ಬ್ರೇಕಿಂಗ್ ನ್ಯೂಸ್
02-01-23 10:55 pm Mangalore Correspondent ಕರಾವಳಿ
ಮಂಗಳೂರು, ಜ.2: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ನಾಲ್ಕು ತಿಂಗಳ ಕಾಲ ಹಗಲಿನ ವೇಳೆಯಲ್ಲಿ ಮುಚ್ಚಲು ನಿರ್ಧರಿಸಲಾಗಿದೆ. ರನ್ ವೇಯಲ್ಲಿ ಕಾಂಕ್ರೀಟ್ ಜೊತೆಗೆ ಕಾರ್ಪೆಟ್ ಕಾಮಗಾರಿ ನಿರ್ವಹಿಸಲು ಜನವರಿ 27ರಿಂದ ಮೇ 1ರ ವರೆಗೆ ಬೆಳಗ್ಗೆ 9.30ರಿಂದ ಸಂಜೆ 6 ಗಂಟೆ ವರೆಗೆ ಮುಚ್ಚಲಾಗುವುದು ಎಂದು ಏರ್ಪೋರ್ಟ್ ಅಥಾರಿಟಿ ಪ್ರಕಟಣೆಯಲ್ಲಿ ತಿಳಿಸಿದೆ.
ಆದರೆ ಯಾವುದೇ ನಿಗದಿತ ವಿಮಾನಗಳ ಸಂಚಾರವನ್ನು ಕಡಿತಗೊಳಿಸಲಾಗುವುದಿಲ್ಲ. ಎಲ್ಲ ವಿಮಾನಗಳ ಆಗಮನ ಮತ್ತು ನಿರ್ಗಮನ ಸಂಜೆಯಿಂದ ರಾತ್ರಿ ಮತ್ತು ಬೆಳಗ್ಗಿನ ಅವಧಿಯಲ್ಲಿ ಮಾತ್ರ ಇರುತ್ತದೆ. ನಾಲ್ಕು ತಿಂಗಳ ಅವಧಿಯಲ್ಲಿ ಭಾನುವಾರ ಮತ್ತು ರಾಷ್ಟ್ರೀಯ ರಜಾ ದಿನಗಳ ಹೊರತುಪಡಿಸಿ ಸೋಮವಾರದಿಂದ ಶನಿವಾರದ ವರೆಗೂ ರನ್ ವೇ ಹಗಲಿನಲ್ಲಿ ಬಂದ್ ಆಗಲಿದೆ. 2006ರಲ್ಲಿ ಮಂಗಳೂರಿನ ವಿಮಾನ ನಿಲ್ದಾಣದಲ್ಲಿ 2450 ಮೀಟರ್ ಉದ್ದ ಮತ್ತು 45 ಮೀಟರ್ ಅಗಲದ ಕಾಂಕ್ರೀಟ್ ರನ್ ವೇ ಮಾಡಲಾಗಿತ್ತು. ಆ ಸಂದರ್ಭದಲ್ಲಿ ಆಧುನಿಕ ರೀತಿಯ ಮತ್ತು ಎರಡು ವೇ ರನ್ ವೇ ಹೊಂದಿದ್ದ ರಾಜ್ಯದ ಏಕೈಕ ನಿಲ್ದಾಣ ಇದಾಗಿತ್ತು. ಇದೀಗ ಅಂತಾರಾಷ್ಟ್ರೀಯ ಸ್ಟಾಂಡರ್ಡ್ ಅನುಗುಣವಾಗಿ ರನ್ ವೇ ರಚಿಸಲು ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ.
ಪ್ರಸಕ್ತ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾಡಲಾಗುತ್ತಿರುವ ರನ್ ವೇಯಲ್ಲಿ ರಾತ್ರಿ ವೇಳೆ ಮಂಜು ಕವಿದ ವಾತಾವರಣದಲ್ಲಿಯೂ ವಿಮಾನ ಇಳಿಯುವಂತಾಗಲು ವ್ಯವಸ್ಥೆ ಇರಲಿದೆ. ಕಳೆದ ಬಾರಿ ಕೋಜಿಕ್ಕೋಡ್ ನಲ್ಲಿ ವಿಮಾನ ಪತನವಾದ ಬಳಿಕ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಹೊಂದಿರಬೇಕಾದ ಭದ್ರತಾ ವ್ಯವಸ್ಥೆ ಬಗ್ಗೆ ತನಿಖಾ ತಂಡ ನೀಡಿದ್ದ ವರದಿ ಆಧರಿಸಿ ಈ ಬದಲಾವಣೆ ಮಾಡಲಾಗುತ್ತಿದೆ. ಕಾರ್ಪೆಟ್ ಹಾಕುವ ಕಾಮಗಾರಿ ಹಿನ್ನೆಲೆಯಲ್ಲಿ ವಿಮಾನ ಏರ್ಲೈನ್ಸ್ ಕಂಪನಿಗಳ ಜೊತೆಗೆ ಮಂಗಳೂರು ವಿಮಾನ ನಿಲ್ದಾಣದ ಪ್ರಾಧಿಕಾರ ಚರ್ಚೆ ನಡೆಸಿದ್ದು, ನಾಲ್ಕು ತಿಂಗಳ ಅವಧಿಯಲ್ಲಿ ಸಮಯ ಬದಲಾವಣೆಗೆ ಸೂಚಿಸಿದೆ.
Mangaluru: Mangaluru International Airport will carry out major rehabilitation/recarpeting work on its runway 06/24 for a little over four-month period starting from January 27, 2023. The work will take place from 9.30am to 6pm from Monday to Saturday on all days except Sunday and national holidays until May 31, 2023. Airlines will be operating their schedules prior to 9.30am and after 6pm in the above-mentioned period.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 04:38 pm
HK News Desk
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm