ಉಡುಪಿ ಶಾಸಕ ರಘುಪತಿ ಭಟ್ ಗೆ ಕೊರೋನಾ ದೃಢ

11-10-20 04:18 pm       Udupi Correspondent   ಕರಾವಳಿ

ಉಡುಪಿ ಶಾಸಕ ರಘುಪತಿ ಭಟ್ ಗೆ ಕೊರೋನಾ ಸೋಂಕು ದೃಢಪಟ್ಟಿದೆ. 

ಉಡುಪಿ, ಅಕ್ಟೋಬರ್ 11: ಉಡುಪಿ ಶಾಸಕ ರಘುಪತಿ ಭಟ್ ಗೆ ಕೊರೋನಾ ಸೋಂಕು ದೃಢಪಟ್ಟಿದೆ. 

ಕೋವಿಡ್ ಪರೀಕ್ಷೆಯಲ್ಲಿ ನನಗೆ ಸೋಂಕು ದೃಢವಾಗಿದೆ. ಆದರೆ, ಯಾವುದೇ ರೋಗ ಲಕ್ಷಣಗಳು ಇಲ್ಲ. ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗಿದ್ದೇನೆ ಎಂದು ತಿಳಿಸಿದ್ದಾರೆ. 

ಕಳೆದ ಕೆಲವು ದಿನಗಳಿಂದ ನನ್ನ ಜೊತೆ ಸಂಪರ್ಕದಲ್ಲಿದ್ದವರು ಎಲ್ಲಾ ಮುನ್ನೆಚ್ಚರಿಕೆ ವಹಿಸಿಬೇಕು ಎಂದು ವಿನಂತಿಸಿಕೊಳ್ಳುತ್ತೇನೆ ಎಂದು ವಾಟ್ಸಪ್ ಮೂಲಕ ತಮ್ಮ ಸದಸ್ಯರುಗಳಿಗೆ ತಿಳಿಸಿದ್ದಾರೆ.