ಬ್ರೇಕಿಂಗ್ ನ್ಯೂಸ್
12-10-20 05:14 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 12: ದಸರಾ ಅಚರಣೆಯ ವೇಳೆ ದೇವಸ್ಥಾನದ ಸಂಪ್ರದಾಯಕ್ಕೆ ಯಾವುದೇ ಧಕ್ಕೆ ಬಾರದಂತೆ ಸೂಕ್ತ ಕ್ರಮ ಕೈಗೊಳ್ಳುವ ಹಿನ್ನೆಲೆಯಲ್ಲಿ, ಸಂಪ್ರದಾಯ ಪ್ರಕಾರ ಹುಲಿ ವೇಷ ಕುಣಿತಕ್ಕೆ ಈ ಬಾರಿ ಅವಕಾಶ ನೀಡಲು ದ.ಕ ಜಿಲ್ಲಾಡಳಿತ ನಿರ್ಧರಿಸುವ ವಿಶ್ವಾಸವಿದೆ ಎಂದು ಶಾಸಕ ವೇದವ್ಯಾಸ ಕಾಮತ್ ತಿಳಿಸಿದ್ದಾರೆ.


ಕೊರೊನಾ ಕಾರಣದಿಂದ ದಸರಾ ಸಂದರ್ಭದಲ್ಲಿ ಹುಲಿ ವೇಷ ಕುಣಿತಕ್ಕೆ ದ.ಕ ಜಿಲ್ಲಾಡಳಿತ ಅನುಮತಿ ನೀಡಿರಲಿಲ್ಲ. ಆದರೆ, ವಿವಿಧ ದೇವಸ್ಥಾನ ಹಾಗೂ ಶಾರದೋತ್ಸವ ಸಮಿತಿಯ ಪ್ರಮುಖರು ಅವಕಾಶ ನೀಡುವಂತೆ ತಮಗೆ ಹಾಗೂ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದ್ದರು ಎಂದು ಅವರು ಹೇಳಿದ್ದಾರೆ. ಕರಾವಳಿಯ ಮಣ್ಣಿನ ಸಂಸ್ಕೃತಿ ಸಂಸ್ಕಾರ ಹಾಗೂ ಸಂಪ್ರದಾಯಕ್ಕೆ ಯಾವುದೇ ಧಕ್ಕೆ ಎದುರಾಗಬಾರದು ಎಂಬ ಕಾರಣದಿಂದ ಈಗಾಗಲೇ ಜಿಲ್ಲಾಧಿಕಾರಿಯವರಲ್ಲಿ ಈ ವಿಷಯ ಪ್ರಸ್ತಾವಿಸಿದ್ದೇನೆ. ಸಂಪ್ರದಾಯ ಪ್ರಕಾರವಾಗಿ ಹುಲಿ ವೇಷ ಕುಣಿತಕ್ಕೆ ಅವಕಾಶ ನೀಡುವಂತೆ ಕೋರಿದ್ದೇನೆ.
ಜತೆಗೆ ಸರಕಾರದ ಉನ್ನತ ಅಧಿಕಾರಿಗಳ ಜತೆಗೂ ಚರ್ಚಿಸಿದ್ದೇನೆ. ದೇವಸ್ಥಾನದ ಉತ್ಸವ ಹಾಗೂ ಶಾರದೋತ್ಸವ ಸಮಿತಿ ಕಾರ್ಯಕ್ರಮದ ವೇಳೆ ಕನಿಷ್ಠ ಸಂಖ್ಯೆಯಲ್ಲಿ ಹುಲಿ ವೇಷ ಕುಣಿತಕ್ಕೆ ಸಂಪ್ರದಾಯ ಪ್ರಕಾರ ಅವಕಾಶ ಕಲ್ಪಿಸುವಂತೆ ಕೋರಿದ್ದೇನೆ. ಹೀಗಾಗಿ ಸಂಪ್ರದಾಯದಂತೆ ಹುಲಿವೇಷ ಕುಣಿತಕ್ಕೆ ಜಿಲ್ಲಾಡಳಿತ ಅವಕಾಶ ನೀಡಲಿದ್ದು, ಯಾರೂ ಕೂಡ ಆತಂಕ ಪಡುವ ಆವಶ್ಯಕತೆ ಇಲ್ಲ ಎಂದವರು ತಿಳಿಸಿದ್ದಾರೆ.
Mangalore MLA Vedavyas Kamath assures of conducting "Pile Vesha" for Dasra 2020 with Guidelines after the administration had restrained of not conducting pile vesha in Mangalore.
06-12-25 12:33 pm
HK News Desk
Dharwad Accident, Police Inspector: ಧಾರವಾಡ; ಡ...
05-12-25 11:20 pm
Shivamogga Doctor Suicide: ಶಿವಮೊಗ್ಗ ; ಮೂರು ವರ...
05-12-25 10:00 pm
Indigo Flight News, Hubli Marriage: ಕೈಕೊಟ್ಟ ಇ...
05-12-25 07:26 pm
ಇಸ್ಲಾಂ ಹೆಸರಲ್ಲಿ ಬಲಾತ್ಕಾರ, ಲೂಟಿ, ಮತಾಂತರ ಮಾಡಿದ್...
04-12-25 05:36 pm
06-12-25 04:58 pm
HK News Desk
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
IndiGo Cancels Nearly 200 Flights Nationwide;...
04-12-25 11:15 am
Nationwide Census: ಎರಡು ಹಂತಗಳಲ್ಲಿ ದೇಶಾದ್ಯಂತ ಜ...
03-12-25 07:19 pm
Jawaharlal Nehru, Babri Masjid, Sardar Patel,...
03-12-25 07:14 pm
06-12-25 06:12 pm
Mangalore Correspondent
Kantara, Mangalore, Rishab Shetty; ಕಾಂತಾರ -1ರ...
05-12-25 12:24 pm
Mangalore, Suicide: ಕೊಣಾಜೆ ; 16ರ ಬಾಲಕಿ ಮನೆಯಲ್...
05-12-25 12:10 pm
Mithun Rai Congress, Notice: ಎಐಸಿಸಿ ಸೆಕ್ರಟರಿ...
05-12-25 10:34 am
Brother Sajith Joseph Ban, Mangalore Prayer:...
04-12-25 06:39 pm
06-12-25 09:52 pm
Mangalore Correspondent
Ganesh Gowda, Chikkamagaluru, Congress, Murde...
06-12-25 02:43 pm
ಚಿನ್ನ ಕಸಿದ ಪ್ರಕರಣ ಬೆನ್ನತ್ತಿ ಕುಖ್ಯಾತ ಅಂತಾರಾಜ್ಯ...
05-12-25 11:00 pm
ಸಿಐಡಿ ಪೊಲೀಸ್ ಸೋಗಿನಲ್ಲಿ ಮುಲ್ಕಿಯ ವೃದ್ಧ ದಂಪತಿಗೆ...
04-12-25 11:15 pm
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm