ಬ್ರೇಕಿಂಗ್ ನ್ಯೂಸ್
13-10-20 07:50 pm Mangaluru Correspondent ಕರಾವಳಿ
ಮಂಗಳೂರು, ಅಕ್ಟೋಬರ್ 13: ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರೊ.ಅರಬಿ ಮತ್ತು ಪ್ರಕರಣದ ತನಿಖಾ ವರದಿಯನ್ನು ಮುಚ್ಚಿಟ್ಟು ಅನ್ಯಾಯ ಎಸಗಿದ ಮಾಜಿ ಕುಲಸಚಿವ ಡಾ.ಎ.ಎಂ. ಖಾನ್ ಅವರನ್ನು ಸರಕಾರಿ ಹುದ್ದೆಯಿಂದ ವಜಾಗೊಳಿಸಬೇಕೆಂದು ಆಗ್ರಹಿಸಿ ಎಬಿವಿಪಿ ವತಿಯಿಂದ ಕೋಣಾಜೆಯ ಮಂಗಳೂರು ವಿವಿ ಕ್ಯಾಂಪಸಿನಲ್ಲಿ ಪ್ರತಿಭಟನೆ ನಡೆಯಿತು.

ಪ್ರೊ.ಅರಬಿ ಮತ್ತು ಎ.ಎಂ. ಖಾನ್ ವಿರುದ್ಧ ಘೋಷಣೆ ಕೂಗುತ್ತಾ ವಿದ್ಯಾರ್ಥಿಗಳು ವಿವಿಯ ಆಡಳಿತ ಸೌಧದ ವರೆಗೆ ಮೆರವಣಿಗೆ ನಡೆಸಿದ್ರು. ಈ ವೇಳೆ ಮಾತನಾಡಿದ ಎಬಿವಿಪಿ ರಾಜ್ಯ ಸಹ ಕಾರ್ಯದರ್ಶಿ ಸಂದೇಶ್, ಇವರಿಬ್ಬರನ್ನು ವಿವಿಯಿಂದ ವಜಾಗೊಳಿಸಿ, ಪ್ರಕರಣ ದಾಖಲಿಸಬೇಕು. ಸೂಕ್ತ ಶಿಕ್ಷೆಯಾಗುವಂತೆ ವಿವಿಯ ಆಡಳಿತ ಮಾಡಬೇಕು ಎಂದು ಒತ್ತಾಯಿಸಿದರು. ರಾಜ್ಯ ಕಾರ್ಯಕಾರಿಣಿ ಸದಸ್ಯೆ ಕು.ದೀಪ್ತಿ ಮಡಿವಾಳ ಮಾತನಾಡಿ, ಇಂಥ ಪ್ರಕರಣ ಮುಂದೆಂದೂ ನಡೆಯಬಾರದು. ಆರೋಪಿಗಳಿಗೆ ಸೂಕ್ತ ಶಿಕ್ಷೆ ಆಗಬೇಕು ಎಂದು ಹೇಳಿದರು. ಆಬಳಿಕ ವಿವಿಯ ಕುಲಪತಿ ಪ್ರೊ. ಪಿ.ಎಸ್. ಯಡಪಡಿತ್ತಾಯರಿಗೆ ಮನವಿ ಸಲ್ಲಿಸಲಾಯಿತು. ಈ ವೇಳೆ ಮಾತನಾಡಿದ ಕುಲಪತಿ, ನನ್ನ ಆಡಳಿತದಲ್ಲಿ ಯಾವುದೇ ಕಾರಣಕ್ಕೂ ಆರೋಪಿಗಳು ಬಚಾವಾಗಲ್ಲ. ಕಾನೂನು ಪ್ರಕಾರ ಶಿಕ್ಷೆಯಾಗಲಿದೆ ಎಂದರು.
ಪ್ರತಿಭಟನೆಯಲ್ಲಿ ವಿದ್ಯಾರ್ಥಿ ನಾಯಕರಾದ ಆಶೀಶ್ ಅಜ್ಜಿಬೆಟ್ಟು, ನಿಶಾನ್ ಆಳ್ವ, ಶ್ರೇಯಸ್ ಶೆಟ್ಟಿ, ಆದಿತ್ಯ, ಹರ್ಷಿತ್, ಕು.ಸುಶಾನಾ, ಕು.ಆತ್ಮಿಕಾ ಭಾಗವಹಿಸಿದ್ದರು.
ಇದನ್ನು ಓದಿ: ಲೈಂಗಿಕ ಕಿರುಕುಳ ; ಪ್ರೊಫೆಸರ್ ರಕ್ಷಣೆಗೆ ಹೋಗಿ ಖೆಡ್ಡಾ ತೋಡಿಕೊಂಡ ರಿಜಿಸ್ಟ್ರಾರ್ !
ABVP Mangalore held a protest demanding to terminate professor Arabi over sexual assault case and Former Registrar DR AM Khan for hiding the case from Mangalore university here on Tuesday, 13 October 2020.
19-12-25 10:03 pm
HK News Desk
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 09:46 pm
Mangalore Correspondent
ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ;...
19-12-25 08:22 pm
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm