ಬ್ರೇಕಿಂಗ್ ನ್ಯೂಸ್
07-11-22 09:58 pm Mangalore Correspondent ಕರಾವಳಿ
ಮಂಗಳೂರು, ನ.7: ಮಂಗಳೂರು ನಗರದ ಬಲ್ಮಠದ ಕಲೆಕ್ಟರ್ಸ್ ಗೇಟ್ ವೃತ್ತದಿಂದ ಅಂಬೇಡ್ಕರ್ ವೃತ್ತದ ವರೆಗಿನ ರಸ್ತೆಗೆ ಹೊಟೇಲ್ ಉದ್ಯಮಿ, ಶ್ರೀದೇವಿ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಎ.ಸದಾನಂದ ಶೆಟ್ಟಿ ಅವರ ಹೆಸರಿಡುವ ಬಗ್ಗೆ ಮಂಗಳೂರು ಮಹಾನಗರ ಪಾಲಿಕೆಗೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಪಾಲಿಕೆಯಲ್ಲಿ ಸೂಕ್ತ ತೀರ್ಮಾನ ಕೈಗೊಳ್ಳಲು ಪರಿಷತ್ತಿನಲ್ಲಿ ಇರಿಸಲಾಗಿದೆ.
ಈ ಬಗ್ಗೆ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಮತ್ತು ಅತ್ತೂರು ಸದಾನಂದ ಶೆಟ್ಟಿ ಅಭಿಮಾನ ಬಳಗದ ವತಿಯಿಂದ ಮಹಾನಗರ ಪಾಲಿಕೆಗೆ ಮನವಿ ನೀಡಲಾಗಿದೆ. ಮಹಾನಗರ ಪಾಲಿಕೆಯ ಕೌನ್ಸಿಲ್ ಸಭೆಗೆ ಈ ವಿಷಯ ಬಂದಿಲ್ಲ. ಪ್ರಸ್ತಾವನೆಯ ಬಗ್ಗೆ ಚರ್ಚಿಸಲು ಪರಿಷತ್ತಿನ ಕಾರ್ಯಸೂಚಿಯಲ್ಲಿ ಇಡಲು ನಿರ್ಣಯಿಸಲಾಗಿದೆ. ಯಾವುದೇ ಸಾರ್ವಜನಿಕ ರಸ್ತೆಗೆ ನಾಮಕರಣ ಮಾಡುವುದಿದ್ದರೂ ಪಾಲಿಕೆಯ ನಗರ ಯೋಜನಾ ಸ್ಥಾಯಿ ಸಮಿತಿಯ ಸದಸ್ಯರು ಪರಿಶೀಲನೆ ನಡೆಸಬೇಕಾಗುತ್ತದೆ. ಆನಂತರ, ನಗರ ಪಾಲಿಕೆಯಲ್ಲಿ ಗೊತ್ತುವಳಿ ಅಂಗೀಕಾರ ಆದಲ್ಲಿ ಅದನ್ನು ಸ್ಥಳೀಯ ಎರಡು ಕನ್ನಡ ದಿನ ಪತ್ರಿಕೆಗಳಲ್ಲಿ ಪ್ರಕಟಿಸಿ, ಆಕ್ಷೇಪಗಳಿದ್ದಲ್ಲಿ ಸ್ವೀಕಾರ ಮಾಡಬೇಕು. ಒಂದು ತಿಂಗಳಲ್ಲಿ ಬರುವ ಸಲಹೆ, ಆಕ್ಷೇಪಗಳ ಬಗ್ಗೆ ಪಾಲಿಕೆಯ ಮುಂದಿನ ಸಭೆಯಲ್ಲಿ ಮಂಡಿಸಬೇಕು. ಚರ್ಚಿಸಿ, ನಿರ್ಣಯ ಕೈಗೊಂಡ ನಂತರ ರಾಜ್ಯ ಸರಕಾರದ ಅನುಮತಿ ಕೋರಿ, ಪ್ರಸ್ತಾವನೆ ಕಳುಹಿಸಿ ಕೊಡಬೇಕಾಗುತ್ತದೆ.
ಸದ್ಯಕ್ಕೆ ಪ್ರಸ್ತಾವನೆ ಮಾತ್ರ ಮಂಡನೆಯಾಗಿದ್ದು, ಮಹಾನಗರ ಪಾಲಿಕೆಯಲ್ಲಿ ಯಾವುದೇ ಚರ್ಚೆ ಆಗಿಲ್ಲ. ಈ ಹಿಂದೆ ಹಂಪನಕಟ್ಟೆಯ ಲೈಟ್ ಹೌಸ್ ಹಿಲ್ ಹೋಗುವ ರಸ್ತೆಗೆ ಸುಂದರರಾಮ ಶೆಟ್ಟಿ ಹೆಸರಿಡುವ ವಿಚಾರ ಭಾರೀ ವಿವಾದಕ್ಕೆ ಕಾರಣವಾಗಿತ್ತು. ಕಳೆದ ಚುನಾವಣೆ ಸಂದರ್ಭದಲ್ಲಿ ಬಂಟ ಸಮುದಾಯವನ್ನು ಎತ್ತಿಕಟ್ಟುವ ಪ್ರಯತ್ನಕ್ಕೂ ಈ ವಿವಾದ ನಾಂದಿ ಹಾಡಿತ್ತು. ಈ ಬಾರಿ ಚುನಾವಣೆ ವರ್ಷದಲ್ಲಿಯೇ ಸದಾನಂದ ಶೆಟ್ಟಿ ಹೆಸರಿಡುವ ವಿಚಾರ ಮುನ್ನೆಲೆಗೆ ಬಂದಿದೆ. ಒಂದು ಕಾಲದಲ್ಲಿ ಸದಾನಂದ ಶೆಟ್ಟರು ಕ್ವಾಲಿಟಿ ಹೊಟೇಲ್ ಮೂಲಕ ಶೈನ್ ಆಗುತ್ತಿದ್ದ ರಸ್ತೆಗೆ ಅವರದ್ದೇ ಹೆಸರಿಡಲು ಒಂದು ವರ್ಗ ಮುಂದಾಗಿದೆ. ಸದಾನಂದ ಶೆಟ್ಟಿ ಅವರಿಗೆ ಈ ಬಗ್ಗೆ ಗೊತ್ತಿದೆಯೋ ಇಲ್ಲವೋ. ಅವರು ಬದುಕಿರುವ ಕಾಲದಲ್ಲಿಯೇ ರಸ್ತೆಗೆ ಹೆಸರಿಡುವ ತರಾತುರಿ ಯಾತಕ್ಕೋ ಗೊತ್ತಿಲ್ಲ.
Mangalore Rename Balmatta road after the owner of Quality Hotel and Sridevi college owner K Sadananda Shetty road, MCC to discuss the matter.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
14-05-25 01:42 pm
Mangalore Correspondent
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm