ಬ್ರೇಕಿಂಗ್ ನ್ಯೂಸ್
13-12-22 02:03 pm Mangalore Correspondent ಕರಾವಳಿ
ಮಂಗಳೂರು, ಡಿ.13: ಬೈಕಂಪಾಡಿಯ ಮಾಲಿನ್ಯ ನಿಯಂತ್ರಣ ಮಂಡಳಿ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ. ಲೋಕಾಯುಕ್ತ ಎಸ್ಪಿ ಲಕ್ಷ್ಮೀ ಗಣೇಶ್ ಮತ್ತು ಡಿವೈಎಸ್ಪಿ ಚೆಲುವರಾಜು ನೇತೃತ್ವದಲ್ಲಿ ದಾಳಿ ನಡೆದಿದ್ದು ಕಚೇರಿಯಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ.
ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಫೈಲ್ ಗಳನ್ನು ಕ್ಲೀಯರ್ ಮಾಡಲು ಹಣಕ್ಕೆ ಬೇಡಿಕೆ ಇಟ್ಟಿರುವ ಆರೋಪದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸಣ್ಣ ಪುಟ್ಟ ಕೈಗಾರಿಕೆಗಳ ಲೈಸನ್ಸ್ ನವೀಕರಣ ಮಾಡುವುದಕ್ಕೂ ಅಧಿಕಾರಿಗಳು ಡಿಮಾಂಡ್ ಇಟ್ಟಿರುವ ಬಗ್ಗೆ ದೂರು ಬಂದಿದ್ದರಿಂದ ಲೋಕಾಯುಕ್ತ ದಾಳಿ ನಡೆದಿದೆ.
ದೂರಿನ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಬೈಕಂಪಾಡಿಯಲ್ಲಿರುವ ಮಾಲಿನ್ಯ ನಿಯಂತ್ರಣ ಮಂಡಳಿ ಕಚೇರಿ ಮೇಲೆ ದಾಳಿ ನಡೆಸಿ, ಕಡತಗಳ ಪರಿಶೀಲನೆ ನಡೆಸಿದ್ದಾರೆ. ಕೈಗಾರಿಕೆಗಳ ಸಂಬಂಧಪಟ್ಟ ಕಡತಗಳನ್ನು ವಿನಾಕಾರಣ ಬಾಕಿ ಇಡಲಾಗಿದೆಯೇ ಎಂದು ತಪಾಸಣೆ ನಡೆಸಿದ್ದಾರೆ. ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ತಮ್ಮ ಕರ್ತವ್ಯ ನಿರ್ವಹಿಸದೆ, ಸಣ್ಣ ಪುಟ್ಟ ಕೈಗಾರಿಕೆಗಳಿಂದಲೂ ಹಣಕ್ಕಾಗಿ ಡಿಮ್ಯಾಂಡ್ ಮಾಡುವುದು, ಹಣ ಪಡೆದು ಮಾಲಿನ್ಯವನ್ನು ಸಾರ್ವಜನಿಕ ಪ್ರದೇಶಕ್ಕೆ ಹರಿಸಲು ಅವಕಾಶ ಕೊಡುವುದು ಇತ್ಯಾದಿ ಆರೋಪಗಳಿದ್ದವು. ಮುಕ್ಕ, ಕುಳಾಯಿ ಪ್ರದೇಶದಲ್ಲಿ ಸಮುದ್ರ ತೀರದಲ್ಲಿ ಬಹಳಷ್ಟು ಫಿಶ್ ಮಿಲ್ ಕಂಪನಿಗಳು ಮಾಲಿನ್ಯವನ್ನು ನೇರವಾಗಿ ಸಮುದ್ರಕ್ಕೆ ಬಿಡುತ್ತಿದ್ದರೂ, ಕಚೇರಿಯ ಅಧಿಕಾರಿಗಳು ಗಿಂಬಳ ಪಡೆದು ಮೌನವಾಗಿ ಇರುತ್ತಿದ್ದರು.
ಎಂಆರ್ ಪಿಎಲ್, ಬಿಎಸ್ಎಫ್ ರೀತಿಯ ದೊಡ್ಡ ಕೈಗಾರಿಕೆಗಳ ಮಾಲಿನ್ಯದ ಬಗ್ಗೆ ಜೋಕಟ್ಟೆಯ ನಾಗರಿಕರು ಬಹಳಷ್ಟು ಬಾರಿ ಪ್ರತಿಭಟನೆ ನಡೆಸಿದರೂ, ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ತಮಗೂ ಅದಕ್ಕೂ ಸಂಬಂಧವೇ ಇಲ್ಲ ಎನ್ನುವ ರೀತಿ ವರ್ತಿಸುತ್ತಿದ್ದರು. ಇದೀಗ ಮೊದಲ ಬಾರಿಗೆ ಲೋಕಾಯುಕ್ತ ಅಧಿಕಾರಿಗಳು ಬಿಸಿ ಮುಟ್ಟಿಸಿದ್ದಾರೆ.
Lokayukta raids the Environmental department in Baikampady Mangalore. Checks Emilas after receiving too many complaints over clearance.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:23 am
HK News Desk
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ ; ಬಿಎಸ್ಎಫ್ ಯೋಧ,...
11-05-25 01:43 pm
12-05-25 11:26 am
HK News Desk
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm