ಮುರುಘಾ ಶ್ರೀ ಕ್ಷಮಿಸಲಾರದ ತಪ್ಪು ಮಾಡಿದ್ದಾರೆ, ತಕ್ಕ ಶಿಕ್ಷೆ ಆಗಬೇಕು ; ಯಡಿಯೂರಪ್ಪ ಖಡಕ್ ನುಡಿ 

08-11-22 02:29 pm       Udupi Correspondent   ಕರಾವಳಿ

ಚಿತ್ರದುರ್ಗದ ಮುರುಘಾ ಶರಣರ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣ ಸಂಬಂಧಿಸಿ ಮೊದಲ ಬಾರಿಗೆ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಖಡಕ್ ಪ್ರತಿಕ್ರಿಯೆ ನೀಡಿದ್ದು ಮುರುಘಾಶ್ರೀ ಕ್ಷಮಿಸಲಾರದ ಅಪರಾಧ ಮಾಡಿದ್ದಾರೆ.

ಉಡುಪಿ, ನ.8 : ಚಿತ್ರದುರ್ಗದ ಮುರುಘಾ ಶರಣರ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣ ಸಂಬಂಧಿಸಿ ಮೊದಲ ಬಾರಿಗೆ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಖಡಕ್ ಪ್ರತಿಕ್ರಿಯೆ ನೀಡಿದ್ದು ಮುರುಘಾಶ್ರೀ ಕ್ಷಮಿಸಲಾರದ ಅಪರಾಧ ಮಾಡಿದ್ದಾರೆ. ಇಷ್ಟು ಕೆಳಮಟ್ಟಕ್ಕೆ ಇಳಿಯುತ್ತಾರೆ ಅಂತ ನಿರೀಕ್ಷೆ ಮಾಡಿರಲಿಲ್ಲ ಎಂದು ಹೇಳಿದ್ದಾರೆ. 

ಮುರುಘಾ ಶ್ರೀಗಳ ಕೃತ್ಯವನ್ನು ಎಲ್ಲರೂ ಖಂಡಿಸಬೇಕು. ಘೋರ ತಪ್ಪು ಮಾಡಿದವರಿಗೆ ತಕ್ಕ ಶಿಕ್ಷೆಯಾಗಬೇಕು. ಮುರುಘಾ ಶ್ರೀಗಳಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ಯಡಿಯೂರಪ್ಪ ಹೇಳಿದ್ದಾರೆ. 

VIDEO - 'ಹಿಂದೂ' ಪದದ ಬಗ್ಗೆ ಹೇಳಿಕೆ: ಸತೀಶ್ ಜಾರಕಿಹೊಳಿ ಸ್ಪಷ್ಟನೆ - Varthabharati

ಸತೀಶ್ ಜಾರಕಿಹೊಳಿ ರಾಜ್ಯದ ಜನರಲ್ಲಿ ಕ್ಷಮೆ ಕೇಳಬೇಕು 

ಸತೀಶ್ ಜಾರಕಿಹೋಳಿ ಹಿಂದುಗಳಿಗೆ ಅಪಮಾನ ಮಾಡುವ ರೀತಿಯಲ್ಲಿ ಮಾತನಾಡಿದ್ದು ಖಂಡನೀಯ. ಕಾಂಗ್ರೆಸ್ನವರು ಅವರ ಹೇಳಿಕೆಯನ್ನು ಖಂಡಿಸಿದ್ದಾರೆ. ಕಾಂಗ್ರೆಸ್ ಕೇವಲ ಖಂಡನೆ ಮಾಡಿದರೆ ಸಾಕಾಗೋದಿಲ್ಲ. ಸತೀಶ್ ಜಾರಕಿಹೊಳಿ ರಾಜ್ಯದ ಜನರಲ್ಲಿ ಕ್ಷಮಾಪಣೆ ಕೇಳಬೇಕು. ಹಗುರವಾಗಿ ಮಾತನಾಡಿದರೆ ದೊಡ್ಡವನಾಗುತ್ತೇನೆ ಎಂದು ಅಂದುಕೊಂಡಿದ್ದರೆ ಅದೊಂದು ಭ್ರಮೆ ಎಂದು ಹೇಳಿದರು. 

