ಬ್ರೇಕಿಂಗ್ ನ್ಯೂಸ್
07-11-22 01:16 pm Udupi Correspondent ಕರಾವಳಿ
ಉಡುಪಿ, ನ.7: ಉಡುಪಿ ಜಿಲ್ಲೆಯ ಕಾಪುವಿನಲ್ಲಿ ಬಿಜೆಪಿ ಜನಸಂಕಲ್ಪ ಸಮಾವೇಶದಲ್ಲಿ ಪಾಲ್ಗೊಳ್ಳಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಸಿಎಂ ಯಡಿಯೂರಪ್ಪ ಹೆಲಿಕಾಪ್ಟರ್ ನಲ್ಲಿ ಆಗಮಿಸಿದ್ದಾರೆ.
ಈ ವೇಳೆ, ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಜನಸಂಕಲ್ಪ ಸಮಾವೇಶ ಎರಡು ಸುತ್ತಿನಲ್ಲಿ ನಡೆಯುತ್ತದೆ. ಕರಾವಳಿಯಲ್ಲಿ ಕಾಪುವಿನಿಂದ ಆರಂಭ ಆಗಿದೆ. ನಾಳೆಯಿಂದ ಗದಗ, ಹಾವೇರಿ, ಬೆಳಗಾವಿಯಲ್ಲಿ ಸಮಾವೇಶ ನಡೆಯಲಿದೆ. ಪ್ರತಿ ಕ್ಷೇತ್ರಕ್ಕೆ ಭೇಟಿ ನೀಡಿ ಪಕ್ಷ ಸಂಘಟನೆ ಮಾಡುತ್ತೇವೆ. ಜನರಿಂದ ನಮಗೆ ಅಭೂತಪೂರ್ವ ಬೆಂಬಲ ಸಿಕ್ಕಿದೆ. ಕಾರ್ಯಕರ್ತರಲ್ಲಿ ಸಮಾವೇಶ ಉತ್ಸಾಹ ಮೂಡಿಸಿದೆ. ಮುಂದೆ ಎರಡು ದಿಕ್ಕಿನಿಂದ ಉತ್ತರ, ದಕ್ಷಿಣ ಯಾತ್ರೆ ಮಾಡುತ್ತೇವೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುತ್ತದೆ ಎಂಬ ಸಿದ್ದರಾಮಯ್ಯ ಹೇಳಿಕೆ ಬಗ್ಗೆ ಕೇಳಿದ್ದಕ್ಕೆ, ಸಿದ್ದರಾಮಯ್ಯ ಭ್ರಮೆಯಲ್ಲಿ ಇದ್ದಾರೆ. ಹಿಂದೆ ಅವರದೇ ಆಡಳಿತ ಇತ್ತು, ಆಗಲೂ ಇದನ್ನೇ ಹೇಳ್ತಾ ಇದ್ರು. ಯಡಿಯೂರಪ್ಪ, ಕುಮಾರಸ್ವಾಮಿ ಮತ್ತೆ ಸಿಎಂ ಆಗಲ್ಲ ಅಂತ ಅಪ್ಪನ ಹೆಸರಲ್ಲಿ ಆಣೆ ಮಾಡಿದ್ದರು. ಆಗ ಆಡಳಿತದಲ್ಲಿದ್ದರೂ ಮತ್ತೆ ಸೋತಿದ್ದಾರೆ. ಯಡಿಯೂರಪ್ಪ, ಕುಮಾರಸ್ವಾಮಿ ಮತ್ತೆ ಮುಖ್ಯಮಂತ್ರಿ ಆಗಿದ್ದಾರೆ. ಸಿದ್ದರಾಮಯ್ಯ ಹೇಳಿದ್ದು ಯಾವತ್ತೂ ಸತ್ಯ ಆಗಿಲ್ಲ ಎಂದರು.
ಬಿಜೆಪಿಯಂತ ಭ್ರಷ್ಟ ಸರ್ಕಾರ ನೋಡಿಲ್ಲ ಎಂಬ ಖರ್ಗೆ ಹೇಳಿಕೆಗೆ ಪ್ರತಿಕ್ರಿಯಿಸಿದ ಬೊಮ್ಮಾಯಿ, 50 ವರ್ಷ ಅವರು ಪೂರ್ಣ ಭ್ರಷ್ಟಾಚಾರ ಮಾಡಿದ್ದಾರೆ. ಅವರ ಕಾಲದಲ್ಲಿ ಆದ ಭ್ರಷ್ಟಾಚಾರ ಯಾವತ್ತೂ ಆಗಿಲ್ಲ. ಸುಳ್ಳು ಅಂದ್ರೆ ಕಾಂಗ್ರೆಸ್, ಕಾಂಗ್ರೆಸ್ ಅಂದ್ರೆ ಸುಳ್ಳು. ಕಾಂಗ್ರೆಸ್ ಕಾಲದ ಭ್ರಷ್ಟಾಚಾರದ ಕುರಿತು ತನಿಖೆ ನಡೆಸುತ್ತೇವೆ ಎಂದು ಹೇಳಿದರು.
ರೇಣುಕಾಚಾರ್ಯ ಸೋದರನ ಪುತ್ರನ ಸಾವಿನ ಬಗ್ಗೆ ತನಿಖೆ ನಡೆಯುತ್ತಿದೆ. ನಾಳೆ ರೇಣುಕಾಚಾರ್ಯ ಅವರನ್ನು ಭೇಟಿ ಆಗುತ್ತೇನೆ. ಅಹವಾಲನ್ನು ಕೇಳುತ್ತೇನೆ ಎಂದು ಬೊಮ್ಮಾಯಿ ಹೇಳಿದರು.
Preparing for the Assembly polls in about five months, Karnataka BJP's 'Jana Sankalpa Yatra' led by Chief Minister Basavaraj Bommai and party strongman and parliamentary board member B S Yeduyurappa has now resumed here on Monday. The Yatra will be covering Udupi, and Kitturu-Karnataka districts of Gadag, Haveri, and Belagavi, during the next three days.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
14-05-25 01:42 pm
Mangalore Correspondent
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm