಿದ್ದಾರೆ. ಆಮೂಲಕ ಹೋರಾಟಕ್ಕೆ ಮುಂದಾಗಿರುವವರ ಮೇಲೆ ಬೆದರಿಸುವ ತಂತ್ರ ಮಾಡಿದ್ದಾರೆ.

ಈ ಬಗ್ಗೆ ಮಂಗಳೂರು ಉತ್ತರ ಎಸಿಪಿ ಮಹೇಶ್ ಕುಮಾರ್ ಬಳಿ ಕೇಳಿದಾಗ, ನೋಟೀಸ್ ಕೊಟ್ಟಿರುವುದು ಮಾತ್ರ. ಅವರು ಬಹಿರಂಗವಾಗಿಯೇ ಟೋಲ್ ಗೇಟ್ ತೆರವು ಮಾಡುತ್ತೇವೆ ಎಂದು ಹೇಳಿ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡುವುದು, ಶಾಂತಿ ಭಂಗ ಮಾಡುವ ಸೂಚನೆ ಕೊಟ್ಟಿದ್ದಾರೆ. ಹಾಗಾಗಿ ಎಚ್ಚರಿಕೆ ನೋಟಿಸ್ ಕೊಡುತ್ತಿದ್ದೇವೆ. ಮಧ್ಯರಾತ್ರಿ ಮನೆಗೆ ಹೋಗಿರುವುದು ಗೊತ್ತಿಲ್ಲ ಎಂದು ಹೇಳಿದ್ದಾರೆ.
Police have cracked down on protesters of the Surathkal toll gate and have slapped notices forcibly on more than 100 of them by conducting a search and barging into homes in a midnight operation. The police have ordered the protesters to furnish a bond for Rs 2 lacs along with a government bail and also to report themselves at the Police Commissioner's office on Monday.
11-07-26 11:42 am
HK News Staffer
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 11:48 am
HK News Staffer
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 10:14 pm
HK News Staffer
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm