ಬ್ರೇಕಿಂಗ್ ನ್ಯೂಸ್
31-12-22 02:10 pm Mangalore Correspondent ಕರಾವಳಿ
ಮಂಗಳೂರು, ಡಿ.31: ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಪೊಲೀಸರು ಅಲರ್ಟ್ ಆಗಿದ್ದು ರಾತ್ರಿ ವೇಳೆ ಕಟ್ಟುನಿಟ್ಟಿನ ಕಾರ್ಯಾಚರಣೆ ನಡೆಸಲಾಗುವುದು ಎಂದು ಪೊಲೀಸ್ ಕಮಿಷನರ್ ಶಶಿಕುಮಾರ್ ತಿಳಿಸಿದ್ದಾರೆ. ರಾತ್ರಿ ವೇಳೆ ಹೊಟೇಲ್, ಪಬ್, ರೆಸ್ಟೋರೆಂಟ್ ಗಳಲ್ಲಿ 12.30ರ ವರೆಗೂ ಕಾರ್ಯಕ್ರಮ ನಡೆಸಲು ಜಿಲ್ಲಾಡಳಿತ ಅವಕಾಶ ನೀಡಿದೆ. ಆದರೆ, ಡಿಜೆ ಇನ್ನಿತರ ಧ್ವನಿ ವರ್ಧಕ ಬಳಕೆಯನ್ನು ರಾತ್ರಿ 10 ಗಂಟೆಗೆ ಕೊನೆಗೊಳಿಸಬೇಕು ಎಂದು ಕಮಿಷನರ್ ಹೇಳಿದ್ದಾರೆ.
ಸುಪ್ರೀಂ ಕೋರ್ಟ್ ಆದೇಶದನ್ವಯ ರಾತ್ರಿ ಹತ್ತು ಗಂಟೆ ಬಳಿಕ ಧ್ವನಿವರ್ಧಕ ಬಳಕೆಗೆ ಅವಕಾಶ ಇರುವುದಿಲ್ಲ. ಹೀಗಾಗಿ ನಾವು ಅದನ್ನು ಪಾಲನೆ ಮಾಡಬೇಕಾಗುತ್ತದೆ. ರಾತ್ರಿ 10ರಿಂದ ಧ್ವನಿವರ್ಧಕ ಬಂದ್ ಮಾಡಿ, ಜಿಲ್ಲಾಡಳಿತದ ಜೊತೆಗೆ ಸಹಕರಿಸಬೇಕು ಎಂದು ಕಮಿಷನರ್ ಹೇಳಿದ್ದಾರೆ. ಅಲ್ಲದೆ, ರಾತ್ರಿ ವೇಳೆ ಕುಡಿದು ವಾಹನ ಚಲಾಯಿಸಬಾರದು. ಇದಕ್ಕಾಗಿ ಮಂಗಳೂರು ನಗರ ಸೇರಿ ಕಮಿಷನರೇಟ್ ವ್ಯಾಪ್ತಿಯಲ್ಲಿ 32 ಕಡೆ ಚೆಕ್ ಪೋಸ್ಟ್ ಮಾಡಲಾಗುವುದು. ರಾತ್ರಿ ವೇಳೆ ಕುಡಿದು ಚಲಾಯಿಸುವುದು, ವಾಹನ ದಾಖಲಾತಿ ಪರಿಶೀಲನೆಯನ್ನೂ ಮಾಡಲಿದ್ದಾರೆ. ರಾತ್ರಿ 12.30ರ ವರೆಗೆ ಕಾರ್ಯಕ್ರಮಕ್ಕೆ ಅವಕಾಶ ಇದೆಯೆಂದು ಅಲ್ಲಿ ವರೆಗೂ ಲಿಕ್ಕರ್ ಪೂರೈಸಲು ಅವಕಾಶ ಇರುವುದಿಲ್ಲ. ಲಿಕ್ಕರ್ ಸರಬರಾಜು ರಾತ್ರಿ 11 ಗಂಟೆಗೆ ಎಂದಿನಂತೆ ಕ್ಲೋಸ್ ಆಗಬೇಕು ಎಂದಿದ್ದಾರೆ ಕಮಿಷನರ್.
ಬೀಚ್ ಗಳಲ್ಲಿ ಆಟವಾಡಲು ಸಂಜೆ ವರೆಗೆ ಮಾತ್ರ ಅವಕಾಶ ಇರುವುದು. ರಾತ್ರಿ ವೇಳೆ ಬೀಚ್ ಗಳಲ್ಲಿ ಉಳಿಯುವುದಕ್ಕೆ ಅವಕಾಶ ಇರಲ್ಲ. ಉಳಿದಂತೆ, ಯಾವುದೇ ಸಾರ್ವಜನಿಕ ಪ್ರದೇಶಗಳಲ್ಲಿ ಹೊಸ ವರ್ಷಾಚರಣೆ ಕಾರ್ಯಕ್ರಮ ನಡೆಸುವುದಿದ್ದರೂ ಇಲಾಖೆಯ ಅನುಮತಿ ಪಡೆಯಬೇಕು. ಅನುಮತಿ ಪಡೆಯದೆ ಸಾರ್ವಜನಿಕ ಕಾರ್ಯಕ್ರಮ ಏರ್ಪಡಿಸುವಂತಿಲ್ಲ. ಸುರತ್ಕಲ್ ಭಾಗದಲ್ಲಿ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಮಧ್ಯರಾತ್ರಿ ಮೀರಿ ಅನವಶ್ಯಕ ತಿರುಗಾಡಿದರೆ, ವಶಕ್ಕೆ ಪಡೆಯಲಾಗುವುದು. ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು. ಹಾಗಾಗಿ ಯಾರು ಕೂಡ ಅನವಶ್ಯಕ ವಾಗ್ವಾದ, ಪ್ರಕರಣ ದಾಖಲಾಗುವ ರೀತಿ ವರ್ತಿಸಬಾರದು ಎಂದು ಕಮಿಷನರ್ ಸೂಚಿಸಿದ್ದಾರೆ.
ಬಜರಂಗದಳ ಸಂಘಟನೆ ಹೊಸ ವರ್ಷಾಚರಣೆಗೆ ಅಡ್ಡಿ ಪಡಿಸುತ್ತದೆಯೇ ಎಂಬ ಪ್ರಶ್ನೆಗೆ, ಯಾವುದೇ ಸಂಘಟನೆಗಳಿಗೆ ನೇರವಾಗಿ ಎಚ್ಚರಿಕೆ ಕೊಡುವ ಅಧಿಕಾರ ಇಲ್ಲ. ಸಾರ್ವಜನಿಕ ಜಾಗದಲ್ಲಿ ಆಚರಣೆ ನಡೆಯುತ್ತಿದ್ದರೆ, ಅಲ್ಲಿಗೆ ಯಾರು ಕೂಡ ಹೋಗುವಂತಿಲ್ಲ ಎಂದು ತಡೆಯುವುದಕ್ಕೂ ಆಗುವುದಿಲ್ಲ. ಅಹಿತಕರ ಘಟನೆಗಳಾದಲ್ಲಿ ಅಥವಾ ಯಾರಾದ್ರೂ ತೊಂದರೆ ಕೊಟ್ಟರೆ ಕೂಡಲೇ ಸ್ಥಳೀಯ ಪೊಲೀಸರನ್ನು ಸಂಪರ್ಕಿಸಿ, 112 ಗೆ ಕರೆ ಮಾಡಿ ದೂರು ಕೊಡಬಹುದು ಎಂದು ಹೇಳಿದ್ದಾರೆ.
#Newyear2023 party rules in #Mangalore, no #DJ sound after 10PM, #Pubs, Malls restaurants to be open till 12:30 AM. Watch Mangalore Police Commissioner #ShashiKumarips about rules pic.twitter.com/oTg4aDgU4c
— Headline Karnataka (@hknewsonline) December 31, 2022
New year 2023 party rules in Mangalore, no DJ sound after 10PM, Pubs, Malls restaurants to be open till 12:30 AM says Mangalore Police Commissioner Shashi Kumar.
04-05-25 09:55 pm
HK News Desk
ಸಿಇಟಿ ಬಳಿಕ ನೀಟ್ ಪರೀಕ್ಷೆಗೂ ಜನಿವಾರಕ್ಕೆ ಕತ್ತರಿ !...
04-05-25 09:26 pm
ಹಿಮಾಲಯ - ದೆಹಲಿಗೆ ಸುನಾಮಿ, ಮಹಾನ್ ನಾಯಕರ ದುರ್ಮರಣ...
04-05-25 09:15 pm
Bangalore Girl Naked, HSR Layout: ಬೆಂಗಳೂರಿನಲ್...
04-05-25 02:27 pm
Suhas Shetty Murder, Parameshwar: ಸುಹಾಸ್ ಶೆಟ್...
04-05-25 01:18 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
04-05-25 11:26 pm
Mangalore Correspondent
Mangalore, Hate speech, BJP MLA Harish Poonja...
04-05-25 08:49 pm
Minister Gundu Rao, Mangalore: ಮುಸ್ಲಿಂ ಮುಖಂಡರ...
04-05-25 08:39 pm
Mp Brijesh Chowta, Suhas Shetty Murder: ಆ್ಯಂಟ...
03-05-25 10:57 pm
ಬಜರಂಗಿ ಸುಹಾಸ್ ಶೆಟ್ಟಿ ಹತ್ಯೆಗೆ ಕಳಸದವರು ಬಂದಿದ್ದೇ...
03-05-25 10:43 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm