ಬ್ರೇಕಿಂಗ್ ನ್ಯೂಸ್
02-01-23 09:02 pm Mangalore Correspondent ಕರಾವಳಿ
ಮಂಗಳೂರು, ಜ.2 : ರಾಜ್ಯದಲ್ಲೇ ಪ್ರಥಮ ಹೈಟೆಕ್ ಬಸ್ ನಿಲ್ದಾಣವನ್ನು ಸುರತ್ಕಲ್ ಗೋವಿಂದ ದಾಸ ಕಾಲೇಜಿನ ಮುಂಭಾಗದಲ್ಲಿ ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ.ವೈ. ಭರತ್ ಶೆಟ್ಟಿ ಉದ್ಘಾಟಿಸಿದರು.
"ಸ್ಮಾರ್ಟ್ ಆಂಡ್ ಡಿಜಿಟಲ್ ಸುರತ್ಕಲ್" ಯೋಜನೆಯಡಿ ರಾಜ್ಯದಲ್ಲೇ ಪ್ರಥಮವಾಗಿ ಸರ್ವ ರೀತಿಯಲ್ಲೂ ಸುಸಜ್ಜಿತವಾದ ಹೈಟೆಕ್ ಬಸ್ ನಿಲ್ದಾಣವನ್ನು ಲೋಕಾರ್ಪಣೆಗೊಳಿಸಲಾಗಿದೆ. ಶುದ್ಧ ಕುಡಿಯುವ ನೀರು, ಸಿಸಿ ಕೆಮರಾ ವ್ಯವಸ್ಥೆ ಸೇರಿದಂತೆ, ಮಹಿಳೆಯರು ಮತ್ತು ಹೆಣ್ಣುಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ತುರ್ತು ಸಂದರ್ಭದಲ್ಲಿ ನೇರವಾಗಿ ಸ್ಥಳೀಯ ಪೊಲೀಸ್ ಅಧಿಕಾರಿಗಳ ಮೊಬೈಲ್ ಗೆ ಸಂಪರ್ಕ ಕಲ್ಪಿಸುವಂತೆ ಎಮರ್ಜನ್ಸಿ ಕರೆ ವ್ಯವಸ್ಥೆಯನ್ನೂ ಮಾಡಲಾಗಿದೆ" ಎಂದು ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ. ವೈ. ಭರತ್ ಶೆಟ್ಟಿ ಹೇಳಿದರು.
"ಯೋಜನೆಯ ಮುಂದುವರಿದ ಭಾಗವಾಗಿ ಸುರತ್ಕಲ್ ಬೀಚ್ ನಲ್ಲಿ ಪ್ರವಾಸಿಗರ ವಿಹಾರಕ್ಕೆ ಪಾರ್ಕ್, ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲಾಗುತ್ತದೆ. ಜನರು ಇವುಗಳನ್ನು ಯೋಗ್ಯ ರೀತಿಯಲ್ಲಿ ಬಳಸುವ ಮೂಲಕ ಸ್ವಚ್ಛತೆಯ ಕಡೆಗೆ ಗಮನ ನೀಡುವಂತಾಗಬೇಕು" ಎಂದರು.
ಮಂಗಳೂರು ಮೇಯರ್ ಜಯಾನಂದ ಅಂಚನ್, ಮೂಡಾ ಅಧ್ಯಕ್ಷ ರವಿಶಂಕರ್ ಮಿಜಾರ್, ಎಸಿಪಿ ಎಸ್. ಮಹೇಶ್ ಕುಮಾರ್, ಸರ್ಕಲ್ ಇನ್ ಸ್ಪೆಕ್ಟರ್ ಮಹೇಶ್ ಪ್ರಸಾದ್, ಗೋವಿಂದ ದಾಸ್ ಕಾಲೇಜ್ ಪ್ರಾಂಶುಪಾಲ ಪ್ರೊ. ಕೃಷ್ಣಮೂರ್ತಿ, ಕಾರ್ಪೋರೇಟರ್ ವರುಣ್ ಚೌಟ, ಶ್ವೇತಾ ಪೂಜಾರಿ, ಶೋಭಾ ರಾಜೇಶ್, ಲೋಕೇಶ್ ಬೊಳ್ಳಾಜೆ, ನಯನ ಆರ್. ಕೋಟ್ಯಾನ್, ಸಂಗೀತಾ ನಾಯಕ್, ಸರಿತಾ ಶಶಿಧರ್, ಮಂಗಳೂರು ಉತ್ತರ ಯುವಮೋರ್ಚಾ ಅಧ್ಯಕ್ಷ ಭರತ್ ರಾಜ್ ಕೃಷ್ಣಾಪುರ, ಪುಷ್ಪರಾಜ್ ಸಸಿಹಿತ್ಲು ಮತ್ತಿತರರು ಉಪಸ್ಥಿತರಿದ್ದರು.
ಬಸ್ ನಿಲ್ದಾಣದಲ್ಲಿ ಏನಿದೆ ವಿಶೇಷ ?
ಹೈಟೆಕ್ ಬಸ್ ನಿಲ್ದಾಣದಲ್ಲಿ ಉಚಿತ ವೈಫೈ, ಮೂರು ಸಿಸಿ ಕೆಮರಾ, ಶುದ್ಧೀಕರಿಸಿದ ನೀರು, ಎಫ್ ಎಂ ರೇಡಿಯೋ, ಇನ್ವರ್ಟರ್ ವ್ಯವಸ್ಥೆ, ಎಸ್ ಓ ಎಸ್ ಬಟನ್, ಸಿಟಿ ಎಕ್ಸ್ ಸೂಪರ್ ಆಪ್, 2 ಫ್ಯಾನ್, ಪ್ರಥಮ ಚಿಕಿತ್ಸೆ ಪೆಟ್ಟಿಗೆ, 12 ಆಸನ ವ್ಯವಸ್ಥೆ , ಅಗ್ನಿಶಮನ ವ್ಯವಸ್ಥೆ, ಎಲ್ ಇ ಡಿ ಬೆಳಕಿನ ವ್ಯವಸ್ಥೆ, ಸೆಲ್ಫಿ ಪಾಯಿಂಟ್, ಮೊಬೈಲ್, ಲ್ಯಾಪ್ ಟಾಪ್ ಚಾರ್ಜಿಂಗ್ ಪಾಯಿಂಟ್
ಯೂಸ್ ಮಿ ಬಾಕ್ಸ್ ಇತ್ಯಾದಿ ಹೊಂದಿದ್ದು ನಿಲ್ದಾಣಕ್ಕೆ ಬರುವ ಜನರಿಗೆ ಉಚಿತ ಸೇವೆ ನೀಡಲಿದೆ.
Mangalore City North MLA Dr Y Bharath Shetty inaugurated a hi-tech bus stand in front of Govinda Das College in Surathkal. The bus stand has drinking water facility, CC camera and for the safety of women and girl children, there is an emergency call facility to reach out to the phone numbers of police officers seeking help.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 04:38 pm
HK News Desk
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
12-05-25 11:26 am
HK News Desk
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm