ಬ್ರೇಕಿಂಗ್ ನ್ಯೂಸ್
31-10-22 10:41 pm Mangalore Correspondent ಕರಾವಳಿ
ಬೆಳ್ತಂಗಡಿ, ಅ.31 : ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅವರ ವಿರುದ್ಧ ಅಪಪ್ರಚಾರ ಮಾಡಿದ ಪ್ರಕರಣದಲ್ಲಿ ಕೆ.ಸೋಮನಾಥ ನಾಯಕ್ ಕೊನೆಗೂ ಜೈಲು ಸೇರಿದ್ದಾರೆ.
ಗುರುವಾಯನಕೆರೆ ನಾಗರಿಕ ಸೇವಾ ಟ್ರಸ್ಟ್ ಅಧ್ಯಕ್ಷ ಕೆ.ಸೋಮನಾಥ ನಾಯಕ್ ನಾಯಕ್ ಸೋಮವಾರ ಬೆಳ್ತಂಗಡಿ ನ್ಯಾಯಾಲಯಕ್ಕೆ ಶರಣಾಗಿದ್ದಾರೆ. ವೀರೇಂದ್ರ ಹೆಗ್ಗಡೆ ಅಕ್ರಮ ಆಸ್ತಿ ಗಳಿಸಿದ್ದಾರೆಂದು ಆರೋಪಿಸಿದ್ದ ಸೋಮನಾಥ ನಾಯಕ್ ಸಾಮಾಜಿಕ ಜಾಲತಾಣ ಸೇರಿದಂತೆ ಮಾಧ್ಯಮಗಳಲ್ಲಿ ಹೆಗ್ಗಡೆ ವಿರುದ್ಧ ಮಾತನಾಡಿದ್ದರು.


ಸೋಮನಾಥ ನಾಯಕ್ ವಿರುದ್ಧ ಹೆಗ್ಗಡೆ ಕುಟುಂಬ ಬೆಳ್ತಂಗಡಿ ಕೋರ್ಟ್‌ನಲ್ಲಿ ದಾವೆ ಹೂಡಿದ್ದು, ದೂರು ಆಲಿಸಿದ ಕೋರ್ಟ್ ಅಪಪ್ರಚಾರ ಮಾಡದಂತೆ ಪ್ರತಿಬಂಧಕಾಜ್ಞೆ ವಿಧಿಸಿತ್ತು. ಆದರೆ ಅದನ್ನು ಉಲ್ಲಂಘಿಸಿ ಆರೋಪ ಮುಂದುವರಿಸಿದ್ದ ಸೋಮನಾಥ ನಾಯಕ್ ಹೆಗ್ಗಡೆಯವರ ಬಗ್ಗೆ ಅಪಪ್ರಚಾರ ಮಾಡಿದ್ದರು. ಪತ್ರಿಕೆಗಳಲ್ಲಿ ಲೇಖನ ಬರೆಯುತ್ತಿದ್ದರು. ಕೋರ್ಟಿನಲ್ಲಿ ಪ್ರತಿ ದಾವೆ ಹೂಡಿ ವಾದ ಮಂಡಿಸಿದ್ದರು.


ವಿಚಾರಣೆ ನಡೆಸಿದ ಕೋರ್ಟ್ ಸೋಮನಾಥ ನಾಯಕ್ ಆರೋಪ ರುಜು ಪಡಿಸಲು ವಿಫಲವಾಗಿದ್ದಕ್ಕೆ 3 ತಿಂಗಳ ಸಜೆ ಮತ್ತು ಕ್ಷೇತ್ರಕ್ಕೆ 4.5 ಲಕ್ಷ ರೂ. ಪರಿಹಾರ ನೀಡಬೇಕು ಎಂದು ಆದೇಶಿಸಿತ್ತು. ಅಲ್ಲದೆ, ಸೋಮನಾಥ ನಾಯಕ್ ಆಸ್ತಿಯನ್ನು ಮುಟ್ಟುಗೋಲು ಹಾಕಲು ಆದೇಶ ಮಾಡಿತ್ತು. ಇದನ್ನು ಪ್ರಶ್ನಿಸಿ ಕೆ.ಸೋಮನಾಥ ನಾಯಕ್ ಹೈಕೋರ್ಟ್ ಮೊರೆ ಹೋಗಿದ್ದರು. ಆದರೆ ಹೈಕೋರ್ಟ್ ಬೆಳ್ತಂಗಡಿ ನ್ಯಾಯಾಲಯದ ಆದೇಶವನ್ನು ಎತ್ತಿ ಹಿಡಿದಿತ್ತು. ಆನಂತರ ಸುಪ್ರೀಂ ಕೋರ್ಟಿನಲ್ಲಿ ಪ್ರಶ್ನೆ ಮಾಡಲಾಗಿತ್ತು. ಕೆಳಗಿನ ಕೋರ್ಟ್ ಆದೇಶಕ್ಕೆ ತಡೆ ನೀಡಲು ನಿರಾಕರಿಸಿದ್ದರಿಂದ ಸುಪ್ರೀಂನಲ್ಲಿಯೂ ಹಿನ್ನಡೆ ಆಗಿತ್ತು.

ಹೀಗಾಗಿ ಸೋಮನಾಥ ನಾಯಕ್ ಸೋಮವಾರ ತಮ್ಮ ಬೆಂಬಲಿಗರು, ಅಭಿಮಾನಿಗಳ ಜೊತೆ ಮೆರವಣಿಗೆಯಲ್ಲಿ ಬಂದು ಬೆಳ್ತಂಗಡಿ ಕೋರ್ಟಿಗೆ ಶರಣಾಗಿದ್ದಾರೆ. ಜೊತೆಗಿದ್ದವರು ಸೋಮನಾಥ ನಾಯಕ್ ಗೆ ಜಯವಾಗಲಿ ಎಂದು ಹಾರೈಸಿ ಜೈಲಿಗೆ ಕಳಿಸಿಕೊಟ್ಟಿದ್ದಾರೆ.
The Supreme Court has upheld a lower court order sentencing Nagarika Seva Trust president Guruvayankere K. Somanath Nayak to three months of imprisonment and imposing a fine of ₹4.5 lakh on finding him guilty of disobeying an order of temporary injunction against publishing any statement impacting the reputation of D. Veerendra Heggade, pattadhikari of Shri Kshetra Dharmasthala.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm