ಬ್ರೇಕಿಂಗ್ ನ್ಯೂಸ್
24-12-22 11:18 am Mangalore Correspondent ಕರಾವಳಿ
ಉಳ್ಳಾಲ, ಡಿ.24: ಸ್ಕೂಟರ್ ಗೆ ಡಿಕ್ಕಿ ಹೊಡೆದು ಪರಾರಿಯಾಗುತ್ತಿದ್ದ ಕಾರನ್ನು ತಡೆದ ಸಾರ್ವಜನಿಕರು ಆರೋಪಿ ಚಾಲಕನನ್ನು ಪೊಲೀಸರಿಗೊಪ್ಪಿಸಿದ ಘಟನೆ ಶುಕ್ರವಾರ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ತಲಪಾಡಿ ದೇವಿಪುರದಲ್ಲಿ ನಡೆದಿದೆ.
ಕೇರಳ ಮೂಲದ ಕಾರು ಮತ್ತು ಅದರ ಚಾಲಕ ಅಹಮ್ಮದ್ ಮುಬಾರಿಷ್ ಎ.ಕೆ ಎಂಬಾತನನ್ನು ಮಂಗಳೂರು ದಕ್ಷಿಣ ಸಂಚಾರಿ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಹಮ್ಮದ್ ಮುಬಾರಿಷ್ ಶುಕ್ರವಾರ ಸಂಜೆ ಕಾರಿನಲ್ಲಿ ಮಂಗಳೂರಿಂದ ಕೇರಳದ ಕಡೆಗೆ ಅತಿ ವೇಗದಿಂದ ಧಾವಿಸುತ್ತಿದ್ದ ಎನ್ನಲಾಗಿದ್ದು ರಾ.ಹೆ. 66ರ ಕೋಟೆಕಾರು ಹೆದ್ದಾರಿಯಲ್ಲಿ ಸ್ಕೂಟರ್ ಗೆ ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿಯಾದ ರಭಸಕ್ಕೆ ಇರಾನ್ ಮೂಲದ ವಿದ್ಯಾರ್ಥಿಗಳು ಚಲಾಯಿಸುತ್ತಿದ್ದ ಸ್ಕೂಟರ್ ರಸ್ತೆಗಪ್ಪಳಿಸಿದ್ದು ಮಹಿಳಾ ಸವಾರೆ ಸೆಟಿದ್ಹೆ ಬಾಷಾಂಗ್(28) ಗಂಭೀರ ಗಾಯಗೊಂಡಿದ್ದಾರೆ. ಅವರನ್ನು ನಗರದ ಇಂಡಿಯಾನ ಆಸ್ಪತ್ರೆಯಲ್ಲಿ ದಾಖಲಿಸಿದ್ದು ಸಹ ಸವಾರ ಅಲಿಯಸ್ಗರ್ ರಹಿಮಾನ್ ಡೌಸ್ಟ್(30) ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆಗಿದ್ದಾರೆ.
ಇರಾನ್ ಮೂಲದ ಸೆಟಿದ್ಹೆ ಬಾಷಾಂಗ್ ಮತ್ತು ಅಲಿಯಸ್ಗರ್ ರಹಿಮಾನ್ ಮಂಗಳೂರು ವಿವಿಯಲ್ಲಿ ಉನ್ನತ ವ್ಯಾಸಂಗಕ್ಕೆ ಬಂದಿದ್ದು ದೇರಳಕಟ್ಟೆಯ ಲಾಡ್ಜ್ ನಲ್ಲಿ ತಂಗಿರುವುದಾಗಿ ಮಾಹಿತಿ ಲಭ್ಯವಾಗಿದೆ. ಚಾಲಕ ಮುಬಾರಿಷ್ ಕಾರು ಡಿಕ್ಕಿ ಹೊಡೆದ ಬಳಿಕ ಕಾರಿನಲ್ಲಿದ್ದ ಯುವತಿಯನ್ನು ತಲಪಾಡಿಯಲ್ಲಿ ಇಳಿಸಿ ಕಾರನ್ನು ದೇವಿಪುರದ ಒಳ ರಸ್ತೆಯಿಂದ ಓಡಿಸಿ ಪರಾರಿಗೆ ಯತ್ನಿಸಿದ್ದು ಆತನನ್ನ ಬೆನ್ನಟ್ಟಿದ ಸಾರ್ವಜನಿಕರು ದೇವಿಪುರ ಮಂಡೆ ಕಟ್ಟ ಎಂಬಲ್ಲಿ ತಡೆದು ಪೊಲೀಸರಿಗೆ ಒಪ್ಪಿಸಿದ್ದಾರೆ.
Ullal accident, hit and run Car rams over bike, Irani students injured in Mangalore
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:23 am
HK News Desk
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ ; ಬಿಎಸ್ಎಫ್ ಯೋಧ,...
11-05-25 01:43 pm
12-05-25 11:26 am
HK News Desk
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm