ಬ್ರೇಕಿಂಗ್ ನ್ಯೂಸ್
10-11-22 03:14 pm Mangalore Correspondent ಕರಾವಳಿ
ಮಂಗಳೂರು, ನ.10: ಕನ್ನಡ ಮಾಧ್ಯಮದಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳ ಆತ್ಮವಿಶ್ವಾಸ ವೃದ್ಧಿ ಹಾಗೂ ವಿದ್ಯಾರ್ಥಿ ಸಮುದಾಯದಲ್ಲಿ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿ ಕುರಿತ ಅರಿವನ್ನು ವಿಸ್ತರಿಸುವ ಉದ್ದೇಶದಿಂದ ಕೇಶವ ಸ್ಮೃತಿ ಸಂವರ್ಧನ ಸಮಿತಿಯು ಕನ್ನಡ ಶಾಲಾ ಮಕ್ಕಳ ಹಬ್ಬವನ್ನು ನವೆಂಬರ್ 19 ಮತ್ತು 20ರಂದು ಮಂಗಳೂರಿನ ಸಂಘನಿಕೇತನದಲ್ಲಿ ಹಮ್ಮಿಕೊಂಡಿದೆ.
ಎರಡು ದಿನಗಳ ಸಮಾವೇಶದಲ್ಲಿ ದಕ್ಷಿಣ ಕನ್ನಡ, ಉಡುಪಿ ಮತ್ತು ಕಾಸರಗೋಡು ಜಿಲ್ಲೆಯ 5ನೇ ತರಗತಿ ಮೇಲ್ಪಟ್ಟ 10ನೇ ತರಗತಿ ವರೆಗಿನ ಸುಮಾರು 15 ಸಾವಿರ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. ನ.19ರಂದು ಬೆಳಗ್ಗೆ 10 ಗಂಟೆಗೆ ಗೋಕರ್ಣನಾಥೇಶ್ವರ ಕಾಲೇಜು ಮೈದಾನದಿಂದ ಸಂಘನಿಕೇತನಕ್ಕೆ ಮೆರವಣಿಗೆ ನಡೆಯಲಿದೆ. 10.30ಕ್ಕೆ ಕನ್ನಡ ನಾಡಿನ ಇತಿಹಾಸ, ಭಾಷೆ, ಸಾಹಿತ್ಯದ ಮಹತ್ವ, ರಾಷ್ಟ್ರೀಯ ಮತ್ತು ರಾಜ್ಯದ ಮಹನೀಯ ಚಿಂತನೆಗಳ ಸಾಕ್ಷ್ಯಚಿತ್ರ ಪ್ರದರ್ಶನ, ಪುಸ್ತಕ ಪ್ರದರ್ಶನಕ್ಕೆ ಚಾಲನೆ ದೊರಕಲಿದೆ. 11 ಗಂಟೆಗೆ ಬೃಹತ್ ವಿದ್ಯಾರ್ಥಿ ಸಮಾವೇಶ ಉದ್ಘಾಟನೆಗೊಳ್ಳಲಿದೆ ಎಂದು ಸ್ವಾಗತ ಸಮಿತಿಯ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ಹೇಳಿದ್ದಾರೆ.
ಇದೇ ವೇದಿಕೆಯಲ್ಲಿ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗು, ಕುದ್ರೋಳಿ ಗಣೇಶ್ ಅವರಿಂದ ಜಾದೂ ಪ್ರದರ್ಶನ ಇರಲಿದೆ. ಮುಖ್ಯ ಸಭಾಂಗಣಕ್ಕೆ ಪಂಜೆ ಮಂಗೇಶ್ ರಾವ್ ವೇದಿಕೆ ಎಂದು ಹೆಸರಿಡಲಾಗಿದೆ. 2ನೇ ವೇದಿಕೆ ಶಿವರಾಮ ಕಾರಂತ ವೇದಿಕೆಯಲ್ಲಿ ಶಿಕ್ಷಕರ ಜೊತೆ ಸಂವಾದವನ್ನು ರೋಹಿತ್ ಚಕ್ರತೀರ್ಥ ನಡೆಸಿಕೊಡಲಿದ್ದಾರೆ. ರಾಜೇಶ್ ಪದ್ಮಾರ್ ಕನ್ನಡ ಮತ್ತು ರಾಷ್ಟ್ರೀಯತೆ ಗೋಷ್ಠಿಯನ್ನು, ಕನ್ನಡ ಶಾಲೆಯಲ್ಲಿ ಓದಿದವರು ಸ್ಪರ್ಧಾತ್ಮಕ ಪರೀಕ್ಷೆಯನ್ನು ಎದುರಿಸುವ ಬಗ್ಗೆ ಸಂವಾದವನ್ನು ಐಎಎಸ್ ಅಧಿಕಾರಿ ನಂದಿನಿ ಇವರು ನೆರವೇರಿಸಲಿದ್ದಾರೆ. 3ನೇ ವೇದಿಕೆ ಕುದ್ಮುಲ್ ರಂಗ ರಾವ್ ವೇದಿಕೆ. ಇದರಲ್ಲಿ ವಿದ್ಯಾರ್ಥಿಗಳಿಗೆ ನಾಯಕತ್ವ ತರಬೇತಿ, ವೃತ್ತಿ ಮಾರ್ಗದರ್ಶನ, ಪ್ರತಿಭಾ ಪ್ರದರ್ಶನ ನಡೆಯಲಿದೆ.
ನ.20ರಂದು ಮೊದಲ ವೇದಿಕೆಯಲ್ಲಿ ಜೀವನರಾಮ್ ಸುಳ್ಯ ಇವರಿಂದ ರಂಗಾಭಿನಯ ಹಾಗೂ ರಂಗಗೀತೆಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ. 2ನೇ ವೇದಿಕೆಯಲ್ಲಿ ಕನ್ನಡ ಎಂದರೆ ಬರಿ ನುಡಿ ಅಲ್ಲ ಎಂಬ ಗೋಷ್ಠಿಯನ್ನು ಚಕ್ರವರ್ತಿ ಸೂಲಿಬೆಲೆ, ಕನ್ನಡ ಶಾಲೆಗಳನ್ನು ಕಟ್ಟಿ ಬೆಳೆಸಿದ ಮಹನೀಯರಾದ ಡಾ. ಪ್ರಭಾಕರ ಭಟ್ ಕಲ್ಲಡ್ಕ, ಡಾ. ಮೋಹನ್ ಆಳ್ವ ಮತ್ತು ಚಂದ್ರಶೇಖರ ದಾಮ್ಲೆ ಅವರಿಂದ ಕನ್ನಡ ಶಾಲೆಯ ಯಶೋಗಾಥೆ ಕುರಿತು ಗೋಷ್ಟಿ ಶಿಕ್ಷಕ ಹಾಗೂ ಪೋಷಕರೊಂದಿಗೆ ನಡೆಯಲಿದೆ. ಮುನಿರಾಜ ರೆಂಜಾಳ ಇವರಿಂದ ಜೀವನ ಮೌಲ್ಯ ಗೋಷ್ಠಿ, ನವದಂಪತಿ ಸಮಾವೇಶ ನಡೆಯಲಿದೆ. ಸಮಾರೋಪವನ್ನು ಕರ್ನಾಟಕ ಸರ್ಕಾರದ ವಿಧಾನ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ನೆರವೇರಿಸಲಿದ್ದಾರೆ. ವಿದ್ಯಾರ್ಥಿಗಳಿಗೆ ವಿವಿಧ ಆಟೋಟಗಳು, ತಿಂಡಿ ತಿನಿಸುಗಳು ಜೊತೆಗೆ ಹಬ್ಬದ ವಾತಾವರಣ ನಿರ್ಮಾಣವಾಗಲಿದೆ.
ಸುದ್ದಿಗೋಷ್ಟಿಯಲ್ಲಿ ಸ್ವಾಗತ ಸಮಿತಿಯ ದೇವಿಪ್ರಸಾದ್ ಶೆಟ್ಟಿ, ಕೆ.ಸಿ.ನಾಯ್ಕ್, ಎಂಬಿ ಪುರಾಣಿಕ್, ರಮೇಶ್ ಮತ್ತಿತರರಿದ್ದರು.
Kannada school children festival of culture to be held in Mangalore from Nov 19 and 20
19-05-25 04:00 pm
HK News Desk
Bjp, Radha Mohan Das Agarwal: 1971ರ ಯುದ್ಧ ಗೆಲ...
17-05-25 01:44 pm
Santosh Lad, Modi, Pak, War: ಮೋದಿ ತಾವೇ ಸುಪ್ರೀ...
16-05-25 10:04 am
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
19-05-25 02:25 pm
HK News Desk
ಚಾರ್ಮಿನಾರ್ ಬಳಿಯ ಗುಲ್ಜಾರ್ ಹೌಸ್ನಲ್ಲಿ ಬೆಂಕಿ ಅವ...
19-05-25 01:46 pm
Brijesh Chowta, Tejaswi Surya: ಪಾಕ್ ಪ್ರೇರಿತ ಭ...
18-05-25 08:23 pm
ಪಾಕ್ ಪರವಾಗಿ ಬೇಹುಗಾರಿಕೆ ; ಭಾರತೀಯ ಸೇನಾ ಮಾಹಿತಿ ಸ...
17-05-25 10:51 pm
Donald Trump, Asim Munir: ಡೊನಾಲ್ಡ್ ಟ್ರಂಪ್ ಕುಟ...
17-05-25 03:42 pm
19-05-25 11:07 pm
Mangalore Correspondent
Jail Attack, Suhas Shetty, Mangalore, Chotte...
19-05-25 10:14 pm
Konaje Suicide, Mangalore, Hair loss: ಕೂದಲು ಉ...
19-05-25 09:41 pm
Mangalore Job Scam, Police, Lawrence Dsouza,...
19-05-25 05:22 pm
Akanksha Suicide, Dharmasthala, Mangalore: ಏರ...
19-05-25 12:31 pm
19-05-25 09:38 pm
Mangalore Correspondent
Belagavi Murder, Mother in law: ಸೊಸೆಗೆ ಮಕ್ಕಳಾ...
19-05-25 03:35 pm
Reshma Bariga, FIR, Mangalore; ಆಪರೇಶನ್ ಸಿಂಧೂರ...
18-05-25 07:45 pm
Suhas Shetty, BJP Corporator Shweta Poojary,...
18-05-25 07:35 pm
Bangalore Cigarette Murder, Video Viral: ಕಾರಿ...
17-05-25 05:00 pm