ಬ್ರೇಕಿಂಗ್ ನ್ಯೂಸ್
05-11-22 11:55 am HK News Desk ಕರಾವಳಿ
ಮಂಗಳೂರು, ನ.4:ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ ಮತ್ತು ನಿಷೇಧಿತ ಪಿಎಫ್ಐ ಸಂಘಟನೆ ಜೊತೆಗೆ ನಂಟು ಹೊಂದಿದ್ದ ಆರೋಪದಲ್ಲಿ ಎನ್ಐಎ ಅಧಿಕಾರಿಗಳು ರಾಜ್ಯದ ಹಲವೆಡೆ ದಾಳಿ ನಡೆಸಿದ್ದಾರೆ. ಪುತ್ತೂರು, ಸುಳ್ಯ, ಮೈಸೂರು, ಹುಬ್ಬಳ್ಳಿಯಲ್ಲಿ ಏಕಕಾಲದಲ್ಲಿ ದಾಳಿ ನಡೆಸಿದ್ದು ಹಲವರನ್ನು ವಶಕ್ಕೆ ಪಡೆದಿದ್ದಾರೆ.
ಎಸ್ಡಿಪಿಐ ರಾಜ್ಯ ಕಾರ್ಯದರ್ಶಿ ಶಾಫಿ ಬೆಳ್ಳಾರೆ, ಆತನ ಸಹೋದರ ಎಸ್ಡಿಪಿಐ ಜಿಲ್ಲಾ ಸಮಿತಿ ಮುಖಂಡ ಇಕ್ಬಾಲ್ ಬೆಳ್ಳಾರೆಯನ್ನು ಎನ್ಐಎ ಅಧಿಕಾರಿಗಳು ಬಂಧಿಸಿದ್ದಾರೆ. ಇಬ್ರಾಹಿಂ ಷಾ ಎಂಬ ಇನ್ನೊಬ್ಬನನ್ನು ಕೂಡ ಸುಳ್ಯದಲ್ಲಿ ಬಂಧಿಸಲಾಗಿದೆ. ಮೈಸೂರಿನಲ್ಲಿ ಪಿಎಫ್ಐ ಮಾಜಿ ಕಾರ್ಯದರ್ಶಿಯಾಗಿದ್ದ ಸುಲೇಮಾನ್ ಎಂಬಾತನನ್ನು ಎನ್ಐಎ ಅಧಿಕಾರಿಗಳು ಬಂಧಿಸಿದ್ದಾರೆ. ಮೈಸೂರಿನ ಮಂಡಿ ಮೊಹಲ್ಲಾದಲ್ಲಿರುವ ಮನೆಯಿಂದ ಸುಲೇಮಾನನ್ನು ವಶಕ್ಕೆ ಪಡೆದಿದ್ದಾರೆ.

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಬಳಿಕ ನಾಪತ್ತೆಯಾಗಿದ್ದ ಶಾಫಿ ಬೆಳ್ಳಾರೆ ಅವರನ್ನು ಪೊಲೀಸರು ವಿಚಾರಣೆಗಾಗಿ ಹುಡುಕಾಟ ನಡೆಸುತ್ತಿದ್ದರು. ಆನಂತರ, ಪಿಎಫ್ಐ ಸಂಘಟನೆ ನಿಷೇಧ ಮಾಡಲಾಗಿತ್ತು. ಶಾಫಿ ಮತ್ತು ಇಕ್ಬಾಲ್ ಇಬ್ಬರು ಕೂಡ ಈ ಹಿಂದೆ ಪಿಎಫ್ಐ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದರು. ಪಿಎಫ್ಐ ನಿಷೇಧ ಹಿನ್ನೆಲೆಯಲ್ಲಿ ಬೆಳ್ಳಾರೆ ಸೋದರರ ಪಾತ್ರದ ಬಗ್ಗೆ ಖಚಿತ ಮಾಹಿತಿ ಪಡೆದು ಪೊಲೀಸರು ಮತ್ತು ಎನ್ಐಎ ಜಂಟಿಯಾಗಿ ನಡೆಸಿದ ದಾಳಿಯಲ್ಲಿ ಇಬ್ಬರನ್ನು ಬಂಧಿಸಲಾಗಿದೆ.
ಈ ಪೈಕಿ ಶಾಫಿ ಬೆಳ್ಳಾರೆ ಕೆಲವು ದಿನಗಳ ಹಿಂದೆಯೇ ಬೆಂಗಳೂರಿನಲ್ಲಿ ಎನ್ಐಎ ಕೈಗೆ ಸಿಕ್ಕಿಬಿದ್ದಿದ್ದ ಎನ್ನಲಾಗುತ್ತಿದ್ದು ಇದೀಗ ಆತನ ಸೋದರ ಇಕ್ಬಾಲ್ ಮತ್ತು ಇಬ್ರಾಹಿಂ ಷಾ ಎಂಬವರನ್ನು ಬಂಧಿಸಲಾಗಿದೆ. ಇಕ್ಬಾಲ್ ಬೆಳ್ಳಾರೆ ಗ್ರಾಮ ಪಂಚಾಯತಿ ಸದಸ್ಯನೂ ಆಗಿದ್ದ. ಈ ಮೂವರನ್ನು ಪ್ರವೀಣ್ ಕೊಲೆ ಪ್ರಕರಣದಲ್ಲಿ ಬಂಧಿಸಲಾಗಿದೆಯೇ, ಪಿಎಫ್ಐ ನಂಟಿನ ಆರೋಪದಲ್ಲಿ ಬಂಧನ ಮಾಡಲಾಗಿದೆಯೇ ಎನ್ನುವುದು ದೃಢಪಟ್ಟಿಲ್ಲ.\
In connection to the BJP party worker Praveen Nettaru murder case, National Investigation Agency (NIA) officials raided the residences of the now banned Popular Front of India (PFI) and SDPI leaders across the state. It is learnt that NIA officials have detained three persons.
27-09-26 03:21 pm
HK News Desk
ಬೆಂಗಳೂರಿಗೆ ಬಂದ ಶಾಸಕರೆಲ್ಲ ಎರಡೆರಡು ಮದುವೆಯಾಗಿದ್ದ...
25-09-26 04:49 pm
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
ಕರಾವಳಿಯಲ್ಲಿ ನೀರು ಸಂರಕ್ಷಣೆಗೆ ವೈಜ್ಞಾನಿಕ ಮಾಸ್ಟರ್...
23-09-26 11:02 pm
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
26-09-26 07:01 pm
HK News Staffer
ವೃದ್ಧಾಶ್ರಮ ಸೇರಿದ ವಿನೋದ್ ಕಾಂಬ್ಳಿ: ವಿಡಿಯೋ ವೈರಲ್...
26-09-26 11:51 am
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಂದ್ರ ಕುಮಾರ್ ದೇಶದ್ರ...
24-09-26 09:42 pm
"ನಾವು ಚುನಾವಣೆ ಗೆದ್ದರೆ, ಟೆಕ್ಸಾಸ್ ಹನುಮಾನ್ ವಿಗ್...
23-09-26 04:21 pm
ಪಶುವೈದ್ಯರ ಹುದ್ದೆಗೆ ₹80 ಲಕ್ಷದ ಡೀಲ್ ಆರೋಪ: ಪ್ರಶ್...
22-09-26 09:42 am
29-09-26 01:25 pm
HK News Staffer
ಬಿ.ಸಿ.ರೋಡ್ ಸಭೆಯಲ್ಲಿ ಕರಾವಳಿ ಶಾಸಕರು, ಸಂಸದರ ಬಗ್ಗ...
29-09-26 11:41 am
ಕಂಬಳ ಲೋಕದ ದಿಗ್ಗಜ ‘ನಂದಳಿಕೆ ಪಾಂಡು’ ಇನ್ನಿಲ್ಲ: 20...
29-09-26 10:45 am
ದೇಶದಲ್ಲಿ 13 ಕೋಟಿ ಮತ ಡಿಲೀಟ್ ಆಗಿದ್ದು ಹೇಗೆ ? ಆಳು...
28-09-26 11:08 pm
ಬಿಜೆಪಿಯವರು ಅಧಿಕಾರದಲ್ಲಿದ್ದಾಗ ಕರಾವಳಿಗೇನು ಕೊಟ್ಟಿ...
28-09-26 09:33 pm
29-09-26 03:48 pm
HK News Staffer
ಕರಂಗಲ್ಪಾಡಿಯಲ್ಲಿ ಅಪಘಾತ ; ನ್ಯಾಯಾಧೀಶರಿದ್ದ ಕಾರಿಗೆ...
29-09-26 01:22 pm
ಪತಿಯನ್ನು ಬಿಟ್ಟು ಪ್ರತ್ಯೇಕ ವಾಸ ; ಮಾಂಸದಂಗಡಿ ಮಾಲೀ...
29-09-26 09:20 am
ಮಾಡೂರು ಇಸುಬು ಹತ್ಯೆ ಪ್ರಕರಣ ; ನಾಲ್ವರು ಆರೋಪಿಗಳು...
28-09-26 11:03 pm
ಮಂಗಳೂರಲ್ಲಿ ಡ್ರಗ್ಸ್ ಜಾಲಕ್ಕೆ ಸಿಸಿಬಿ ಶಾಕ್ : ₹ 24...
28-09-26 03:08 pm