ಸುಳ್ಯದಲ್ಲಿ ಬಸ್‌ - ಲಾರಿ ಡಿಕ್ಕಿ ; ಎರಡೂ ವಾಹನಗಳ ಮಧ್ಯೆ ಸಿಲುಕಿಕೊಂಡು ಲಾರಿ ಡ್ರೈವರ್ ಸಾವು 

16-11-22 05:23 pm       Mangalore Correspondent   ಕರಾವಳಿ

ಬಸ್‌ ಹಾಗೂ ಲಾರಿ ನಡುವೆ ರಸ್ತೆ ಅಪಘಾತ ಸಂಭವಿಸಿ ಲಾರಿ ಚಾಲಕ ಮೃತಪಟ್ಟ ಘಟನೆ ಇಲ್ಲಿನ ಕಲ್ಲುಗುಂಡಿ ಸಮೀಪ ನಡೆದಿದೆ. ಮೈಸೂರಿನಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗೆ ಸುಳ್ಯದಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಲಾರಿ ಮುಖಾಮುಖಿ ಡಿಕ್ಕಿಯಾಗಿದೆ.

ಸುಳ್ಯ, ನ.16: ಬಸ್‌ ಹಾಗೂ ಲಾರಿ ನಡುವೆ ರಸ್ತೆ ಅಪಘಾತ ಸಂಭವಿಸಿ ಲಾರಿ ಚಾಲಕ ಮೃತಪಟ್ಟ ಘಟನೆ ಇಲ್ಲಿನ ಕಲ್ಲುಗುಂಡಿ ಸಮೀಪ ನಡೆದಿದೆ. ಮೈಸೂರಿನಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗೆ ಸುಳ್ಯದಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಲಾರಿ ಮುಖಾಮುಖಿ ಡಿಕ್ಕಿಯಾಗಿದೆ.

ಲಾರಿ ಚಾಲಕ ಎರಡೂ ವಾಹನಗಳ ಮಧ್ಯೆ ಸಿಲುಕಿಕೊಂಡಿದ್ದರು ಎಂದು ತಿಳಿದುಬಂದಿದೆ.

ತಕ್ಷಣವೇ ಸ್ಥಳೀಯರು ಸೇರಿ ಹಲವು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಚಾಲಕನ ಹೊರತೆಗೆದು ಕೂಡಲೇ ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದರು. ಪ್ರಥಮ ಚಿಕಿತ್ಸೆ ನೀಡಿ ಮೈಸೂರಿನ ಆಸ್ಪತ್ರೆಗೆ ರವಾನಿಸುತ್ತಿದ್ದಾಗ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

KSRTC Truck accident in Sullia, truck driver killed afrer jammed between two vehicle