ಬ್ರೇಕಿಂಗ್ ನ್ಯೂಸ್
05-12-22 09:44 pm Mangalore Correspondent ಕರಾವಳಿ
ಮಂಗಳೂರು, ಡಿ.5 : ರೌಡಿ ಶೀಟರ್‌ಗಳನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ವಿಚಾರದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಸಮರ್ಥಿಸಿಕೊಂಡಿದ್ದು ತಮ್ಮ ಪಕ್ಷದ ನೈಜ ಸಿದ್ಧಾಂತ ಬಹಿರಂಗಪಡಿಸಿದ್ದಾರೆ. ಅವರ ಹೇಳಿಕೆ ಬಿಜೆಪಿಯ ನೈಜ ಮುಖವನ್ನು ಅನಾವರಣಗೊಳಿಸಿದೆ ಎಂದು ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ಮುಖಂಡ ರಮಾನಾಥ ರೈ ಹೇಳಿದ್ದಾರೆ.
ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ರಾಜಕಾರಣಿಗಳ ಮೇಲೆ ಪ್ರಕರಣ ದಾಖಲಾಗುವುದು ಸಾಮಾನ್ಯ ಎಂದು ಸಿ.ಟಿ ರವಿ ಹೇಳಿದ್ದಾರೆ. ಆದರೆ ಒಬ್ಬ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿ ರೌಡಿ ಶೀಟರ್ ಎಂದು ಪರಿಗಣಿಸುವುದರಲ್ಲಿ ವ್ಯತ್ಯಾಸವಿದೆ. ಒಬ್ಬ ವ್ಯಕ್ತಿ ತನ್ನ ಅಪರಾಧ ಕೃತ್ಯಗಳ ಮೂಲಕ ಪದೇ ಪದೇ ಸಾರ್ವಜನಿಕರಲ್ಲಿ ಭಯ ಹುಟ್ಟಿಸಿದಾಗ ಮಾತ್ರ ಪೊಲೀಸ್ ಇಲಾಖೆ ಅವರನ್ನು ರೌಡಿ ಶೀಟರ್ ಎಂದು ಪರಿಗಣಿಸುತ್ತದೆ. ಇಂಥವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವುದನ್ನು ರವಿ ಸಮರ್ಥಿಸಿಕೊಳ್ಳುವುದು ಎಷ್ಟು ಸರಿ? ಬಿಜೆಪಿ ಆಡಳಿತದಲ್ಲಿ ಕೋಮುಗಲಭೆ ತಾರಕಕ್ಕೆ ಏರಿದೆ. ಬುದ್ದಿವಂತರ ಜಿಲ್ಲೆ ಎಂದೇ ಕರೆಸಿಕೊಳ್ಳುವ ದಕ್ಷಿಣ ಕನ್ನಡ ಜಿಲ್ಲೆ ಕೋಮು ರಾಜಕಾರಣದಲ್ಲಿ ಕುದಿಯುತ್ತಿದೆ. ಒಂದು ಸಮುದಾಯದ ಜನರು ಇತರ ಸಮುದಾಯದ ಜನರನ್ನು ಕೊಲ್ಲುವುದು ಸಾಮಾನ್ಯವಾಗಿದೆ. ಸಿಟಿ ರವಿ ಅವರ ಹೇಳಿಕೆ ಇದಕ್ಕೂ ಅನ್ವಯಿಸುತ್ತದೆ ಎಂದು ಹೇಳಿದ್ದಾರೆ.
ನಮ್ಮ ಜಿಲ್ಲೆಯಲ್ಲಿ ಕೊಲೆಗಳ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ನಲ್ಲಿ ಕಾಂಗ್ರೆಸ್ ಮುಖಂಡರ ಅಥವಾ ಕಾರ್ಯಕರ್ತರ ಹೆಸರು ಇಲ್ಲ. ಈ ಮಾಹಿತಿಯನ್ನು ಯಾರು ಬೇಕಾದರೂ RTI ಮೂಲಕ ಪಡೆಯಬಹುದು ಎಂದು ಹೇಳಿದ ರಮಾನಾಥ ರೈ, ಜಿಲ್ಲೆಯಲ್ಲಿ ಕೋಮು ಕೊಲೆಗಳಿಗೆ ಕಾರಣರಾದವರು ಸ್ವಚ್ಛಂದವಾಗಿ ಓಡಾಡುತ್ತಿದ್ದಾರೆ. ಯಾವುದೇ ರಾಜಕೀಯ ಪಕ್ಷಕ್ಕೆ ಸೇರಿದ ಕೋಮು ಹತ್ಯೆಗೆ ಸಂಚು ರೂಪಿಸಿದವರನ್ನು ಪತ್ತೆ ಹಚ್ಚಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಈ ಉದ್ದೇಶಕ್ಕಾಗಿ ಎಸ್‌ಐಟಿ ರಚಿಸುವ ಅವಶ್ಯಕತೆಯಿದೆ. ನಮ್ಮ ಪಕ್ಷ ಮತ್ತೆ ಅಧಿಕಾರಕ್ಕೆ ಬಂದಾಗ ಅದೇ ರೀತಿ ರಚನೆ ಮಾಡುತ್ತೇವೆ ಎಂದು ಹೇಳಿದರು.
ಟೋಲ್ ಗೇಟ್ ಶುಲ್ಕ ಹಂಚಿಕೆಯನ್ನು ಒಪ್ಪಲ್ಲ
ಸುರತ್ಕಲ್ ಟೋಲ್ ಗೇಟ್ ಮುಚ್ಚಿದ ನಂತರ ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಟೋಲ್ ಶುಲ್ಕವನ್ನು ಹೆಚ್ಚಿಸಲಾಗುತ್ತದೆ ಎಂಬ ವದಂತಿಗಳು ಹರಡಿವೆ. ನಾವು ಇದನ್ನು ಸಂಪೂರ್ಣವಾಗಿ ವಿರೋಧಿಸುತ್ತೇವೆ. ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನೀಲ್ ಕುಮಾರ್ ಸುರತ್ಕಲ್ ಟೋಲ್ ಶುಲ್ಕವನ್ನು ಹಂಚಿಕೆ ಮಾಡುವುದಾಗಿ ಹೇಳಿದ್ದು ಅಕ್ಷಮ್ಯ. ರಸ್ತೆಗೆ ಸಂಬಂಧವೇ ಪಡದಿದ್ದರೂ ಶುಲ್ಕ ಕಟ್ಟಬೇಕೆಂದ್ರೆ ಏನರ್ಥ. ಜಿಲ್ಲಾ ಉಸ್ತುವಾರಿ ಸಚಿವರಿಗೆ ದಕ್ಷಿಣ ಕನ್ನಡ ಜಿಲ್ಲೆಯ ಹಿತ ಕಾಪಾಡುವಲ್ಲಿ ಕಿಂಚಿತ್ತೂ ಕಾಳಜಿ ಇಲ್ಲ ಎಂಬುದು ದೃಢಪಟ್ಟಿದೆ ಎಂದು ಆರೋಪಿಸಿದರು.
“BJP national chief secretary C T Ravi has defended the matter of including rowdy sheeters into the party. By this, Ravi has made public the real ideology of his party. His statement shows the real face of BJP,” said former minister and Congress leader Ramanath Rai. Speaking at a press conference on Monday December 5, Rai said, “C T Ravi said that it is common for cases to be registered against politicians.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm