ಬ್ರೇಕಿಂಗ್ ನ್ಯೂಸ್
06-11-22 11:01 pm Mangalore Correspondent ಕರಾವಳಿ
ಮಂಗಳೂರು, ನ.6 : ಧರ್ಮ ಜಾಗರಣ ಸಮನ್ವಯ ಪರಿಯೋಜನಾ ಪ್ರಮುಖ್ ಭಾಸ್ಕರ ದಾಸ್ ಎಕ್ಕಾರು (66) ಹಾಸನದಲ್ಲಿ ಶನಿವಾರ ನಡೆದ ಅಪಘಾತದಲ್ಲಿ ನಿಧನರಾಗಿದ್ದಾರೆ. ಕೆಲಸದ ನಿಮಿತ್ತ ಮಹಾರಾಷ್ಟ್ರ ಮತ್ತು ಬೆಂಗಳೂರು ಮತ್ತಿರರ ಕಡೆಗಳಿಗೆ ತೆರಳಿದ್ದು, ಶನಿವಾರ ಬೆಂಗಳೂರಿನಿಂದ ಮಂಗಳೂರಿಗೆ ತಮ್ಮ ಇನೋವಾ ವಾಹನದಲ್ಲಿ ವಾಪಾಸ್ಸಾಗುತ್ತಿದ್ದಾಗ ಅಪಘಾತ ನಡೆದಿತ್ತು.
ಕುಣಿಗಲ್ ನಲ್ಲಿ ಭಾಸ್ಕರ ದಾಸ್ ಅವರು ಸಂಚರಿಸುತ್ತಿದ್ದ ವಾಹನಕ್ಕೆ ಎಮ್ಮೆಯೊಂದು ಅಡ್ದ ಬಂದಿದ್ದು, ಕೂಡಲೇ ಚಾಲಕ ಅಪಘಾತ ತಪ್ಪಿಸಲು ಬ್ರೇಕ್ ಹಾಕಿದ್ದರು. ಈ ಸಂದರ್ಭ ತಮ್ಮ ವಾಹನಕ್ಕೆ ಹಿಂಬದಿಯಿಂದ ಬಂದ ಮಿನಿ ಬಸ್ ಡಿಕ್ಕಿ ಹೊಡೆದಿದೆ. ಭಾಸ್ಕರ ದಾಸ್ ಗಂಭೀರ ಗಾಯಗೊಂಡಿದ್ದು ಕೂಡಲೇ ಖಾಸಗಿ ಅಸ್ಪತ್ರೆಗೆ ದಾಖಲಿಸಲಾಗಿತ್ತು. ಭಾನುವಾರ ಸಂಜೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.
ಭಾಸ್ಕರ ದಾಸ್ ಅವರು ಪ್ರಸ್ತುತ ಪ್ರಸ್ತುತ ಭಾರತ ಸರಕಾರದ ಸಾಮಾಜಿಕ ನ್ಯಾಯ ಹಕ್ಕುಗಳ ಸಬಲೀಕರಣ ಸಚಿವಾಲಯ ಡಿಎನ್‌ಟಿ-ಎನ್‌ಟಿ- ಎಸ್‌ಎನ್‌ಟಿ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದು, ಡಿ. ದೇವರಾಜ್ ಅರಸು ಪ್ರಶಸ್ತಿ ಪುರಸ್ಕೃತರಾಗಿದ್ದರು. ಕಟೀಲು ಶ್ರೀ ದುರ್ಗಾಪರಮೆಶ್ವರಿ ದೇವಸ್ಥಾನದಲ್ಲಿ ಕಳೆದ ಎರಡು ವರ್ಷದ ಹಿಂದೆ ನಡೆದ ಬ್ರಹ್ಮಕಲಶೋತ್ಸವದಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದರು, ಎಕ್ಕಾರು ಗ್ರಾಮ ಪಂಚಾಯತಿನಿಂದ ಎರಡು ಬಾರಿ ಸದಸ್ಯರಾಗಿ ಆಯ್ಕೆಯಾಗಿದ್ದರು. ಮೃತರು ಮೂವರು ಗಂಡು ಮಕ್ಕಳನ್ನು ಅಗಲಿದ್ದಾರೆ. ಮೃತರ ಅಂತಿಮ ಸಂಸ್ಕಾರ ಸೋಮವಾರ ಬೆಳಗ್ಗೆ ಎಕ್ಕಾರಿನಲ್ಲಿ ನಡೆಯಲಿದೆ.
Road accident in Hassan, Bhaskar Das Yekkur dies on spot.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
14-05-25 04:45 pm
HK News Desk
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
14-05-25 01:42 pm
Mangalore Correspondent
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm