ಅಪ್ರಾಪ್ತ ಬಾಲಕಿಯನ್ನು ನಾಲ್ವರಿಂದ ಅತ್ಯಾಚಾರ ; ಡಿಎನ್ಎ ಟೆಸ್ಟ್ ನಲ್ಲಿ ಸಿಕ್ಕಿಬಿದ್ದ ಒಬ್ಬನಿಗೆ ಹತ್ತು ವರ್ಷ ಶಿಕ್ಷೆ, ಮೂವರು ಖುಲಾಸೆ 

15-12-22 10:03 pm       Mangalore Correspondent   ಕರಾವಳಿ

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಆಕೆ ಗರ್ಭವತಿಯಾಗಿ ಮಗುವಿಗೆ ಜನ್ಮ ನೀಡಿದ ಪ್ರಕರಣದಲ್ಲಿ ಪೋಕ್ಸೋ ವಿಶೇಷ ನ್ಯಾಯಾಲಯವು ಆರೋಪಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ 30 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ.

ಮಂಗಳೂರು, ಡಿ.15 : ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಆಕೆ ಗರ್ಭವತಿಯಾಗಿ ಮಗುವಿಗೆ ಜನ್ಮ ನೀಡಿದ ಪ್ರಕರಣದಲ್ಲಿ ಪೋಕ್ಸೋ ವಿಶೇಷ ನ್ಯಾಯಾಲಯವು ಆರೋಪಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ 30 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ.

ಪಚ್ಚನಾಡಿ ವೈದ್ಯನಾಥ ನಗರದ ನವೀನ್ ಸುವರ್ಣ(42) ಶಿಕ್ಷೆಗೊಳಗಾದವನು. ಪ್ರಕರಣದಲ್ಲಿ ಇತರ ಮೂವರು ಆರೋಪಿಗಳನ್ನು ಸಾಕ್ಷ್ಯಾಧಾರ ಕೊರತೆಯಿಂದ ಖುಲಾಸೆಗೊಳಿಸಲಾಗಿದೆ.

Maharastra: Gang-rape of a 35-yr-old woman in Bhandara sparks outrage -  OrissaPOST

ಸಂತ್ರಸ್ತ ಬಾಲಕಿ 9ನೇ ತರಗತಿ ವಿದ್ಯಾರ್ಥಿನಿಯಾಗಿದ್ದು ಸಂದೀಪ್ ಕುಲಾಲ್ ಎಂಬಾತನ ಜೊತೆಗೆ ಪ್ರೀತಿ ಹೆಸರಲ್ಲಿ ಸುತ್ತಾಡುತ್ತಿದ್ದಳು. ಅವರು ಜೊತೆಯಲ್ಲಿರುವುದನ್ನು ನೋಡಿದ್ದ ನವೀನ್ ಸುವರ್ಣ ಎಂಬಾತ ಬಾಲಕಿಯನ್ನು ಬ್ಲಾಕ್‌ಮೇಲ್ ಮಾಡಿದ್ದ. ನಿನ್ನ ಬಗ್ಗೆ ಬೇರೆಯವರಿಗೆ ಹೇಳುತ್ತೇನೆಂದು ಬ್ಲಾಕ್ಮೇಲ್ ಮಾಡಿ, 2017ರ ಆಗಸ್ಟ್ 16ರಂದು ತನ್ನ ಪರಿಚಯದ ಮನೆಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದ. ಆನಂತರ ಪದೇ ಪದೇ ಇದೇ ರೀತಿ ಅತ್ಯಾಚಾರ ಎಸಗಿದ್ದ ಎಂದು ಆರೋಪಿಸಲಾಗಿತ್ತು.‌

ಇದಲ್ಲದೆ ದಾವಣಗೆರೆ ಮೂಲದ, ವಾಮಂಜೂರಿನ ಎಂಜಿನಿಯರಿಂಗ್ ಕಾಲೇಜಿನಲ್ಲಿ ವಿದ್ಯಾರ್ಥಿಯಾಗಿದ್ದ ಪುನೀತ್‌ ಕುಮಾರ್ ಕೂಡ ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಎಸಗಿದ್ದ ಎಂಬ ಆರೋಪ ಇತ್ತು. ಈ ನಡುವೆ ಬಾಲಕಿ ಗರ್ಭಿಣಿಯಾಗಿದ್ದಳು. ಬಳಿಕ ಮಂಗಳೂರು ಗ್ರಾಮಾಂತರ ಪೊಲೀಸರು ನಾಲ್ವರ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಿದ್ದರು. 

New Gene-Editing Technique Offers Scientists Ability to “Turn On” Enzymes  That Cause DNA Base Mutations - Penn Medicine

ಡಿಎನ್‌ಎ ಪರೀಕ್ಷೆಯಲ್ಲಿ ಸಿಕ್ಕಿಬಿದ್ದ ನವೀನ್ ಸುವರ್ಣ 

ಆನಂತರ, ಬಾಲಕಿ ಗಂಡು ಮಗುವಿಗೆ ಜನ್ಮ ನೀಡಿದ್ದಳು. ಪೊಲೀಸರು ಮಗುವಿನ ಡಿಎನ್‌ಎ ಪರೀಕ್ಷೆ ನಡೆಸಿದಾಗ ಅದು ನವೀನ್ ಸುವರ್ಣ ಅತ್ಯಾಚಾರ ಎಸಗಿದ್ದಾಗಿ ದೃಢಪಡಿಸಿತ್ತು. ತನಿಖೆ ನಡೆಸಿದ್ದ ಗ್ರಾಮಾಂತರ ಠಾಣೆ ಇನ್‌ಸ್ಪೆಕ್ಟರ್ ಸಿದ್ದನಗೌಡ ಎಚ್.ಬಜಂತ್ರಿ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಒಟ್ಟಾರೆ 51 ದಾಖಲೆಗಳನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದರು.‌

Section 376 IPC | Punishment for rape in India - Law Help

ವಿಚಾರಣೆ ಕೈಗೊಂಡ ಹೆಚ್ಚುವರಿ ಸತ್ರ ನ್ಯಾಯಾಲಯ ಎಫ್‌ಟಿಎಸ್‌ಸಿ-2(ಪೋಕ್ಸೊ) ನ್ಯಾಯಾಧೀಶ ಕೆ.ಎಂ.ರಾಧಾಕೃಷ್ಣ ಅವರು ಐಪಿಸಿ 376 ಹಾಗೂ ಪೋಕ್ಸೊ ಕಾಯ್ದೆ ಸೆಕ್ಷನ್ 6ರಡಿ ನವೀನ್ ಸುವರ್ಣನಿಗೆ 10 ವರ್ಷ ಕಠಿಣ ಸಜೆ ಹಾಗೂ 30 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಉಳಿದ ಮೂವರು ಆರೋಪಿಗಳನ್ನು ಖುಲಾಸೆಗೊಳಿಸಿದ್ದಾರೆ. ಸರಕಾರದ ಪರ ಸಾರ್ವಜನಿಕ ಅಭಿಯೋಜಕ ಸಿ.ವೆಂಕಟರಮಣ ಸ್ವಾಮಿ ವಾದಿಸಿದ್ದರು.

Mangalore Minor girl raped by 4, court punishes one with 10 years jail and fine.