ಬ್ರೇಕಿಂಗ್ ನ್ಯೂಸ್
15-12-22 02:35 pm Mangalore Correspondent ಕರಾವಳಿ
ಮಂಗಳೂರು, ಡಿ.15 : ಬಸ್ಸಿನಲ್ಲಿ ಹಿಂದು ಮಹಿಳೆಯ ಬ್ಯಾಗ್ ಹಿಡಿದುಕೊಂಡ ಕಾರಣಕ್ಕೆ ಹಿಂದು ಸಂಘಟನೆ ಯುವಕರು ಸೇರಿ ಮುಸ್ಲಿಂ ಯುವಕನಿಗೆ ಹಲ್ಲೆ ನಡೆಸಿದ ಘಟನೆ ಬಂಟ್ವಾಳ ಗ್ರಾಮಾಂತರ ಠಾಣೆ ವ್ಯಾಪ್ತಿಯ ರಾಯಿ ಎಂಬಲ್ಲಿ ನಡೆದಿದೆ.
ಮುಲ್ಲರಪಟ್ನ ನಿವಾಸಿ ಇಸಾಕ್ (45) ಹಲ್ಲೆಗೊಳಗಾದ ಯುವಕ. ಇಸಾಕ್ ವೃತ್ತಿಯಲ್ಲಿ ಮೇಸ್ತ್ರಿ ಕೆಲಸ ಮಾಡುತ್ತಿದ್ದು ಬುಧವಾರ ಬೆಳಗ್ಗೆ ಮೂಡುಬಿದ್ರೆ- ಬಿಸಿ ರೋಡ್ ಬಸ್ಸಿನಲ್ಲಿ ತೆರಳುತ್ತಿದ್ದಾಗ ಬಸ್ಸಿನಲ್ಲಿ ರಶ್ ಇದ್ದ ಕಾರಣಕ್ಕೆ ಮಹಿಳೆಯೊಬ್ಬರು ಇಸಾಕ್ ಅವರ ಕೈಗೆ ತನ್ನಲ್ಲಿದ್ದ ಪ್ಲಾಸ್ಟಿಕ್ ಬ್ಯಾಗ್ ಕೊಟ್ಟಿದ್ದರು. ಆನಂತರ, ತನ್ನ ಸ್ಟಾಪ್ ಬಂದಾಗ ಮಹಿಳೆ ಬ್ಯಾಗ್ ಪಡೆದು ಇಳಿದು ಹೋಗಿದ್ದರು. ಇದನ್ನು ಬಸ್ಸಿನಲ್ಲಿದ್ದ ವ್ಯಕ್ತಿಯೊಬ್ಬ ಬೇರೆ ರೀತಿಯಲ್ಲಿ ಅರ್ಥ ಮಾಡ್ಕೊಂಡು ಸಂಘಟನೆ ಯುವಕರಿಗೆ ಮಾಹಿತಿ ನೀಡಿದ್ದ.


ಖಾಸಗಿ ಬಸ್ಸಿನಿಂದ ರಾಯಿ ಎಂಬಲ್ಲಿ ಇಳಿದ ಇಸಾಕ್ ಮೇಲೆ ಯುವಕರು ಹಲ್ಲೆ ನಡೆಸಿದ್ದಾರೆ. ಆನಂತರ, ಅಲ್ಲಿಯೇ ಮರಕ್ಕೆ ಕಟ್ಟಿ ಹಾಕಿ ದೊಣ್ಣೆಯಲ್ಲಿ ಹಲ್ಲೆ ನಡೆಸಿದ್ದಾರೆ. ಬಸ್ಸಿನಲ್ಲಿದ್ದ ಕಂಡೆಕ್ಟರ್ ಬಗ್ಗೆಯೂ ಆರೋಪ ಕೇಳಿಬಂದಿದೆ. ಆದರೆ ಹಲ್ಲೆ ಕೃತ್ಯದಲ್ಲಿ ಕಂಡೆಕ್ಟರ್ ಇರಲಿಲ್ಲವೆಂದು ಇಸಾಕ್ ಪೊಲೀಸರಿಗೆ ತಿಳಿಸಿದ್ದಾರೆ. ಬಂಟ್ವಾಳ ಗ್ರಾಮಾಂತರ ಪೊಲೀಸರು ಇಸಾಕ್ ಬಳಿ ಹೇಳಿಕೆ ಪಡೆದಿದ್ದಾರೆ.

ಇಸಾಕ್ ಮಂಗಳೂರಿನ ಹೈಲ್ಯಾಂಡ್ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಹಲ್ಲೆ ನಡೆಸಿದ ನಾಲ್ವರ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಕ್ಷುಲ್ಲಕ ಕಾರಣಕ್ಕೆ ನೈತಿಕ ಪೊಲೀಸ್ ಕೃತ್ಯ ನಡೆಸಲಾಗಿದೆ ಎನ್ನಲಾಗುತ್ತಿದ್ದು ಘಟನೆ ಬಗ್ಗೆ ತೀವ್ರ ಖಂಡನೆ ವ್ಯಕ್ತವಾಗಿದೆ.
Another moral policing in Mangalore. Man thrashed brutally for touching a woman's bag in a moving bus by a pro hindu activists. Police are now in the search for the accused. Isaac from Mularapatna from tied up to the pole and was brutally beaten.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 04:58 pm
HK News Staffer
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
05-09-26 08:58 pm
HK News Staffer
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm