ಬ್ರೇಕಿಂಗ್ ನ್ಯೂಸ್
15-10-20 10:36 pm Mangaluru Correspondent ಕರಾವಳಿ
ಮಂಗಳೂರು, ಅಕ್ಟೋಬರ್ 15: ಖ್ಯಾತ ತುಳು ರಂಗಭೂಮಿ ಕಲಾವಿದ, ನಿರ್ದೇಶಕ ಮಾಧವ ಜಪ್ಪುಪಟ್ನ (64) ಅಲ್ಪಕಾಲದ ಅಸೌಖ್ಯದ ಬಳಿಕ ನಿಧನರಾಗಿದ್ದಾರೆ.
ಆರೋಗ್ಯದಲ್ಲಿ ಸದೃಢರಾಗಿದ್ದ ಮಾಧವರಿಗೆ ಎರಡು ವಾರಗಳ ಹಿಂದೆ ಜ್ವರ ಬಂದಿತ್ತು. ಜ್ವರದ ಬಳಿಕ ಆಸ್ಪತ್ರೆಗೆ ದಾಖಲಾಗಿದ್ದರು. ಪರೀಕ್ಷೆಯಲ್ಲಿ ಕೋವಿಡ್ ಪಾಸಿಟಿವ್ ಆಗಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಅವರ ಆಪ್ತರು ತಿಳಿಸಿದ್ದಾರೆ. ಅವರು ಇಬ್ಬರು ಪುತ್ರರು, ಪತ್ನಿ ಮತ್ತು ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ.
40ಕ್ಕೂ ಹೆಚ್ಚು ನಾಟಕ ಕೃತಿಗಳನ್ನು ಬರೆದಿದ್ದ ಮಾಧವ ಜಪ್ಪುಪಟ್ನ ಅಭಿನಯದ ಜೊತೆಗೆ ನಿರ್ದೇಶನ, ಗಾಯನವನ್ನು ಮಾಡುತ್ತಿದ್ದರು. 90ರ ದಶಕದಲ್ಲಿ ಅಸಂಖ್ಯಾತ ಹೊಸ ಕಲಾವಿದರಿಗೆ ತಮ್ಮ ನಾಟಕದಲ್ಲಿ ಅವಕಾಶ ನೀಡಿ, ರಂಗಭೂಮಿಗೆ ಪರಿಚಯ ಮಾಡಿದ್ದರು. ಅವರು ಬರೆದು, ನಿರ್ದೇಶಿಸಿದ 'ಬಂಗಾರ್ ಕಂಡನಿ' ಎನ್ನುವ ನಾಟಕ 150ಕ್ಕೂ ಹೆಚ್ಚು ಪ್ರದರ್ಶನ ಕಂಡಿತ್ತು. 'ಈ ಬಲ್ಲ್ ಯಾವ' ಎನ್ನುವ ನಾಟಕ ಅವರಿಗೆ ಜನಪ್ರಿಯತೆ ತಂದುಕೊಟ್ಟಿತ್ತು. ನಾಟಕದಲ್ಲಿ ಹಾಸ್ಯ ಕಲಾವಿದರಾಗಿ ಜನಮನ್ನಣೆ ಗಳಿಸಿದ್ದರು. ಇತ್ತೀಚೆಗೆ ತುಳು ಸಿನಿಮಾದಲ್ಲೂ ಅಭಿನಯಿಸಿದ್ದ ಮಾಧವ ಅವರು, ಬಂಗಾರ್ ಪಟ್ಲೇರ್ ಚಿತ್ರದಲ್ಲೂ ಅಭಿನಯಿಸಿದ್ದರು.
ಕುದ್ರೋಳಿ ಶ್ರೀ ಭಗವತೀ ಕ್ಷೇತ್ರದ ಮೊಕ್ತೇಸರರಾಗಿದ್ದ ಮಾಧವ ಜೆಪ್ಪುಪಟ್ನ, ಶ್ರೀ ಭಗವತೀ ತೀಯಾ ಸೇವಾ ಸಂಘ, ನವನಿಧಿ ಸಹಕಾರಿ ಬ್ಯಾಂಕಿನ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದರು. ರಾಜ್ಯ ಪ್ರಶಸ್ತಿ ಒಳಗೊಂಡಂತೆ ಹಲವಾರು ಪ್ರತಿಷ್ಠಿತ ಪ್ರಶಸ್ತಿಗಳನ್ನು ಪಡೆದಿದ್ದರು.
Mangalore Renowned Tulu artist Jeepu Patna passes away at 64 after being tested corona positive. Jeepu Patna was a singer, author and a great artist in the Tulu drama industry.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm