ಬ್ರೇಕಿಂಗ್ ನ್ಯೂಸ್
17-12-22 07:45 pm Mangalore Correspondent ಕರಾವಳಿ
ಮಂಗಳೂರು, ಡಿ.17: ರಾಜ್ಯದ ಕರಾವಳಿ ತೀರದ ಜಿಲ್ಲೆಗಳಲ್ಲಿ ಉದ್ದಿಮೆಗಳ ಬೆಳವಣಿಗೆಯನ್ನು ಉತ್ತೇಜಿಸಲು ನಗರದಲ್ಲಿ ಎರಡು ಲಕ್ಷ ಚದರ ಅಡಿ ವಿಸ್ತಾರದ 'ಮಂಗಳೂರು ಇನ್ನೋವೇಶನ್ ಹಬ್' ಸ್ಥಾಪಿಸಲಾಗುವುದು. ಕಿಯೋನಿಕ್ಸ್ ಮೂಲಕ ಇದನ್ನು ನಿರ್ಮಿಸಲಾಗುವುದು. ಜತೆಗೆ ಮಂಗಳೂರು ಔದ್ಯಮಿಕ ಕ್ಲಸ್ಟರ್ ಗೆ 25 ಕೋಟಿ ರೂಪಾಯಿಗಳ ಬೀಜನಿಧಿ ಕೊಡಲಾಗಿದೆ ಎಂದು ಐಟಿ-ಬಿಟಿ ಸಚಿವ ಡಾ. ಸಿ ಎನ್. ಅಶ್ವತ್ಥ ನಾರಾಯಣ ಹೇಳಿದ್ದಾರೆ.
ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (ಕೆಡಿಇಎಂ) ಮಂಗಳೂರು ಕ್ಲಸ್ಟರ್ ವತಿಯಿಂದ ಆಯೋಜಿಸಿರುವ ಮಂಗಳೂರು ಟೆಕ್ನೋವಾನ್ಜಾ ಅಂಗವಾಗಿ ನಡೆದ ಸಮಾವೇಶದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಇನ್ಫೋಸಿಸ್ ಮತ್ತು ಇತರ ಕಂಪನಿಗಳ ಸಹಕಾರ ಪಡೆದು ಎರಡು ಲಕ್ಷ ಚದರಡಿ ವಿಸ್ತೀರ್ಣದ ಜಾಗದ ವ್ಯವಸ್ಥೆ ಮಾಡಿಕೊಂಡು 'ಮಂಗಳೂರು ಇನ್ನೋವೇಶನ್ ಹಬ್' ಸ್ಥಾಪಿಸಲು ಅನುವು ಮಾಡಿಕೊಡಲಾಗುವುದು. ಇದು ದಕ್ಷಿಣ ಕನ್ನಡ, ಉಡುಪಿ, ಕೊಡಗು ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಉದ್ದಿಮೆಗಳ ಬೆಳವಣಿಗೆಗೆ ಕಾರಣವಾಗಲಿದೆ ಎಂದು ತಿಳಿಸಿದರು. ದಕ್ಷಿಣ ಕನ್ನಡ ಭಾಗವು ಮೊದಲಿನಿಂದಲೂ ಬ್ಯಾಂಕಿಂಗ್ ಚಟುವಟಿಕೆಗಳಿಗೆ ಹೆಸರಾಗಿದೆ. ಅದಕ್ಕೆ ಪೂರಕವಾದ ಪರಿಸರವೂ ಇಲ್ಲಿದೆ. ಇದನ್ನು ಗಮನದಲ್ಲಿರಿಸಿಕೊಂಡು ಮಂಗಳೂರು ವಲಯವನ್ನು ಫಿನ್ ಟೆಕ್ ಹಬ್ ಆಗಿ ಅಭಿವೃದ್ಧಿಪಡಿಸುವ ಗುರಿ ಹೊಂದಲಾಗಿದೆ ಎಂದು ಸಚಿವರು ವಿವರಿಸಿದರು.
ಮಂಗಳೂರು ಕ್ಲಸ್ಟರ್ ನಲ್ಲಿ 50 ಫಿನ್ಟೆಕ್ ಕಂಪನಿಗಳನ್ನು ಸ್ಥಾಪಿಸಬೇಕು ಎನ್ನುವುದು ಸರಕಾರದ ಗುರಿ. ಈ ಮೂಲಕ 2030ರ ವೇಳೆಗೆ ರಾಜ್ಯವು ನಡೆಸಲು ಉದ್ದೇಶಿಸಿರುವ 500 ಬಿಲಿಯನ್ ಡಾಲರ್ ವಹಿವಾಟಿನಲ್ಲಿ ಅರ್ಧದಷ್ಟು ಕೊಡುಗೆ ಈ ಭಾಗದ ಉದ್ದಿಮೆಗಳಿಂದಲೇ ಬರುವಂತೆ ಆಗಬೇಕು ಎಂದವರು ಆಶಿಸಿದರು.
ಬೆಂಗಳೂರು ನಗರವು ದೇಶದ ಸಿಲಿಕಾನ್ ವ್ಯಾಲಿ ಎಂದು ಹೆಸರಾಗಿರುವಂತೆ ಮಂಗಳೂರು ನಗರವು ದೇಶದ 'ಸಿಲಿಕಾನ್ ಬೀಚ್' ಎಂದು ಹೆಸರಾಗಬೇಕೆಂದು ಇದೇ ಸಂದರ್ಭದಲ್ಲಿ ಅವರು ಆಶಿಸಿದರು.
ಇದೇ ಸಂದರ್ಭದಲ್ಲಿ ರಾಜ್ಯ ಸರ್ಕಾರವು ವಿವಿಧ ಕಂಪನಿಗಳೊಂದಿಗೆ ಹೂಡಿಕೆ ಕುರಿತ ಒಡಂಬಡಿಕೆಗೆ ಸಹಿ ಹಾಕಿತು. ಜತೆಗೆ ಸಚಿವರು ಕ್ಯಾಶ್ ಫ್ರೀ ಕಂಪನಿಯ ಮಂಗಳೂರು ಕಚೇರಿಯನ್ನು ಉದ್ಘಾಟಿಸಿದರು. ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ವೇದವ್ಯಾಸ ಕಾಮತ್, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಇದ್ದರು.
ಐಟಿ-ಬಿಟಿ ಬಿಟಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಇ.ವಿ ರಮಣ ರೆಡ್ಡಿ, ಉದ್ಯಮಿ ಮೋಹನದಾಸ್ ಪೈ, ಕೆಡಿಇಎಂ ಅಧ್ಯಕ್ಷ ಬಿ.ವಿ ನಾಯ್ಡು, ರಾಜ್ಯ ಸರ್ಕಾರದ ಸ್ಟಾರ್ಟ್ ಅಪ್ ವಿಷನ್ ಗ್ರೂಪ್ ಅಧ್ಯಕ್ಷ ಪ್ರಶಾಂತ್ ಪ್ರಕಾಶ್, ಐಟಿ ನಿರ್ದೇಶಕ ಡಾ.ಶಿವಶಂಕರ ಸೇರಿದಂತೆ ಇತರರು ಉಪಸ್ಥಿತರಿದ್ದರು.
Karnataka Digital Economy Mission (KDEM) Mangaluru cluster organised the second edition of Mangaluru Technovanza at the TMA Pai international convention centre by Bjp Minister Ashwath Narayan.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:23 am
HK News Desk
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ ; ಬಿಎಸ್ಎಫ್ ಯೋಧ,...
11-05-25 01:43 pm
12-05-25 11:26 am
HK News Desk
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm