ಬ್ರೇಕಿಂಗ್ ನ್ಯೂಸ್
02-11-22 11:13 am Mangalore Correspondent ಕರಾವಳಿ
ಮಂಗಳೂರು, ನ.2: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡ ಆರೋಪಿಗಳಾದ ನಾಲ್ವರು ಪಿಎಫ್ಐ ಕಾರ್ಯಕರ್ತರ ಪತ್ತೆಗೆ ಎನ್ಐಎ ಲುಕ್ ಔಟ್ ನೋಟಿಸ್ ಜಾರಿ ಮಾಡಿದ್ದು ಸುಳಿವು ಕೊಟ್ಟವರಿಗೆ ಒಟ್ಟು 14 ಲಕ್ಷ ನಗದು ಬಹುಮಾನದ ಘೋಷಣೆ ಮಾಡಿದೆ.
ಮಹಮ್ಮದ್ ಮುಸ್ತಾಫ, ತುಫೈಲ್, ಉಮ್ಮರ್ ಫಾರೂಕ್, ಅಬುಬುಕ್ಕರ್ ಸಿದ್ಧೀಕ್ ತಲೆಮರೆಸಿಕೊಂಡ ಆರೋಪಿಗಳಾಗಿದ್ದು ಇವರ ಪತ್ತೆಗೆ ಲುಕ್ ಔಟ್ ನೋಟಿಸ್ ಜಾರಿ ಮಾಡಿದೆ. ಬೆಳ್ಳಾರೆ ನಿವಾಸಿ ಮೂಡುಮನೆ ಮಹಮ್ಮದ್ ಮುಸ್ತಫಾ ಬಗ್ಗೆ ಸುಳಿವು ನೀಡಿದರೆ ಐದು ಲಕ್ಷ ರೂ., ಮಡಿಕೇರಿ ಗದ್ದಿಗೆ ಮಸೀದಿ ಪಕ್ಕದ ನಿವಾಸಿ ತುಫೈಲ್ ಎಚ್.ಎಂ ಬಗ್ಗೆ ಸುಳಿವು ನೀಡಿದರೆ ಐದು ಲಕ್ಷ ರೂಪಾಯಿ ಬಹುಮಾನ ಘೋಷಿಸಲಾಗಿದೆ.


ಸುಳ್ಯದ ಕಲ್ಲುಮುಟ್ಲು ನಿವಾಸಿ ಉಮ್ಮರ್ ಫಾರೂಕ್ ಮತ್ತು ಬೆಳ್ಳಾರೆ ನಿವಾಸಿ ಅಬುಬಕ್ಕರ್ ಸಿದ್ಧಿಕ್ ಬಗ್ಗೆ ಸುಳಿವು ನೀಡಿದರೆ ಎರಡು ಲಕ್ಷ ರೂಪಾಯಿ ಬಹುಮಾನ ಘೋಷಿಸಲಾಗಿದೆ. ಆರೋಪಿಗಳು ನಿಷೇಧಿತ ಪಿಎಫ್ಐ ಸಂಘಟನೆಯ ಸಕ್ರಿಯ ಸದಸ್ಯರಾಗಿದ್ದು ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದ ಬಳಿಕ ತಲೆಮರೆಸಿಕೊಂಡಿದ್ದಾರೆ. ಜುಲೈ 27 ರಂದು ಬೆಳ್ಳಾರೆ ಪೇಟೆಯಲ್ಲಿ ಪ್ರವೀಣ್ ನೆಟ್ಟಾರು ಹತ್ಯೆ ನಡೆದಿತ್ತು. ಪ್ರಕರಣದಲ್ಲಿ ಒಟ್ಟು ಹತ್ತು ಮಂದಿ ಆರೋಪಿಗಳನ್ನು ರಾಜ್ಯ ಪೊಲೀಸರು ಮತ್ತು ಎನ್ ಐ ಎ ಅಧಿಕಾರಿಗಳ ಜಂಟಿ ಕಾರ್ಯಾಚರಣೆಯಲ್ಲಿ ಬಂಧಿಸಲಾಗಿತ್ತು. ಈ ನಡುವೆ, ಸೆ.28ರಂದು ಪಿಎಫ್ಐ ಸಂಘಟನೆಯನ್ನು ದೇಶಾದ್ಯಂತ ನಿಷೇಧಿಸಲಾಗಿತ್ತು. ಪಿಎಫ್ಐ ನಿಷೇಧ ಹಿನ್ನೆಲೆಯಲ್ಲಿ ಆ ಸಂಘಟನೆಯಲ್ಲಿ ಗುರುತಿಸಿದ್ದ ರಾಜ್ಯ ನಾಯಕರು, ಜಿಲ್ಲಾ ನಾಯಕರನ್ನು ಪೊಲೀಸರು ಬಂಧಿಸಿದ್ದರು. ಇದೀಗ ಪ್ರವೀಣ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಾಗಿ ಪಿಎಫ್ಐ ಸಂಘಟನೆಯಲ್ಲಿ ಗುರುತಿಸಿದ್ದ ನಾಲ್ವರ ಪತ್ತೆಗಾಗಿ ಪೊಲೀಸರು ಹುಡುಕಾಟ ನಡೆಸಿ, ಪತ್ತೆ ಸಾಧ್ಯವಾಗದೆ ಸುಳಿವು ಕೊಟ್ಟವರಿಗೆ ಬಹುಮಾನ ಘೋಷಿಸಿದ್ದು ದೇಶದ ಯಾವ ಮೂಲೆಯಲ್ಲಿ ಅವಿತಿದ್ದರೂ ಸುಳಿವು ಕೊಡಿ. ನಿಮ್ಮ ಮಾಹಿತಿ ಗೌಪ್ಯ ಇಡಲಾಗುವುದು ಎಂದು ಎನ್ಐಎ ಬೆಂಗಳೂರು ಕಚೇರಿಯಿಂದ ಹೊರಡಿಸಿದ ನೋಟೀಸಿನಲ್ಲಿ ತಿಳಿಸಲಾಗಿದೆ.
The National Investigating Agency (NIA), which is investigating the murder case of Hindu activist Praveen Nettaru that took place at Sullia of Dakshina Kannada has announced a reward for those who will provide information on four members of the now banned Popular Front of India (PFI), who are absconding.
01-11-25 09:33 pm
HK News Desk
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
01-11-25 07:27 pm
HK News Desk
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
01-11-25 11:05 pm
Mangalore Correspondent
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ; ಫೈನಲ್ಸ್ ಮಾತ್ರ ಬ...
01-11-25 10:31 pm
ನೃತ್ಯ ಸಾಧಕಿ ರೆಮೋನಾ, ಶ್ವಾನ ಪ್ರೇಮಿ ರಜನಿ ಶೆಟ್ಟಿ,...
31-10-25 10:47 pm
MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm