ಬ್ರೇಕಿಂಗ್ ನ್ಯೂಸ್
13-12-22 07:39 pm Mangalore Correspondent ಕರಾವಳಿ
ಮಂಗಳೂರು, ಡಿ.13: ಪದವಿ ವಿದ್ಯಾರ್ಥಿಗಳ ಪರೀಕ್ಷೆ ಫಲಿತಾಂಶ ಪ್ರಕಟಿಸದೆ ವಿಶ್ವವಿದ್ಯಾನಿಲಯಗಳಲ್ಲಿ ಸತಾಯಿಸಲಾಗುತ್ತಿದೆ, ಪಿಯು, ಪದವಿ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನವನ್ನು ರಾಜ್ಯ ಸರಕಾರ ಸಕಾಲದಲ್ಲಿ ಕೊಡದೆ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿದೆ ಮುಂತಾದ ವಿಚಾರಗಳನ್ನು ಮುಂದಿಟ್ಟು ಡಿ.17ರಂದು ಕರ್ನಾಟಕ ರಾಜ್ಯಾದ್ಯಂತ ಎಲ್ಲ ವಿಶ್ವವಿದ್ಯಾನಿಲಯಗಳು ಹಾಗೂ ಪದವಿ ಕಾಲೇಜುಗಳಲ್ಲಿ ತರಗತಿ ಬಹಿಷ್ಕರಿಸಿ ವಿದ್ಯಾರ್ಥಿಗಳು ಒಂದು ದಿನದ ಮುಷ್ಕರ ನಡೆಸಲಿದ್ದಾರೆ ಎಂದು ಎನ್ಎಸ್ ಯುಐ ಘಟಕದ ರಾಜ್ಯ ಉಪಾಧ್ಯಕ್ಷ ಫಾರೂಕ್ ಬಯಾಬೆ ತಿಳಿಸಿದ್ದಾರೆ.
ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ವತಿಯಿಂದ ರಾಜ್ಯ ಮತ್ತು ಕೇಂದ್ರ ಸರಕಾರಕ್ಕೆ ಬಿಸಿ ಮುಟ್ಟಿಸುವ ಸಲುವಾಗಿ ಡಿ.17ರಂದು ಪ್ರತಿಭಟನೆ ಆಯೋಜಿಸಲಾಗಿದೆ. ಈಗಾಗಲೇ ಪದವಿ ಪರೀಕ್ಷೆ ಮುಗಿದು ಆರೇಳು ತಿಂಗಳು ಕಳೆದರೂ ಫಲಿತಾಂಶವನ್ನು ಪ್ರಕಟಿಸಿರುವುದಿಲ್ಲ. ಇದರಿಂದ ಮುಂದಿನ ಸೆಮಿಸ್ಟರ್ ಓದಲು ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ. 2022-23ನೇ ಸಾಲಿನಲ್ಲಿ ಪ್ರಿ ಮೆಟ್ರಿಕ್ ಹಾಗೂ ಪೋಸ್ಟ್ ಮೆಟ್ರಿಕ್ ವಿದ್ಯಾರ್ಥಿ ವೇತನವನ್ನು ಪಡೆಯಲು ವಿದ್ಯಾರ್ಥಿಗಳು ಎನ್ ಎಸ್ ಪಿ ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಿದ್ದರೂ, ಇದುವರೆಗೂ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್ ದೊರಕಿಲ್ಲ.
ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ನೀಡುತ್ತಿದ್ದ ವಿದ್ಯಾರ್ಥಿ ವೇತನವನ್ನು ಏಕಾಏಕಿ ತಡೆ ಹಿಡಿದು ಕಾಲೇಜಿನ ಪ್ರವೇಶ ಶುಲ್ಕವನ್ನು ಹೆಚ್ಚಿಸಲಾಗಿದೆ. ಇದರಿಂದ ಬಹಳಷ್ಟು ಕಡೆಗಳಲ್ಲಿ ವಿದ್ಯಾರ್ಥಿಗಳು ತೊಂದರೆ ಪಡುತ್ತಿದ್ದಾರೆ. ವಿದ್ಯಾರ್ಥಿಗಳಿಗೆ ಬಸ್ ಪಾಸ್ ನೀಡುವುದಾಗಿ ಹೇಳಿ ಬಸ್ ದರವನ್ನು ಹೆಚ್ಚಿಸಲಾಗಿದ್ದು ಇದರಿಂದ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ, ಇವೆಲ್ಲ ಲೋಪಗಳನ್ನು ಮುಂದಿಟ್ಟು ರಾಜ್ಯ ಸರಕಾರ ಮತ್ತು ವಿವಿಗಳ ಆಡಳಿತಕ್ಕೆ ಬಿಸಿ ಮುಟ್ಟಿಸಲು ರಾಜ್ಯಾದ್ಯಂತ ವಿದ್ಯಾರ್ಥಿಗಳು ಪ್ರತಿಭಟನೆ ಹಮ್ಮಿಕೊಳ್ಳಲಿದ್ದಾರೆ ಎಂದು ಹೇಳಿದರು.
Mangalore University troubles PU Students without releasing results, NSUI calls for protest all over state.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:23 am
HK News Desk
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ ; ಬಿಎಸ್ಎಫ್ ಯೋಧ,...
11-05-25 01:43 pm
12-05-25 11:26 am
HK News Desk
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm