ಕಿನ್ನಿಗೋಳಿ ; ಖಾಸಗಿ ಬಸ್ ಡಿಕ್ಕಿಯಾಗಿ 9ನೇ ತರಗತಿ ವಿದ್ಯಾರ್ಥಿ ಸಾವು 

02-01-23 08:13 pm       Mangalore Correspondent   ಕರಾವಳಿ

ಖಾಸಗಿ ಬಸ್ ಡಿಕ್ಕಿಯಾಗಿ ಶಾಲೆ ಬಿಟ್ಟು ರಸ್ತೆ ಬದಿ ನಡೆದುಕೊಂಡು ತೆರಳುತ್ತಿದ್ದ ಬಾಲಕ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಕಿನ್ನಿಗೋಳಿ ಸಮೀಪದ ಉಲ್ಲಂಜೆ ಹೆದ್ದಾರಿಯಲ್ಲಿ ನಡೆದಿದೆ.

ಮಂಗಳೂರು, ಜ.2 : ಖಾಸಗಿ ಬಸ್ ಡಿಕ್ಕಿಯಾಗಿ ಶಾಲೆ ಬಿಟ್ಟು ರಸ್ತೆ ಬದಿ ನಡೆದುಕೊಂಡು ತೆರಳುತ್ತಿದ್ದ ಬಾಲಕ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಕಿನ್ನಿಗೋಳಿ ಸಮೀಪದ ಉಲ್ಲಂಜೆ ಹೆದ್ದಾರಿಯಲ್ಲಿ ನಡೆದಿದೆ.

ಮೃತ ಬಾಲಕನನ್ನು ಉಲ್ಲಂಜೆ ನಿವಾಸಿ, ಒಂಬತ್ತನೇ ಕ್ಲಾಸ್ ವಿದ್ಯಾರ್ಥಿ ಚರಣ್ (15) ಗುರುತಿಸಲಾಗಿದೆ. ಚರಣ್ ಕಟೀಲು ಶಾಲೆಯಲ್ಲಿ 9ನೇ ತರಗತಿ ವಿದ್ಯಾರ್ಥಿಯಾಗಿದ್ದು ಶಾಲೆ ಬಿಟ್ಟು ಮನೆಗೆ ನಡೆದುಕೊಂಡು ಹೋಗುತ್ತಿದ್ದಾಗ ದುರಂತ ಸಂಭವಿಸಿದೆ. ಕಿನ್ನಿಗೋಳಿ ಕಡೆಯಿಂದ ಕಟೀಲು ಕಡೆಗೆ ಹೋಗುತ್ತಿದ್ದ ಖಾಸಗಿ ಬಸ್ ಉಲ್ಲಂಜೆ ಜುಮಾದಿ ಗುಡ್ಡೆ ತಿರುವು ಬಳಿ ಡಿಕ್ಕಿ ಹೊಡೆದಿದೆ. ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದು ಸ್ಥಳಕ್ಕೆ ಬಜಪೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

Mangalore Kinnigoli accident, 15 year old boy killed after a private bus rammed him while walking.