ಬ್ರೇಕಿಂಗ್ ನ್ಯೂಸ್
13-12-22 08:47 pm Mangalore Correspondent ಕರಾವಳಿ
ಮಂಗಳೂರು, ಡಿ.13 : ಕೆನರಾ ಹೈಸ್ಕೂಲ್ ಎಸೋಸಿಯೇಶನ್ ಪ್ರಾಯೋಜಿತ ಕೆನರಾ ಇಂಜಿನಿಯರಿಂಗ್ ಕಾಲೇಜು ಕ್ಯಾಂಪಸ್ ನಲ್ಲಿ ನಿರ್ಮಾಣವಾಗಲಿರುವ ಬಹುವಿಧ ಸೌಲಭ್ಯಗಳಿರುವ 5 ಕೋಟಿ ರೂ. ವೆಚ್ಚದ ಆಕ್ಟಿವಿಟಿ ಸೆಂಟರ್ ಗೆ ಕೆನರಾ ಶಿಕ್ಷಣ ಸಂಸ್ಥೆಯ ಹಳೆ ವಿದ್ಯಾರ್ಥಿಯೂ ಆಗಿರುವ ಉದ್ಯಮಿ ಸೆಂಚುರಿ ಬಿಲ್ಡರ್ಸ್ ಆಡಳಿತ ನಿರ್ದೇಶಕ ಡಾ.ಪಿ.ದಯಾನಂದ ಪೈ ಮೊದಲ ಹಂತದಲ್ಲಿ ತಮ್ಮ ಎರಡು ಕೋಟಿ ರೂಪಾಯಿಗಳ ಕೊಡುಗೆಯನ್ನು ಘೋಷಿಸಿದ್ದಾರೆ.
ಕಾಲೇಜಿನ ಆವರಣದಲ್ಲಿ ನವೀಕೃತ ಅಕಾಡೆಮಿಕ್ ಬ್ಲಾಕ್ ಉದ್ಘಾಟಿಸುವ ಸಂದರ್ಭದಲ್ಲಿ ಅವರು ಈ ಕೊಡುಗೆಯನ್ನು ಘೋಷಿಸಿದರು. ಶತಮಾನದ ಇತಿಹಾಸವಿರುವ ಕೆನರಾ ಶಿಕ್ಷಣ ಸಂಸ್ಥೆಗಳ ಸಾಧನೆ ದೊಡ್ಡದು ಎಂದ ಅವರು ತನ್ನ ವೃತ್ತಿ ಜೀವನ ರೂಪಿಸುವಲ್ಲಿ ಕೆನರಾ ಶಿಕ್ಷಣ ಸಂಸ್ಥೆಗಳ ಋಣ ತೀರಿಸಲಾಗದ್ದು. ಈ ಭಾವನಾತ್ಮಕ ಬಾಂಧವ್ಯ ತನ್ನ ಕುಟುಂಬದ ಜತೆ ನಿರಂತರವಾಗಿರಬೇಕು ಎಂದವರು ಆಶಯ ವ್ಯಕ್ತಪಡಿಸಿದರು.
ಸುಮಾರು 5 ಕೋಟಿ ರೂ. ವೆಚ್ಚದಲ್ಲಿ 20 ಸಾವಿರ ಚದರ ಅಡಿ ವಿಸ್ತಾರದಲ್ಲಿ ನಿರ್ಮಾಣ ಗೊಳ್ಳಲಿರುವ ಸ್ಟೂಡೆಂಟ್ಸ್ ಆಕ್ಟಿವಿಟಿ ಸೆಂಟರ್ 2 ಸಾವಿರ ಆಸನ ಸಾಮರ್ಥ್ಯ, ಪ್ರಸಕ್ತ ಯುವ ಪೀಳಿಗೆಯ ಸರ್ವಾಂಗೀಣ ವಿಕಾಸಕ್ಕೆ ಪೂರಕ ಸೌಲಭ್ಯಗಳು, ಪಠ್ಯೇತರ ಪೂರಕ ಚಟುವಟಿಕೆಗಳಿಗೆ ಈ ಸೆಂಟರ್ ವೇದಿಕೆಯಾಗಲಿದೆ. ಮಿನಿ ಥಿಯೇಟರ್ ಸೇರಿದಂತೆ ವಿದ್ಯಾರ್ಥಿಗಳ ಅಗತ್ಯಗಳಿಗೆ ಪೂರಕವಾಗಿ ಎಲ್ಲ ವೈವಿಧ್ಯತೆಯ ಸೌಲಭ್ಯಗಳನ್ನು ಒದಗಿಸುವ ಯೋಜನೆ ಇದಾಗಿದೆ.
ಈ ಸಂದರ್ಭದಲ್ಲಿ ಶ್ರೀಮತಿ ಮೋಹಿನಿ ಡಿ.ಪೈ ಮಣಿಪಾಲ್ ಗ್ಲೋಬಲ್ ಎಜುಕೇಶನ್ ಚೇರ್ಮನ್ ಪದ್ಮಶ್ರೀ ಟಿ.ವಿ.ಮೋಹನದಾಸ್ ಪೈ, ಹಾಂಗ್ಯೋ ಐಸ್ ಕ್ರೀಮ್ ಲಿಮಿಟೆಡ್ ಮ್ಯಾನೇಜಿಂಗ್ ಡೈರೆಕ್ಟರ್ ಪ್ರದೀಪ್ ಜಿ. ಪೈ, ಕೆನರಾ ಹೈಸ್ಕೂಲ್ ಎಸೋಸಿಯೇಶನ್ ಅಧ್ಯಕ್ಷ ಡಿ.ವಾಸುದೇವ ಕಾಮತ್, ಉಪಾಧ್ಯಕ್ಷ ಎಂ. ಪದ್ಮನಾಭ ಪೈ, ಕಾರ್ಯದರ್ಶಿ ಎಂ. ರಂಗನಾಥ ಭಟ್, ಕೆನರಾ ಸಂಸ್ಥೆಗಳ ನಿರ್ದೇಶಕ ಡಾ. ರಾಧಾಕೃಷ್ಣ ಐತಾಳ್, ಆಡಳಿತ ಮಂಡಳಿಯ ಸದಸ್ಯರು ಹಾಗೂ ಕೆನರಾ ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಗಣೇಶ್ ಭಟ್ ಉಪಸ್ಥಿತರಿದ್ದರು.
Businessmen Dayananda Pai donates 2 crores to Mangalore Canara engineering college for the construction of the activity centre.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:23 am
HK News Desk
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ ; ಬಿಎಸ್ಎಫ್ ಯೋಧ,...
11-05-25 01:43 pm
12-05-25 11:26 am
HK News Desk
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm