ಬ್ರೇಕಿಂಗ್ ನ್ಯೂಸ್
17-12-22 11:40 am Mangalore Correspondent ಕರಾವಳಿ
ಮಂಗಳೂರು, ಡಿ.17 : ಕುಕ್ಕರ್ ಬ್ಲಾಸ್ಟ್ ಪ್ರಕರಣದಲ್ಲಿ ಗಾಯಗೊಂಡಿದ್ದ ಶಂಕಿತ ಉಗ್ರ ಮೊಹಮ್ಮದ್ ಶಾರೀಕ್ ನನ್ನು ಎನ್ಐಎ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಇಂದು ಬೆಳಗ್ಗೆ ವಶಕ್ಕೆ ಪಡೆದು ಕಂಕನಾಡಿ ಆಸ್ಪತ್ರೆಯಿಂದಲೇ ಬೆಂಗಳೂರಿಗೆ ಕರೆದುಕೊಂಡು ಹೋಗಿದ್ದಾರೆ.
ಘಟನೆಯಲ್ಲಿ 40 ಶೇಕಡಾದಷ್ಟು ಸುಟ್ಟ ಗಾಯಗಳಾಗಿದ್ದ ಶಾರೀಕ್ ನನ್ನು ಮಂಗಳೂರಿನ ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ವಾರದ ಹಿಂದೆ 75 ಶೇಕಡಾ ಚೇತರಿಕೆ ಆಗಿದ್ದಾನೆ ಎನ್ನುವ ಮಾಹಿತಿಗಳಿದ್ದವು. ಹೀಗಾಗಿ ಪ್ರಕರಣದ ಬಗ್ಗೆ ಎನ್ಐಎ ಅಧಿಕಾರಿಗಳು ಶಾರೀಕ್ ನನ್ನು ವಿಚಾರಣೆ ಆರಂಭಿಸಿದ್ದರು. ಆದರೆ ಅಧಿಕಾರಿಗಳ ಪ್ರಶ್ನೆಗೆ ಸರಿಯಾದ ಉತ್ತರ ನೀಡದೆ ಅಸಹಕಾರ ತೋರುತ್ತಿದ್ದ ಎನ್ನಲಾಗಿತ್ತು. ತನಗೇನೂ ತಿಳಿದಿಲ್ಲ ಎಂದೇ ಅಧಿಕಾರಿಗಳಿಗೆ ಮಾಹಿತಿ ನೀಡುತ್ತಿದ್ದ.
ಈ ಹಿನ್ನೆಲೆಯಲ್ಲಿ ಇಂದು ಬೆಳ್ಳಂಬೆಳಗ್ಗೆ ಶಾರೀಕ್ ನನ್ನು ವಶಕ್ಕೆ ಪಡೆದು ಅಧಿಕಾರಿಗಳು ನೇರವಾಗಿ ಬೆಂಗಳೂರು ಎನ್ಐಎ ಕಚೇರಿಗೆ ಒಯ್ದಿದ್ದಾರೆ. ಚಿಕಿತ್ಸೆ ಅಗತ್ಯ ಬಿದ್ದಲ್ಲಿ ಬೆಂಗಳೂರಿನಲ್ಲಿಯೇ ನೀಡುವ ಸಾಧ್ಯತೆಯಿದೆ.
ನ.19ರಂದು ಕಂಕನಾಡಿಯ ನಾಗುರಿಯಲ್ಲಿ ಆಟೋ ರಿಕ್ಷಾದಲ್ಲಿ ತೆರಳುತ್ತಿದ್ದಾಗಲೇ ಸ್ಫೋಟ ಘಟನೆ ಆಗಿತ್ತು. ಪರಿಶೀಲನೆ ವೇಳೆ, ಪ್ರೆಶರ್ ಕುಕ್ಕರ್ ಸ್ಫೋಟವಾಗಿದ್ದು ಕಂಡುಬಂದಿತ್ತು. ಘಟನೆಯಲ್ಲಿ ಕುಕ್ಕರ್ ಹಿಡಿದುಕೊಂಡಿದ್ದ ಶಾರೀಕ್ ಗಂಭೀರ ಗಾಯಗೊಂಡಿದ್ದ. ಮೊದಲಿಗೆ, ಅದು ಶಾರೀಕ್ ಎನ್ನುವುದು ತಿಳಿದುಬಂದಿರಲಿಲ್ಲ. ಯಾರೋ ವ್ಯಕ್ತಿ ಗಾಯಗೊಂಡಿದ್ದಾನೆ ಎನ್ನಲಾಗಿತ್ತು. ವ್ಯಕ್ತಿಯ ಜೊತೆಗಿದ್ದ ಐಡಿ ಕಾರ್ಡ್ ನಲ್ಲಿ ಪ್ರೇಮರಾಜ್ ಹುಟಗಿ ಎನ್ನುವ ಹೆಸರಿನ ಆಧಾರ್ ಕಾರ್ಡ್ ಸಿಕ್ಕಿತ್ತು. ಹೀಗಾಗಿ ಬಹಳಷ್ಟು ಅನುಮಾನಗಳು ಉಂಟಾಗಿದ್ದವು. ಎರಡು ದಿನಗಳ ಬಳಿಕ, ಗಾಯಗೊಂಡ ವ್ಯಕ್ತಿ ಮೊಹಮ್ಮದ್ ಶಾರೀಕ್, ಗೋಡೆ ಬರಹ ಪ್ರಕರಣದ ಆರೋಪಿ ಎನ್ನುವುದನ್ನು ಪೊಲೀಸರು ಪತ್ತೆ ಮಾಡಿದ್ದರು. ಆನಂತರ, ಬಿಗು ಭದ್ರತೆಯಲ್ಲಿ ಶಾರೀಕ್ ಗೆ ಚಿಕಿತ್ಸೆ ನೀಡಲಾಗಿತ್ತು.
Mangalore cooker blast case, Mohammad Shariq shifted to Bangalore from Mangalore for treatment. The accused, i Sharik, was admitted to the Father Muller Hospital in Karnataka's Mangaluru after he sustained 40-45 percent burn injuries due to a fire that broke out in an autorickshaw in the Kankanadi police station area.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:23 am
HK News Desk
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ ; ಬಿಎಸ್ಎಫ್ ಯೋಧ,...
11-05-25 01:43 pm
12-05-25 11:26 am
HK News Desk
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm