ಬ್ರೇಕಿಂಗ್ ನ್ಯೂಸ್
08-12-22 09:14 pm Mangalore Correspondent ಕರಾವಳಿ
ಮಂಗಳೂರು, ಡಿ.8: ಗುಜರಾತ್ ವಿಧಾನಸಭೆ ಚುನಾವಣಾ ಫಲಿತಾಂಶ ಬಂದಿದ್ದು, ರಾಜ್ಯದಲ್ಲಿ ಒಟ್ಟು ಚಲಾವಣೆಯಾದ ಮತಗಳಲ್ಲಿ 13 ಶೇಕಡಾ ಮತಗಳನ್ನು ಪಡೆದಿರುವುದರಿಂದ ಆಮ್ ಆದ್ಮಿ ಪಾರ್ಟಿ ರಾಷ್ಟ್ರೀಯ ರಾಜಕೀಯ ಪಾರ್ಟಿ ಆಗಿ ಮಾನ್ಯತೆ ಪಡೆಯಲು ಶಕ್ತವಾಗಿದೆ. ಇಂತಹ ಬೆಳವಣಿಗೆ ಆಗಿರುವುದು ಅತೀವ ಸಂತಸ ತಂದಿದೆ ಎಂದು ಆಮ್ ಆದ್ಮಿ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷ, ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಆಪ್ ಅಭ್ಯರ್ಥಿ ಕೆ. ಸಂತೋಷ ಕಾಮತ್ ಹೇಳಿದ್ದಾರೆ.
ಗುಜರಾತ್ ರಾಜ್ಯದ ವಿಧಾನಸಭಾ ಚುನಾವಣೆಯಲ್ಲಿ ನಿರೀಕ್ಷಿತ ಪ್ರಮಾಣದ ಸೀಟುಗಳನ್ನು ಗೆಲ್ಲಲು ಸಾಧ್ಯ ಆಗದಿದದ್ದರೂ ರಾಜ್ಯದಲ್ಲಿ ಶೇಕಡ 13ರಷ್ಟು ಮತಗಳನ್ನು ಪಡೆದುಕೊಂಡಿದ್ದೇವೆ. ಆಮ್ ಆದ್ಮಿ ಪಾರ್ಟಿ ಈಗಾಗಲೇ ದೆಹಲಿ, ಪಜಾಬ್ ಮತ್ತು ಗೋವಾ ರಾಜ್ಯಗಳಲ್ಲಿ ರಾಜ್ಯ ಮಟ್ಟದ ರಾಜಕೀಯ ಪಕ್ಷವೆಂದು ಚುನಾವಣಾ ಆಯೋಗದಿಂದ ಮಾನ್ಯತೆ ಪಡೆದುಕೊಂಡಿತ್ತು. ಇದೀಗ ಗುಜರಾತ್ ರಾಜ್ಯದಲ್ಲಿ ಕೂಡ ಮಾನ್ಯತೆ ದೊರೆಯಲಿದೆ. ನಾಲ್ಕು ರಾಜ್ಯಗಳಲ್ಲಿ ಮಾನ್ಯತೆ ಪಡೆದ ರಾಜಕೀಯ ಪಕ್ಷವಾಗಿ ಮನ್ನಣೆ ಪಡೆಯುವ ಪಕ್ಷವನ್ನು ರಾಷ್ಟ್ರೀಯ ರಾಜಕೀಯ ಪಕ್ಷ ಎಂದು ಭಾರತ ಚುನಾವಣಾ ಆಯೋಗ ಪರಿಗಣಿಸುತ್ತದೆ. ಈ ನಿಟ್ಟಿನಲ್ಲಿ ಚುನಾವಣಾ ಆಯೋಗ ಅಧಿಕೃತ ಪ್ರಕಟಣೆ ಹೊರಡಿಸಬೇಕಾಗಿದೆ ಎಂದು ಸಂತೋಷ್ ಕಾಮತ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದೆಹಲಿ, ಪಂಜಾಬ್ ರಾಜ್ಯಗಳಲ್ಲಿ ಆಮ್ ಅದ್ಮಿ ಪಾರ್ಟಿ ಈಗಾಗಲೇ ಸರಕಾರ ರಚಿಸಿದೆ. ಗೋವಾ ರಾಜ್ಯದಲ್ಲಿ ಮಾನ್ಯತೆ ಪಡೆದ ರಾಜಕೀಯ ಪಕ್ಷವಾಗಿದೆ. ಯಾವುದೇ ರಾಜಕೀಯ ಪಕ್ಷವು ರಾಜ್ಯದಲ್ಲಿ ರಾಜ್ಯ ಪಕ್ಷವಾಗಿ ಗುರುತಿಸಿಕೊಳ್ಳಲು, ಐದು ಷರತ್ತುಗಳಲ್ಲಿ ಯಾವುದನ್ನಾದರೂ ಒಂದನ್ನು ಪೂರೈಸಿರಬೇಕು.
ರಾಷ್ಟ್ರೀಯ ರಾಜಕೀಯ ಪಕ್ಷ ಮಾನ್ಯತೆಗೆ ಷರತ್ತುಗಳು
1) ಒಂದು ರಾಜ್ಯದ ಒಟ್ಟು ಚಲಾವಣೆಯಾದ ಮತಗಳಲ್ಲಿ ಕನಿಷ್ಠ 6% ರಷ್ಟು ಪಡೆದಿರಬೇಕು ಮತ್ತು ಅಸೆಂಬ್ಲಿ ಸಾರ್ವತ್ರಿಕ ಚುನಾವಣೆಯಲ್ಲಿ ಕನಿಷ್ಠ 2 ಸ್ಥಾನಗಳನ್ನು ಗೆಲ್ಲಬೇಕು.
2) ಚುನಾವಣೆಯಲ್ಲಿ ಕನಿಷ್ಠ 6% ಮತವನ್ನು ಪಡೆಯಬೇಕು ಮತ್ತು ಲೋಕಸಭೆ ಸಾರ್ವತ್ರಿಕ ಚುನಾವಣೆಯಲ್ಲಿ ಕನಿಷ್ಠ 1 ಸ್ಥಾನವನ್ನು ಗೆಲ್ಲಬೇಕು.
3) ಅಸೆಂಬ್ಲಿ ಸಾರ್ವತ್ರಿಕ ಚುನಾವಣೆಯಲ್ಲಿ ಕನಿಷ್ಠ 3% ಸ್ಥಾನಗಳನ್ನು ಅಥವಾ ಕನಿಷ್ಠ 3 ಸ್ಥಾನಗಳನ್ನು ಗೆದ್ದಿರಬೇಕು.
4) ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಒಂದು ರಾಜ್ಯದಿಂದ ಪ್ರತಿ 25 ಸ್ಥಾನಗಳಲ್ಲಿ ಕನಿಷ್ಠ 1 ಸ್ಥಾನವನ್ನು ಗೆಲ್ಲಬೇಕು.
ಪ್ರಯೋಜನಗಳು
ಮೊದಲನೆಯದಾಗಿ ರಾಷ್ಟ್ರೀಯ ಅಥವಾ ರಾಜ್ಯ ಪಕ್ಷವಾಗಿ ಗುರುತಿಸಿಕೊಳ್ಳುವುದರಿಂದ ಆ ಪಕ್ಷದ ಚುನಾವಣಾ ಚಿಹ್ನೆಯನ್ನು ದೇಶದಾದ್ಯಂತ ಯಾವುದೇ ಇತರ ಪಕ್ಷಗಳು ಚುನಾವಣೆಯಲ್ಲಿ ಬಳಸಲಾಗುವುದಿಲ್ಲ ಎಂದು ಖಚಿತಪಡಿಸುತ್ತದೆ. ಮಾನ್ಯತೆ ಪಡೆದ ‘ರಾಜ್ಯ’ ಮತ್ತು ‘ರಾಷ್ಟ್ರೀಯ’ ಪಕ್ಷಕ್ಕೆ ನಾಮನಿರ್ದೇಶನವನ್ನು ಸಲ್ಲಿಸಲು ಕೇವಲ ಒಬ್ಬ ಸೂಚಕನ ಅಗತ್ಯವಿದೆ. ಮಾನ್ಯತೆ ಪಡೆದ ‘ರಾಜ್ಯ’ ಮತ್ತು ರಾಷ್ಟ್ರೀಯ ಪಕ್ಷಗಳಿಗೆ ಚುನಾವಣಾ ಆಯೋಗವು ಎರಡು ಸೆಟ್ ಮತದಾರರ ಪಟ್ಟಿಗಳನ್ನು ಉಚಿತವಾಗಿ ನೀಡುತ್ತದೆ. ಇದರ ಜೊತೆಗೆ ರಾಷ್ಟ್ರೀಯ ಅಥವಾ ರಾಜ್ಯ ಪಕ್ಷದ ಟಿಕೆಟ್‌ನಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳು ಸಾರ್ವತ್ರಿಕ ಚುನಾವಣೆಯ ಸಮಯದಲ್ಲಿ ಮತದಾರರ ಪಟ್ಟಿಯ ಪ್ರತಿಯನ್ನು ಉಚಿತವಾಗಿ ಪಡೆಯುತ್ತಾರೆ.
ರಾಷ್ಟ್ರೀಯ ಪಕ್ಷಗಳು 40 ಸ್ಟಾರ್ ಪ್ರಚಾರಕರನ್ನು ಹೊಂದಬಹುದು ಮತ್ತು ಇತರರು 20 ಸ್ಟಾರ್ ಪ್ರಚಾರಕರನ್ನು ಹೊಂದಬಹುದು. ಪಕ್ಷದ ಅಭ್ಯರ್ಥಿಗಳ ಚುನಾವಣಾ ವೆಚ್ಚದಲ್ಲಿ ಸ್ಟಾರ್ ಪ್ರಚಾರಕರ ಪ್ರಯಾಣ ಮತ್ತು ಇತರ ವೆಚ್ಚಗಳನ್ನು ಸೇರಿಸಲಾಗುವುದಿಲ್ಲ.
Gujarat, the incumbent Bharatiya Janata Party has so far bagged close to 53 per cent of the vote share, up from 49.1 in the 2017 state elections when it won 99 seats and formed the government. The Congress is struggling to cross 27 per cent, a huge drop from 41.4 per cent last time, current trends from vote counting show. Congress won 77 seats last time.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
11-05-25 11:02 pm
HK News Desk
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ ; ಬಿಎಸ್ಎಫ್ ಯೋಧ,...
11-05-25 01:43 pm
India Pak War: ಪೆಟ್ಟು ತಿಂದರೂ ಬಿಡದ ಪಾಕ್ ನರಿಬುದ...
10-05-25 11:05 pm
11-05-25 05:01 pm
Mangalore Correspondent
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm