ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ನೀಡದೇ ಇದ್ದರೆ ಬಿಜೆಪಿ ನೆಲ ಕಚ್ಚಲಿದೆ ; ಯತ್ನಾಳ್ ಎಚ್ಚರಿಕೆ

22-12-22 02:16 pm       HK News Desk   ಕರಾವಳಿ

ಪಂಚಮಸಾಲಿ ಸಮುದಾಯಕ್ಕೆ 2ಎ ಮಿಸಲಾತಿ ಪ್ರಕಟಿಸದಿದ್ದರೆ, ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ನೆಲಕಚ್ಚಲಿದೆ ಎಂದು ವಿಜಯಪುರ ಬಿಜೆಪಿ ಶಾಸಕ ಬಸವನ ಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ‌

ಬೆಳಗಾವಿ, ಡಿ.22: ಪಂಚಮಸಾಲಿ ಸಮುದಾಯಕ್ಕೆ 2ಎ ಮಿಸಲಾತಿ ಪ್ರಕಟಿಸದಿದ್ದರೆ, ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ನೆಲಕಚ್ಚಲಿದೆ ಎಂದು ವಿಜಯಪುರ ಬಿಜೆಪಿ ಶಾಸಕ ಬಸವನ ಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ‌

ಸುದ್ದಿ ವಾಹಿನಿಗೆ ಪ್ರತಿಕ್ರಿಯೆ ನೀಡಿರುವ ಅವರು, ಸಮುದಾಯದ ಸ್ವಾಮೀಜಿಗಳು ಸೇರಿ ಜನರು ಈ ಬಗ್ಗೆ ಒತ್ತಾಯ ಮಾಡುತ್ತಲೇ ಬಂದಿದ್ದಾರೆ. ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಅವರು ಮೀಸಲಾತಿ ಪ್ರಕಟಿಸುವ ವಿಶ್ವಾಸ ಇದೆ. ತಮ್ಮ ಮಾತನ್ನು ಉಳಿಸಿಕೊಳ್ಳದೇ ಇದ್ದರೆ ಅದರ ಪರಿಣಾಮ ಪಕ್ಷ ಎದುರಿಸಲಿದೆ. ಪಕ್ಷ ಮುಂದಿನ ಚುನಾವಣೆಯಲ್ಲಿ ಸೋಲುವ ಜೊತೆಗೆ ಪಕ್ಷದ ಅಭ್ಯರ್ಥಿಗಳು ಠೇವಣಿ ಕಳೆದುಕೊಳ್ಳಲಿದ್ದಾರೆ ಎಂದು ಎಚ್ಚರಿಸಿದ್ದಾರೆ.

ಸರ್ಕಾರ ಪಂಚಮಸಾಲಿ ಸಮುದಾಯಯಕ್ಕೆ 2ಎ ಮೀಸಲಾತಿ ಘೋಷಿಸದಿದ್ದರೆ ಮುಂದಿನ ನಡೆಯ ಬಗ್ಗೆ ಡಿ.22ರ ಸಂಜೆ ತಿಳಿಸಲಾಗುವುದು ಎಂದರು.

BJP legislator Basangouda Patil Yatnal has said that he has faith on the government towards announcing the 2A reservation for the Panchamasali community.