ಆಟೋ ಸ್ಫೋಟ ಆಕಸ್ಮಿಕ ಘಟನೆಯಲ್ಲ, ಭಯೋತ್ಪಾದಕ ಕೃತ್ಯ ; ಡಿಜಿಪಿ ಪ್ರವೀಣ್ ಸೂದ್ ಟ್ವೀಟ್  

20-11-22 12:38 pm       Mangaluru Correspondent   ಕರಾವಳಿ

ಮಂಗಳೂರಿನ ಆಟೋ ಸ್ಫೋಟ ಪ್ರಕರಣ ಸಂಬಂಧಿಸಿ ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಟ್ವೀಟ್ ಮಾಡಿದ್ದು ಆಕಸ್ಮಿಕ ಆಗಿರುವ ಘಟನೆಯಲ್ಲ, ಇದೊಂದು ಭಯೋತ್ಪಾದಕ ಕೃತ್ಯ ಎನ್ನುವುದು ಖಚಿತವಾಗಿದೆ ಎಂದು ಹೇಳಿದ್ದಾರೆ.  

ಮಂಗಳೂರು, ನ.20: ಮಂಗಳೂರಿನ ಆಟೋ ಸ್ಫೋಟ ಪ್ರಕರಣ ಸಂಬಂಧಿಸಿ ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಟ್ವೀಟ್ ಮಾಡಿದ್ದು ಆಕಸ್ಮಿಕ ಆಗಿರುವ ಘಟನೆಯಲ್ಲ, ಇದೊಂದು ಭಯೋತ್ಪಾದಕ ಕೃತ್ಯ ಎನ್ನುವುದು ಖಚಿತವಾಗಿದೆ ಎಂದು ಹೇಳಿದ್ದಾರೆ.  

ಭಯೋತ್ಪಾದನೆ ಕೃತ್ಯದ ಬಗ್ಗೆ ದೃಢವಾಗಿದೆ. ಆಕಸ್ಮಿಕ ರೀತಿಯಲ್ಲಿ ನಡೆದ ಘಟನೆಯಲ್ಲ. ಗಂಭೀರ ಡ್ಯಾಮೇಜ್ ಮಾಡುವ ಉದ್ದೇಶದಿಂದ ಕೃತ್ಯ ಎಸಗಲಾಗಿದೆ, ಇದೊಂದು ಭಯೋತ್ಪಾದಕ ಕೃತ್ಯ. ಕೇಂದ್ರೀಯ ಏಜನ್ಸಿಗಳ ಜೊತೆ ಸೇರಿ ರಾಜ್ಯ ಪೊಲೀಸರು ತನಿಖೆ ನಡೆಸಲಿದ್ದಾರೆ ಎಂದು ಡಿಜಿಪಿ ಪ್ರವೀಣ್ ಸೂದ್ ಟ್ವೀಟರ್ ನಲ್ಲಿ ಮಾಹಿತಿ ನೀಡಿದ್ದಾರೆ. 


ನಿನ್ನೆ ಸಂಜೆ ಹೊತ್ತಿಗೆ ಮಂಗಳೂರು ನಗರದ ಕಂಕನಾಡಿ ಬಳಿಯ ನಾಗುರಿ ಎಂಬಲ್ಲಿ ಆಟೋದಲ್ಲಿ ಬ್ಲಾಸ್ಟ್ ಆಗಿತ್ತು. ಪ್ರೆಶರ್ ಕುಕ್ಕರ್ ಸ್ಫೋಟಗೊಂಡಿದ್ದು ಆತಂಕದ ವಾತಾವರಣ ನಿರ್ಮಾಣ ಆಗಿತ್ತು. ‌ಘಟನೆ ಬಗ್ಗೆ ತನಿಖೆಗೆ ಮಂಗಳೂರು ಕಮಿಷನರ್ ಮೂರು ಪೊಲೀಸ್ ತಂಡಗಳನ್ನು ರಚಿಸಿದ್ದಾರೆ. ‌

Autorickshaw blast at Naguri in Mangalore, DGP says its a terror blast, tweets