ಪ್ರತಿಭಾ ಕುಳಾಯಿ ಬಗ್ಗೆ ಅವಹೇಳನ ; ಆರೋಪಿಗೆ ಜಾಮೀನು ನಿರಾಕರಣೆ, ಜೈಲಿಗೆ ಹಾಕಿದ ಕೋರ್ಟ್ 

28-10-22 11:02 pm       Mangalore Correspondent   ಕರಾವಳಿ

ಸುರತ್ಕಲ್ ಟೋಲ್‌ಗೇಟ್ ವಿರೋಧಿ ಹೋರಾಟದಲ್ಲಿ ಭಾಗಿಯಾಗಿದ್ದ ಕಾಂಗ್ರೆಸ್ ನಾಯಕಿ ಪ್ರತಿಭಾ ಕುಳಾಯಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಮಾನಹಾನಿಕರ ಪೋಸ್ಟ್ ಹಾಕಿದ್ದ ಆರೋಪಿ ಕೆ.ಆರ್. ಶೆಟ್ಟಿಗೆ ನ್ಯಾಯಾಲಯ ಜಾಮೀನು ನಿರಾಕರಣೆ ಮಾಡಿದೆ. 

ಮಂಗಳೂರು, ಅ.29 : ಸುರತ್ಕಲ್ ಟೋಲ್‌ಗೇಟ್ ವಿರೋಧಿ ಹೋರಾಟದಲ್ಲಿ ಭಾಗಿಯಾಗಿದ್ದ ಕಾಂಗ್ರೆಸ್ ನಾಯಕಿ ಪ್ರತಿಭಾ ಕುಳಾಯಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಮಾನಹಾನಿಕರ ಪೋಸ್ಟ್ ಹಾಕಿದ್ದ ಆರೋಪಿ ಕೆ.ಆರ್. ಶೆಟ್ಟಿಗೆ ನ್ಯಾಯಾಲಯ ಜಾಮೀನು ನಿರಾಕರಣೆ ಮಾಡಿದೆ. 

ಶುಕ್ರವಾರ ಆರೋಪಿಯನ್ನು ಮೂರನೇ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯ ಜಾಮೀನು ನಿರಾಕರಿಸಿ ನ್ಯಾಯಾಂಗ ಬಂಧನ ವಿಧಿಸಿದೆ.

ಪ್ರತಿಭಾ ಕುಳಾಯಿ ರಸ್ತೆಯಲ್ಲಿ ಮಲಗಿ ಪ್ರತಿಭಟನೆ ನಡೆಸಿದ ವಿಡಿಯೋ ಬಗ್ಗೆ ಅವಹೇಳನ ಮಾಡಿದ ಬಗ್ಗೆ ಮಂಗಳೂರಿನ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಶ್ಯಾಮಸುದರ್ಶನ ಭಟ್ ಮತ್ತು ಕೆ.ಆರ್ ಶೆಟ್ಟಿ ವಿರುದ್ಧ ಕೇಸು ದಾಖಲಾಗಿತ್ತು. ಆರೋಪಿ ಕೆ.ಆರ್. ಶೆಟ್ಟಿ ಗುರುವಾರ ವಕೀಲರ ಮೂಲಕ ಮಂಗಳೂರಿನ ನ್ಯಾಯಾಲಯಕ್ಕೆ ಶರಣಾಗಿದ್ದ. ಆದರೆ ನ್ಯಾಯಾಲಯವು ಆರೋಪಿಯನ್ನು ಒಂದು ದಿನದ ಪೊಲೀಸ್ ಕಸ್ಟಡಿಗೆ ನೀಡಿತ್ತು. ಶುಕ್ರವಾರ ಪೊಲೀಸರು ಆರೋಪಿಯನ್ನು ಮತ್ತೆ ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ ಜಾಮೀನು ನಿರಾಕರಿಸಿದ್ದು ನ್ಯಾಯಾಂಗ ಬಂಧನ ವಿಧಿಸಿದೆ. ಆತನನ್ನು ಪೊಲೀಸರು ಜೈಲಿಗೆ ಹಾಕಿದ್ದಾರೆ. ಇದೇ ವೇಳೆ, ಇನ್ನೊಬ್ಬ ಆರೋಪಿ ಶ್ಯಾಮಸುದರ್ಶನ ಭಟ್ ಪೊಲೀಸರ ಕೈಗೆ ಸಿಗದೆ ತಲೆಮರೆಸಿಕೊಂಡಿದ್ದು ನಿರೀಕ್ಷಣಾ ಜಾಮೀನು ಪಡೆಯಲು ಯತ್ನಿಸುತ್ತಿದ್ದಾನೆ.

Mangalore Deformation post against Prathiba Prathibha Kulal in Surathkal toll matter, accused sent to jail after his bail plea was rejected by the court.