ಜನ ಜೇಬಿನಲ್ಲಿದ್ದಾರೆ ಅನ್ಕೊಂಡಿದ್ದಾರೆ ಸಿದ್ದರಾಮಯ್ಯ! 

Karnataka: Former CM defends Lingayat saint on the pretext of Amit Shah,  said this on allegations of rape

Karnataka CM gets notice from lawyers' association for defending moral  policing | The News Minute

ಚುನಾವಣೆ ಗೆದ್ದು ಖರ್ಗೆಗೆ ಗಿಫ್ಟ್ ಕೊಡುತ್ತೇವೆ ಎಂದಿರುವ ಸಿದ್ದರಾಮಯ್ಯ ಹೇಳಿಕೆ ಬಗ್ಗೆ ಟಾಂಗ್ ಕೊಟ್ಟ ಬಿ.ಎಸ್ ಯಡಿಯೂರಪ್ಪ, ಸಿದ್ದರಾಮಯ್ಯ ಯಾವುದೋ ಭ್ರಮೆಯಲ್ಲಿದ್ದಾರೆ. ರಾಜ್ಯದ ಜನ ಅವರ ಜೇಬಿನಲ್ಲಿದ್ದಾರೆ ಎಂಬ ಭಾವನೆ ಮನಸ್ಸಲ್ಲಿದ್ದಂತಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಗೆಲ್ಲುವುದು ಅಸಾಧ್ಯ. ನಾನು ಮತ್ತು ಬೊಮ್ಮಾಯಿ ರಾಜ್ಯದಲ್ಲಿ ಪ್ರವಾಸ ಹೊರಟಾಗ ಅಭೂತಪೂರ್ವ ಜನಬೆಂಬಲ ಸಿಕ್ಕಿದೆ. ಕರ್ನಾಟಕದಲ್ಲಿ ಬಿಜೆಪಿ ಗೆಲುವನ್ನು ತಡೆಯಲು ಸಿದ್ದರಾಮಯ್ಯನಿಂದ ಸಾಧ್ಯವಿಲ್ಲ.‌ ಕರ್ನಾಟಕದಲ್ಲಿ ಅಧಿಕಾರಕ್ಕೆ ಬರ್ತೀವಿ ಅಂತೀರಿ, ಆದರೆ ಬಾದಾಮಿಯನ್ನು ಯಾಕೆ ಬಿಟ್ಟು ಬರುತ್ತಿದ್ದೀರಿ.‌ ಬಾದಾಮಿಯಲ್ಲಿ ಸಿದ್ದರಾಮಯ್ಯಗೆ ಸೋಲು ನಿಶ್ಚಿತ ಅಂತ ಆಗಿದೆಯೇ.‌‌. ಅಂದು ಎಂಎಲ್ಎ ಆಗಿ ಕೆಲವೇ ಮತಗಳಿಂದ ಗೆದ್ದಿದ್ದೀರಿ. ಆನಂತರ ಕ್ಷೇತ್ರವನ್ನು ಮರೆತುಬಿಟ್ಟಿದ್ದೀರಿ, ಅಭಿವೃದ್ಧಿ ಮಾಡಿಲ್ಲ. ಬಾದಾಮಿ ತೊರೆಯುತ್ತೀರಿ ಎಂಬುದು ನಿಮಗೆ ಎಷ್ಟರ ಮಟ್ಟಿಗೆ ಶೋಭೆ ತರುತ್ತದೆ ಎಂದು ಯಡಿಯೂರಪ್ಪ ಪ್ರಶ್ನಿಸಿದರು.

Shivamurthy Swami accused of sexually abusing minor girls, BS Yediyurappa says never thought sheer was this cheap after speaking to media persons in Udupi. He must be given the right punishment he added.