ಕಾವೂರು ಠಾಣೆಯ ಹೆಡ್ ಕಾನ್ಸ್ ಟೇಬಲ್ ಹೃದಯಾಘಾತದಿಂದ ನಿಧನ 

15-12-22 11:02 am       Mangalore Correspondent   ಕರಾವಳಿ

ನಗರದ ಕಾವೂರು ಪೊಲೀಸ್ ಠಾಣೆಯಲ್ಲಿ ಎರಡು ವರ್ಷಗಳಿಂದ ಹೆಡ್‌ ಕಾನ್‌ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಬಾಗಲಕೋಟೆ ಮೂಲದ ಹನುಮಂತ ನಾಯ್ಕ (38) ಹೃದಯಾಘಾತಕ್ಕೊಳಗಾಗಿ ನಿಧನರಾಗಿದ್ದಾರೆ. 

ಮಂಗಳೂರು, ಡಿ.15: ನಗರದ ಕಾವೂರು ಪೊಲೀಸ್ ಠಾಣೆಯಲ್ಲಿ ಎರಡು ವರ್ಷಗಳಿಂದ ಹೆಡ್‌ ಕಾನ್‌ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಬಾಗಲಕೋಟೆ ಮೂಲದ ಹನುಮಂತ ನಾಯ್ಕ (38) ಹೃದಯಾಘಾತಕ್ಕೊಳಗಾಗಿ ನಿಧನರಾಗಿದ್ದಾರೆ. 

ಹನುಮಂತ ನಾಯ್ಕ ಅವರು ರಜೆಯಲ್ಲಿ ಬಾಗಲಕೋಟೆ ಜಿಲ್ಲೆಯ ಲವಲೇಶ್ವರ ಗ್ರಾಮಕ್ಕೆ ತೆರಳಿದ್ದರು. ಇಂದು ಮುಂಜಾನೆ ಮನೆಯಲ್ಲಿದ್ದಾಗಲೇ ಹೃದಯಾಘಾತಕ್ಕೆ ಒಳಗಾಗಿದ್ದಾರೆ. ಕೂಡಲೇ ಆಸ್ಪತ್ರೆಗೆ ಕರೆದುಕೊಂಡು ಹೋದರೂ ಚಿಕಿತ್ಸೆ ಫಲಿಸದೇ ಅವರು ವಿಧಿವಶರಾಗಿದ್ದಾರೆ.

2008ರ ಬ್ಯಾಚ್‌ನಲ್ಲಿ ಪೊಲೀಸ್ ಇಲಾಖೆಗೆ ಕರ್ತವ್ಯಕ್ಕೆ ಸೇರ್ಪಡೆಗೊಂಡಿದ್ದ ಅವರು, ಈ ಹಿಂದೆ ಮುಲ್ಕಿ ಸಂಚಾರ ಉತ್ತರ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿದ್ದರು. ತಮ್ಮ ಸರಳ ವ್ಯಕ್ತಿತ್ವ, ದಕ್ಷತೆಯಿಂದಾಗಿ ಪೊಲೀಸ್ ಇಲಾಖೆಯಲ್ಲಿ ಅಲ್ಪ ಕಾಲದಲ್ಲಿ ಉತ್ತಮ ಹೆಸರು ಗಳಿಸಿದ್ದರು. ಮೃತರು ಪತ್ನಿ ಮಂಜುಳಾ, ಮಕ್ಕಳಾದ ಕೃತ್ತಿಕಾ, ಲಾವಣ್ಯ, ಕೃಪಾ ಮತ್ತು ಕುಶಾಲ್ ಅವರನ್ನು ಅಗಲಿದ್ದಾರೆ.

A police constable of kavur police station died due to heart attack.