ಬ್ರೇಕಿಂಗ್ ನ್ಯೂಸ್
01-11-22 07:20 pm Mangalore Correspondent ಕರಾವಳಿ
ಮಂಗಳೂರು, ನ.1 : ಎನ್ ಐಟಿಕೆ ಬಳಿಯ ಟೋಲ್ ಗೇಟ್ ತೆರವುಗೊಳಿಸಲು ಒತ್ತಾಯಿಸಿ ವಿವಿಧ ಸಂಘಟನೆಗಳು ನಡೆಸುತ್ತಿರುವ ಅಹೋರಾತ್ರಿ ಧರಣಿ ಪ್ರತಿಭಟನೆ ಮಂಗಳವಾರ 5ನೇ ದಿನ ಪೂರೈಸಿದ್ದು ಕನ್ನಡ ರಾಜ್ಯೋತ್ಸವ ಪ್ರಯುಕ್ತ ವಿಶೇಷವಾಗಿ ಧರಣಿ ನಡೆಸಲಾಗಿದೆ.
ಸುರತ್ಕಲ್ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ನೇತೃತ್ವದಲ್ಲಿ ಹಲವಾರು ಸಾಮಾಜಿಕ ಸಂಘಟನೆಗಳ ಬೆಂಬಲದೊಂದಿಗೆ ಪ್ರತಿಭಟನೆ ನಡೆಯುತ್ತಿದೆ. ಡಿವೈ ಎಫ್ ಐ, ಕಾಂಗ್ರೆಸ್, ಜೆಡಿಎಸ್, ದಸಂಸ, ಟ್ಯಾಕ್ಸಿ, ಕ್ಯಾಬ್ ಅಶೋಸಿಯೇಷನ್, ಬಸ್ ಮಾಲಕರ ಸಂಘ ಸೇರಿದಂತೆ ವಿವಿಧ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ. ನ.1ರ ಹಿನ್ನೆಲೆಯಲ್ಲಿ ಧರಣಿ ಸ್ಥಳದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಯಿತು. ಬೆಳಗ್ಗೆ ಧರಣಿ ಸ್ಥಳದಲ್ಲಿ ಕನ್ನಡ ಧ್ವಜಾರೋಹಣ ನಡೆಸಲಾಯಿ.


ಇದರ ನಿಮಿತ್ತ ಕವಿಗೋಷ್ಠಿ, ಮೇಘನಾ ಕುಂದಾಪುರ ಇವರಿಂದ ಗಾಯನ ಕಾರ್ಯಕ್ರಮ, ಕನ್ನಡ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಸಂಜೆ ಸೂರ್ಯಾಸ್ತವಾಗುತ್ತಿದ್ದಂತೆ ಧ್ವಜ ಅವರೋಹಣ ನಡೆಯಿತು. ಇದರ ನಡುವೆ, ಸಮಾನ ಮನಸ್ಕ ವಕೀಲರು ಕೂಡ ಧರಣಿ ಸ್ಥಳಕ್ಕೆ ಬಂದು ಪ್ರತಿಭಟನೆಗೆ ಕೈಜೋಡಿಸಿದರು. ಮಂಗಳೂರು ಜನಪರ ವಕೀಲರ ತಂಡದ ಬಿ. ಇಬ್ರಾಹಿಂ, ಯಶವಂತ ಮರೋಳಿ, ಎಸ್.ಪಿ ಚೆಂಗಪ್ಪ, ಟಿ. ನಾರಾಯಣ ಪೂಜಾರಿ, ಶಾಲಿನಿ, ವಸಂತ ಕಾರಂದೂರು, ರಾಮಚಂದ್ರ ಬಬ್ಬುಕಟ್ಟೆ, ನಿತಿನ್ ಕುತ್ತಾರ್, ಚರಣ್ ಶೆಟ್ಟಿ, ದಿನೇಶ್ ಹೆಗ್ಡೆ ಮತ್ತಿತರರು ಉಪಸ್ಥಿತರಿದ್ದರು.


ಮೂಲ್ಕಿ ಮೂಡಬಿದ್ರೆ ಕ್ಷೇತ್ರದ ಮಾಜಿ ಶಾಸಕ ಕೆ ಅಭಯಚಂದ್ರ ಜೈನ್, ಮಂಗಳೂರು ಉತ್ತರ ಮಾಜಿ ಶಾಸಕ ಮೊಯಿದೀನ್ ಬಾವಾ ಐದನೇ ದಿನವೂ ಪ್ರತಿಭಟನೆಯಲ್ಲಿ ಪಾಲ್ಗೊಂಡರು. ಡಿವೈಎಫ್ಐನ ಮುನೀರ್ ಕಾಟಿಪಳ್ಳ, ಬಿ.ಕೆ. ಇಮ್ತಿಯಾಜ್, ಸಾಮಾಜಿಕ ಹೋರಾಟಗಾರ ಎಂ. ಜಿ. ಹೆಗಡೆ, ಹಮ್ಮಬ್ಬ ಕಾಟಿಪಳ್ಳ, ಹಸನಬ್ಬ ಮಂಗಲಪೇಟೆ, ಧರ್ಮಾನಂದ ಶೆಟ್ಟಿಗಾರ್, ಬಜ್ಪೆ ಪಂಚಾಯತ್ ಮಾಜಿ ಅಧ್ಯಕ್ಷ ಶಾಹುಲ್ ಹಮೀದ್, ಸಾಲೆ ಮುಹಮ್ಮದ್, ದಯಾನಂದ ಶೆಟ್ಟಿ, ರಾಘವೇಂದ್ರ ರಾವ್ ಮತ್ತಿತರರು ಧರಣಿಯಲ್ಲಿ ನಿರತರಾಗಿದ್ದಾರೆ.
Mangalore The indefinite protest, led by Toll Gate Virodhi Horata Samithi against the Surathkal toll plaza, entered the fifth day.
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
14-05-26 10:49 am
HK News Staffer
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm