ಬ್ರೇಕಿಂಗ್ ನ್ಯೂಸ್
05-12-22 10:53 am Udupi Correspondent ಕರಾವಳಿ
ಕುಂದಾಪುರ, ಡಿ.5: ಹೆಜಮಾಡಿಯಲ್ಲಿ ಸುರತ್ಕಲ್ ಟೋಲ್ ದರವನ್ನೂ ಸೇರಿಸಿ ವಸೂಲಿ ಮಾಡುವ ಕ್ರಮಕ್ಕೆ ವ್ಯಾಪಕ ಜನಾಕ್ರೋಶ ವ್ಯಕ್ತವಾಗಿದ್ದರಿಂದ ಟೋಲ್ ದರ ಮನ್ನಾ ಮಾಡುವ ಕುರಿತು ಮುಖ್ಯಮಂತ್ರಿಗಳು ತೀರ್ಮಾನಿಸಲಿದ್ದಾರೆ ಎಂದು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಹೇಳಿದ್ದಾರೆ.
ಜಿಲ್ಲಾಧಿಕಾರಿಗಳು, ಶಾಸಕರು, ಸಚಿವರು ಇದ್ದು ಉಡುಪಿಯಲ್ಲಿ ನಡೆದ ಸಭೆಯಲ್ಲಿ ಈ ಕುರಿತು ಚರ್ಚೆ ನಡೆದಿದೆ. ಎರಡೂ ಟೋಲ್ ದರ ಒಟ್ಟಾಗಿ ಪಡೆಯುವ ಹೆದ್ದಾರಿ ಇಲಾಖೆಯ ನಿರ್ಧಾರವನ್ನು ವಿರೋಧಿಸಲಾಗಿದೆ. ವಿವಿಧ ಟೋಲ್‌ಗಳಿಗೆ ಹಂಚಿ ಹಾಕುವುದಕ್ಕೂ ವಿರೋಧ ಇದೆ. ರಸ್ತೆ ನಿರ್ಮಾಣ ಕುರಿತು ಒಟ್ಟು 400 ಕೋ.ರೂ. ಪಾವತಿಸಬೇಕಿದ್ದು ಈಗಾಗಲೇ 250 ಕೋ.ರೂ. ಟೋಲ್ ಮೂಲಕ ಸಂಗ್ರಹಿಸಿ ಪಾವತಿಸಲಾಗಿದೆ. ಇನ್ನುಳಿದ 150 ಕೋ.ರೂ.ಗಳನ್ನು ಮನ್ನಾ ಮಾಡಬೇಕೆಂದು ಕೇಂದ್ರಕ್ಕೆ ಮನವಿ ಮಾಡಲು ನಿರ್ಧರಿಸಲಾಗಿದೆ. ಆಡಳಿತ ಶಿಷ್ಟಾಚಾರದಂತೆ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿಯೇ ಈ ಕುರಿತು ಕೇಂದ್ರಕ್ಕೆ ಪತ್ರ ಬರೆಯಬೇಕಾದ ಕಾರಣ ಮುಖ್ಯಮಂತ್ರಿ ನೇತೃತ್ವದಲ್ಲಿ ಸಭೆ ನಡೆದು ಅಲ್ಲೇ ಸ್ಪಷ್ಟ ತೀರ್ಮಾನ ಆಗಲಿದೆ. ಸಾಸ್ತಾನ ಹಾಗೂ ಹೆಜಮಾಡಿ ಟೋಲ್ ಗೇಟ್ ಅಂತರವೂ ನಿಗದಿಗಿಂತ ಕಡಿಮೆ ಇದೆ ಎನ್ನುವುದನ್ನು ಚರ್ಚೆ ವೇಳೆ ಗಮನಕ್ಕೆ ತರಲಾಗಿದೆ ಎಂದರು.

ಪಕ್ಷ ಹೇಳಿದರೆ ಸ್ಪರ್ಧಿಸುತ್ತೇನೆ
ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವ ಇರಾದೆ ಇದೆಯೇ ಎಂದಾಗ, ಜನರಿಂದ ಒತ್ತಡ ಬರುತ್ತಿದೆ. ಈಗ ಸಾಂವಿಧಾನಿಕ ಹುದ್ದೆಯಲ್ಲಿ ಇರುವುದರಿಂದ ಯಾವುದೇ ತೀರ್ಮಾನ ಮಾಡಿಲ್ಲ. ಪಕ್ಷ ಸೂಚಿಸಿದರೆ ಈ ಹುದ್ದೆಗೆ ರಾಜೀನಾಮೆ ನೀಡಿ ಪಕ್ಷ ಹೇಳಿದ ಕ್ಷೇತ್ರದಲ್ಲಿ ಸ್ಪರ್ಧಿಸಲು ಸಿದ್ಧನಿದ್ದೇನೆ. ಯಾವ ಕ್ಷೇತ್ರ ಮೊದಲಾದವುಗಳ ಕುರಿತು ಯಾವುದೇ ಚರ್ಚೆ ನಡೆದಿಲ್ಲ, ಪಕ್ಷದಲ್ಲಿ ಈ ಕುರಿತಾದ ಬೆಳವಣಿಗೆ ನನ್ನ ಗಮನಕ್ಕೆ ಬಂದಿಲ್ಲ ಎಂದರು.
ಕೆಲಸ ಮಾಡುವ ಜನಪ್ರತಿನಿಧಿ ಬೇಕು ಎಂದು ಜನ ಬಯಸುತ್ತಿದ್ದಾರೆ. ಆದ್ದರಿಂದ ಯಾವುದಾದರೂ ಕ್ಷೇತ್ರದ ಶಾಸಕರ ಕೆಲಸ ಕಡಿಮೆ ಎಂದು ಜನರಿಗೆ ಹಾಗೂ ಪಕ್ಷಕ್ಕೆ ಅನಿಸಿದರೆ ಅಲ್ಲಿ ಸ್ಪರ್ಧಿಸಲು ಸೂಚಿಸಿದರೆ ನಾನು ನಿರಾಕರಿಸುವುದಿಲ್ಲ ಎಂದರು.
Backward Classes Commission chairman K Jayaprakash Hegde said the merger of Hejamady and Surathkal toll gates has met with mixed response from the citizens.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 04:58 pm
HK News Staffer
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
05-09-26 08:58 pm
HK News Staffer
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm