ಬ್ರೇಕಿಂಗ್ ನ್ಯೂಸ್
03-11-22 06:25 pm HK News Desk ಕರಾವಳಿ
ಮಂಗಳೂರು, ನ.3:ಕಾರು ಚಾಲಕನ ಎಡವಟ್ಟಿನಿಂದಾಗಿ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯೊಬ್ಬರಿಗೆ ಕಾರು ಡಿಕ್ಕಿಯಾದ ಘಟನೆ ಮುಲ್ಕಿ ಬಳಿಯ ಕಿನ್ನಿಗೋಳಿ ಪೇಟೆಯಲ್ಲಿ ನಡೆದಿದೆ.
ಕೆಮ್ರಾಲ್ ಮನೋಲಿ ಬಲ್ಲೆ ನಿವಾಸಿ ಜಯಂತಿ ಶೆಟ್ಟಿ(52) ಎಂಬ ಮಹಿಳೆ ತರಕಾರಿ ಹಿಡಿದುಕೊಂಡು ರಸ್ತೆ ಬದಿಯಿಂದ ನಡೆದು ಬರುತ್ತಿದ್ದಾಗ ಕಿನ್ನಿಗೋಳಿ ಕಡೆಯಿಂದ ಮೂಡುಬಿದ್ರೆಯತ್ತ ತೆರಳುತ್ತಿದ್ದ ಬ್ರೀಜಾ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿಯಾದ ರಭಸಕ್ಕೆ ಮಹಿಳೆ ಅನತಿ ದೂರಕ್ಕೆ ಎಸೆಯಲ್ಪಟ್ಟಿದ್ದು ಗಂಭೀರ ಗಾಯಗೊಂಡಿದ್ದಾರೆ. ಡಿಕ್ಕಿಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಮಹಿಳೆ ದೂರಕ್ಕೆ ಬಿದ್ದಿರುವುದು, ಕಾರು ಮನೆ ಪಕ್ಕದ ಕಂಪೌಂಡಿಗೆ ಡಿಕ್ಕಿ ಹೊಡೆದಿದ್ದು ಕಂಡುಬಂದಿದೆ.



ತೋಡಾರು ನಿವಾಸಿ ಅಬ್ದುಲ್ ಖಾದರ್ ಎಂಬವರು ತನ್ನ ಕಾರಿನಲ್ಲಿ ಏರ್ಪೋರ್ಟ್ ಹೋಗಿ ಕಿನ್ನಿಗೋಳಿ ಮೂಲಕ ಮೂಡುಬಿದ್ರೆ ರಸ್ತೆಯಲ್ಲಿ ತನ್ನ ಮನೆಯತ್ತ ತೆರಳುತ್ತಿದ್ದರು. ಕಾರಿನಲ್ಲಿ ಅಬ್ದುಲ್ ಖಾದರ್ ಕುಟುಂಬದ ನಾಲ್ಕು ಮಂದಿ ಇದ್ದು ಘಟನೆಯಲ್ಲಿ ಸಣ್ಣಪುಟ್ಟದಾಗಿ ಗಾಯಗೊಂಡಿದ್ದಾರೆ. ಕಿನ್ನಿಗೋಳಿಯ ಜನನಿಬಿಡ ಪ್ರದೇಶದಲ್ಲಿ ಘಟನೆ ನಡೆದಿದ್ದು, ಕಾರು ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದು ಮಹಿಳೆಗೆ ಡಿಕ್ಕಿಯಾಗಿದ್ದು ಕಂಡುಬಂದಿದೆ.
ಗಾಯಾಳುಗಳನ್ನು ಸ್ಥಳೀಯರು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮಹಿಳೆ ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದು ಅಪಾಯದಿಂದ ಪಾರಾಗಿದ್ದಾರೆ ಎಂದು ಮೂಲ್ಕಿ ಸಂಚಾರ ವಿಭಾಗದ ಪೊಲೀಸರು ತಿಳಿಸಿದ್ದಾರೆ.
Mangalore Shocking car accident at Kinnigoli Muki, woman thrown into air, injured seriously, video viral
01-11-25 09:33 pm
HK News Desk
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
02-11-25 05:13 pm
HK News Desk
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
01-11-25 11:05 pm
Mangalore Correspondent
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ; ಫೈನಲ್ಸ್ ಮಾತ್ರ ಬ...
01-11-25 10:31 pm
ನೃತ್ಯ ಸಾಧಕಿ ರೆಮೋನಾ, ಶ್ವಾನ ಪ್ರೇಮಿ ರಜನಿ ಶೆಟ್ಟಿ,...
31-10-25 10:47 pm
MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm