ಬ್ರೇಕಿಂಗ್ ನ್ಯೂಸ್
09-12-22 11:37 am Mangalore Correspondent ಕರಾವಳಿ
ಮಂಗಳೂರು, ಡಿ.9 : ನಗರದ ಕಾಲೇಜೊಂದರ ಮುಸ್ಲಿಂ ವಿದ್ಯಾರ್ಥಿಗಳು ಹೆಣ್ಮಕ್ಕಳ ಬುರ್ಖಾ ಧರಿಸಿ ಹಿಂದಿ ಐಟಂ ಸಾಂಗ್ ಗೆ ಡ್ಯಾನ್ಸ್ ಮಾಡಿದ್ದು ಅದರ ವಿಡಿಯೋ ವೈರಲ್ ಆದ ಬೆನ್ನಲ್ಲೇ ಸಮುದಾಯದ ಕೆಲವರಿಂದ ಆಕ್ಷೇಪ ವ್ಯಕ್ತವಾಗಿದೆ.
ವಾಮಂಜೂರು ಸೈಂಟ್ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿದ್ಯಾರ್ಥಿ ಘಟಕದ ಕಾರ್ಯಕ್ರಮದಲ್ಲಿ ಮುಸ್ಲಿಂ ವಿದ್ಯಾರ್ಥಿಗಳು ಡ್ಯಾನ್ಸ್ ಮಾಡಿದ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದೆ. ಬುರ್ಖಾ ಧರಿಸಿ ಐಟಂ ಡ್ಯಾನ್ಸ್ ಮಾಡಿದ್ದಕ್ಕೆ ಧಾರ್ಮಿಕ ಕಟ್ಟುಪಾಡುಗಳಿಗೆ ಧಕ್ಕೆಯಾಗಿದೆ ಎಂದು ಜಾಲತಾಣದಲ್ಲಿ ಕೆಲವರು ಆಕ್ಷೇಪ ಎತ್ತಿದ್ದಾರೆ. ಜಾಲತಾಣದಲ್ಲಿ ಡ್ಯಾನ್ಸ್ ಮಾಡಿರುವ ಮುಸ್ಲಿಂ ವಿದ್ಯಾರ್ಥಿಗಳ ಬಗ್ಗೆ ಮತ್ತು ಕಾಲೇಜಿನ ಬಗ್ಗೆಯೂ ಆಕ್ರೋಶ ವ್ಯಕ್ತವಾಗಿದೆ.
ಮುಸ್ಲಿಂ ಸಮುದಾಯದ ಆಕ್ರೋಶದ ಹಿನ್ನೆಲೆಯಲ್ಲಿ ನಾಲ್ವರು ವಿದ್ಯಾರ್ಥಿಗಳನ್ನು ಕಾಲೇಜಿನಿಂದ ಅಮಾನತು ಮಾಡಲಾಗಿದೆ. ಅಲ್ಲದೆ, ಈ ಬಗ್ಗೆ ಪ್ರಭಾರ ಪ್ರಾಂಶುಪಾಲ ಡಾ.ಸುಧೀರ್ ಸ್ಪಷ್ಟನೆ ಕೊಟ್ಟಿದ್ದು ವಿದ್ಯಾರ್ಥಿ ಘಟಕದ ಉದ್ಘಾಟನೆ ಸಂದರ್ಭದಲ್ಲಿ ಡ್ಯಾನ್ಸ್ ಮಾಡಲಾಗಿತ್ತು. ಅದು ಕಾಲೇಜಿನ ಅಧಿಕೃತ ಕಾರ್ಯಕ್ರಮ ಆಗಿರಲಿಲ್ಲ. ಹಾಗಿದ್ದರೂ ಡ್ಯಾನ್ಸ್ ಮಾಡಿರುವ ವಿದ್ಯಾರ್ಥಿಗಳನ್ನು ಅಮಾನತು ಮಾಡಲಾಗಿದ್ದು ಆಂತರಿಕ ತನಿಖೆ ನಡೆಸಲಾಗುವುದು. ಯಾವುದೇ ಸಮುದಾಯಕ್ಕೆ ಹಾನಿಯಾಗುವ ರೀತಿ ಕಾರ್ಯಕ್ರಮ ನಡೆಸುವುದಕ್ಕೆ ಅಥವಾ ಸಮಾಜದ ಸಾಮರಸ್ಯಕ್ಕೆ ಧಕ್ಕೆಯಾಗುವ ರೀತಿ ನಡೆದುಕೊಳ್ಳುವುದಕ್ಕೆ ಕಾಲೇಜಿನ ಪ್ರೋತ್ಸಾಹ ಇರುವುದಿಲ್ಲ ಎಂದು ಹೇಳಿದ್ದಾರೆ.
16 ಸೆಕೆಂಡಿನ ವಿಡಿಯೋದಲ್ಲಿ ವಿದ್ಯಾರ್ಥಿಗಳು ಸ್ಟೇಜ್ ನಲ್ಲಿ ಬುರ್ಖಾ ಧರಿಸಿ ಕುಣಿದಿದ್ದಾರೆ. ಇದಕ್ಕೆ ಮುಸ್ಲಿಂ ಸಮುದಾಯದ ಕೆಲವರಿಂದ ಆಕ್ಷೇಪ ಕೇಳಿಬಂದಿದೆ.
#Mangalore #Muslim students wearing #burqa and dancing goes viral, Four boy students of #StJosephcollege suspended #BREAKING pic.twitter.com/eEB3XecCcc
— Headline Karnataka (@hknewsonline) December 9, 2022
Mangalore Muslim students wearing burqa and dancing goes viral, Four boy students of St Joseph Engineering College suspended. The programme had taken place in the college on the evening of Wednesday. After the programme was over, students of the college got on to the dais and danced wearing burqas.
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
14-05-26 12:36 pm
HK News Staffer
ಜ್ಯೋತಿಷಿಗೆ ಕೂಡದ ಜಾತಕ ; ಟೀಕೆಗಳ ಸುಳಿಯಲ್ಲಿ ವಿಜಯ್...
13-05-26 06:42 pm
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
14-05-26 01:41 pm
HK News Staffer
ತುಮಕೂರಿನ ಮದರಸಾದಲ್ಲಿ ಸಿಬ್ಬಂದಿಗಳಿಂದ ಮಕ್ಕಳ ಮೇಲೆ...
14-05-26 10:49 am
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm