ಬ್ರೇಕಿಂಗ್ ನ್ಯೂಸ್
05-12-22 11:03 pm Mangalore Correspondent ಕರಾವಳಿ
ಮಂಗಳೂರು, ಡಿ.5 : ಎರಡು ಕುಟುಂಬಗಳ ನಡುವಿನ ಸಿವಿಲ್ ಪ್ರಕರಣ ಸಂಬಂಧಿಸಿ ಪುಂಜಾಲಕಟ್ಟೆ ಪೊಲೀಸರು ಯುವ ವಕೀಲನಿಗೆ ಹಲ್ಲೆಗೈದು ಮನೆಯಿಂದಲೇ ಹೊತ್ತೊಯ್ದು ದೌರ್ಜನ್ಯ ಎಸಗಿದ ಆರೋಪ ಕೇಳಿಬಂದಿದೆ. ಈ ಬಗ್ಗೆ ವಕೀಲರ ಸಂಘದ ಕಡೆಯಿಂದ ತೀವ್ರ ಖಂಡನೆ ವ್ಯಕ್ತವಾಗಿದ್ದು ಬಂಟ್ವಾಳ ನ್ಯಾಯಾಲಯ ಸಂಕೀರ್ಣ ಮುಂದೆ ಪ್ರತಿಭಟನೆ ನಡೆಸಿದ್ದಾರೆ.
ದೇವಸ್ಯಮುಡೂರು ಎಂಬಲ್ಲಿನ ಜಾಗದ ವಿಚಾರಕ್ಕೆ ಸಂಬಂಧಿಸಿ ಎರಡೂ ತಂಡಗಳಿಂದ ಪುಂಜಾಲಕಟ್ಟೆ ಠಾಣೆಯಲ್ಲಿ ಕೇಸು ದಾಖಲಾಗಿತ್ತು. ಇದರ ನಡುವೆ, ತಮ್ಮ ಜಾಗದ ವಿಚಾರದಲ್ಲಿ ಮೂಗು ತೂರಿಸುವಂತಿಲ್ಲ. ಕೋರ್ಟಿನಲ್ಲಿ ಪ್ರಕರಣ ನಡೆಯುತ್ತಿದೆ ಎನ್ನುವ ಬಗ್ಗೆ ಯುವ ವಕೀಲ ಕುಲದೀಪ್ ಶೆಟ್ಟಿ ನ್ಯಾಯಾಲಯದಿಂದ ಇಂಜೆಕ್ಷನ್ ತಂದಿದ್ದರು.
ಈ ಮಧ್ಯೆ, ಸದ್ರಿ ಸ್ಥಳದಲ್ಲಿದ್ದ ಗೇಟ್ ಕಳವಾದ ಬಗ್ಗೆ ಪುಂಜಾಲಕಟ್ಟೆ ಠಾಣೆಗೆ ದೂರು ನೀಡಲಾಗಿತ್ತು. ದೂರಿನ ವಿಚಾರದಲ್ಲಿ ತರಾತುರಿಯಲ್ಲಿ ವಕೀಲ ಕುಲದೀಪ್ ವಿರುದ್ಧ ಪೊಲೀಸರು ಎಫ್ಐಆರ್ ದಾಖಲು ಮಾಡಿದ್ದಾರೆ. ಅಲ್ಲದೆ, ಠಾಣೆಗೆ ಬರುವಂತೆ ಕರೆ ಮಾಡಿದ್ದರು. ಆದರೆ ನಾವು ಗೇಟ್ ಕಳವು ಮಾಡಿಲ್ಲ. ಅದರ ಬಗ್ಗೆ ನನ್ನ ವಿರುದ್ಧ ಎಫ್ಐಆರ್ ದಾಖಲಿಸುವ ಅಗತ್ಯವಿಲ್ಲ ಎಂದು ಕುಲದೀಪ್ ಕಾನೂನು ಮಾತನಾಡಿದ್ದರು.
ಆದರೆ ಇದರ ನಡುವೆಯೇ ಪುಂಜಾಲಕಟ್ಟೆ ಠಾಣೆ ಎಸ್ಐ ಸುತೇಶ್ ಕುಮಾರ್ ಸಿಬಂದಿಯೊಂದಿಗೆ ನೇರವಾಗಿ ಕುಲದೀಪ್ ಮನೆಗೆ ಬಂದಿದ್ದರು. ಅಲ್ಲದೆ ಈ ವೇಳೆ ಪೊಲೀಸರು ಮನೆಯವರ ಎದುರಲ್ಲೇ ಕುಲದೀಪ್ ಮೇಲೆ ಹಲ್ಲೆ ನಡೆಸಿದ್ದಾರೆಂದು ದೂರಲಾಗಿದೆ. ಈ ಬಗ್ಗೆ ಮನೆಯವರು ಬೇಡಿಕೊಂಡರೂ ಕ್ಯಾರೆನ್ನದೆ, ಬಲವಂತದಿಂದ ಕುಲದೀಪ್ ಅವರನ್ನು ಜೀಪಿಗೆ ತಳ್ಳಿದ್ದಾರೆ. ಅಲ್ಲದೆ, ಕರ್ತವ್ಯಕ್ಕೆ ಅಡ್ಡಿ ಪಡಿಸಿದಲ್ಲಿ ನಿಮ್ಮ ವಿರುದ್ಧವೂ ಕೇಸು ದಾಖಲಿಸುತ್ತೇನೆಂದು ಎಸ್ಐ ಬೆದರಿಸಿದ್ದಾರೆ.
ಆಬಳಿಕ ಕುಲದೀಪ್ ಅವರನ್ನು ಠಾಣೆಗೆ ಕರೆದೊಯ್ದು ಗೇಟ್ ಕಳವು ಬಗ್ಗೆ ಹೇಳಿಕೆ ದಾಖಲು ಮಾಡಿದ್ದಾರೆ. ರಾತ್ರಿ ವೇಳೆ ಮನೆಗೆ ಬಂದು ದುರ್ವರ್ತನೆ ತೋರಿದ ಬಗ್ಗೆ ಕುಲದೀಪ್ ಮನೆಯವರು ವಿಡಿಯೋ ಮಾಡಿದ್ದಾರೆ. ಇದನ್ನು ಆಧರಿಸಿ ಬಂಟ್ವಾಳ ಕೋರ್ಟಿನಲ್ಲಿ ಪ್ರತ್ಯೇಕ ಕೇಸು ದಾಖಲು ಮಾಡಲಾಗಿದೆ.
ಘಟನೆ ಬಗ್ಗೆ ಮಂಗಳೂರಿನ ವಕೀಲರ ಸಂಘದ ಸದಸ್ಯರು ಸಭೆ ಸೇರಿ ಖಂಡನೆ ವ್ಯಕ್ತಪಡಿಸಿದ್ದಾರೆ. ದೌರ್ಜನ್ಯ ಎಸಗಿದ ಪೊಲೀಸರ ವಿರುದ್ಧ ಕ್ರಮ ಜರುಗಿಸುವಂತೆ ಮೇಲಧಿಕಾರಿಗಳಿಗೆ ಆಗ್ರಹ ಮಾಡಿದ್ದಾರೆ.
Young law professional assaulted, bar council members protest against police in bantwala.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
11-05-25 11:02 pm
HK News Desk
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ ; ಬಿಎಸ್ಎಫ್ ಯೋಧ,...
11-05-25 01:43 pm
India Pak War: ಪೆಟ್ಟು ತಿಂದರೂ ಬಿಡದ ಪಾಕ್ ನರಿಬುದ...
10-05-25 11:05 pm
11-05-25 05:01 pm
Mangalore Correspondent
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm