ಬ್ರೇಕಿಂಗ್ ನ್ಯೂಸ್
03-01-23 10:59 am Mangalore Correspondent ಕರಾವಳಿ
ಮಂಗಳೂರು, ಜ.3: ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು ಸಿನಿಮಾದಲ್ಲಿ ನಟಿಸಲಿದ್ದಾರೆ. ಖ್ಯಾತ ನಿರ್ದೇಶಕ ಎಸ್.ವಿ. ರಾಜೇಂದ್ರ ಸಿಂಗ್ ಬಾಬು ನಿರ್ದೇಶನದಲ್ಲಿ ಮೂಡಿ ಬರುತ್ತಿರುವ 'ವೀರ ಕಂಬಳ' ಸಿನಿಮಾದಲ್ಲಿ ಹೆಗ್ಗಡೆ ಅತಿಥಿ ಪಾತ್ರವನ್ನು ಮಾಡುತ್ತಿದ್ದಾರೆ.
ಸಿನಿಮಾದಲ್ಲಿ ನಟಿಸಲು ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರಿಗೆ ಮೇಕಪ್ ಮಾಡುತ್ತಿರುವ ಫೋಟೊ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. 'ಬಿರ್ದ್ ದ ಕಂಬುಲ' ಎನ್ನುವ ಹೆಸರಲ್ಲಿ ಈ ಸಿನಿಮಾ ತಯಾರಾಗುತ್ತಿದ್ದು ಕನ್ನಡ, ತೆಲುಗು, ಮಲಯಾಳಂ, ಹಿಂದಿ ಭಾಷೆಗಳಲ್ಲಿ ಡಬ್ ಆಗಿ ಏಕಕಾಲದಲ್ಲಿ ತೆರೆ ಕಾಣಲಿರುವುದು ವಿಶೇಷ. ಕರಾವಳಿಯ ಜನಪದ ಕಂಬಳ ಕ್ರೀಡೆಯನ್ನು ಪ್ರಧಾನವಾಗಿಟ್ಟು ಮೂಡಿ ಬರುತ್ತಿರುವ ಈ ಸಿನಿಮಾ ಈಗಾಗಲೇ ನಿರೀಕ್ಷೆ ಹುಟ್ಟುಹಾಕಿದೆ. ಸಿನಿಮಾದ ಬಹುತೇಕ ಚಿತ್ರೀಕರಣ ಮುಗಿದಿದ್ದು ಅಂತಿಮ ಹಂತದಲ್ಲಿದೆ ಎಂದು ರಾಜೇಂದ್ರ ಸಿಂಗ್ ಬಾಬು ವಾರದ ಹಿಂದೆ ತಿಳಿಸಿದ್ದರು.


ಕಂಬಳ ಕೋಣ ಓಟಗಾರ ಶ್ರೀನಿವಾಸ್ ಗೌಡ ಸಿನಿಮಾದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ. ಇದಲ್ಲದೆ, ಕಾಂತಾರ ಚಿತ್ರದ ಗುರುವ ಖ್ಯಾತಿಯ ನಟ ಸ್ವರಾಜ್ ಶೆಟ್ಟಿ ಪ್ರಮುಖ ಪಾತ್ರದಲ್ಲಿದ್ದು ಚಿತ್ರದಲ್ಲಿ ಕಂಬಳದ ಕೋಣ ಓಡಿಸುವ ದೃಶ್ಯದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಕನ್ನಡದ ನಟರಾದ ರವಿಶಂಕರ್, ರಾಧಿಕಾ ಚೇತನ್, ತುಳು ಚಿತ್ರರಂಗದ ನವೀನ್ ಪಡೀಲ್, ಭೋಜರಾಜ್ ವಾಮಂಜೂರು ಸೇರಿ ಸಾಕಷ್ಟು ಕಲಾವಿದರು ಚಿತ್ರದಲ್ಲಿದ್ದಾರೆ.
Dharmasthala Veerendra Heggade to act in Veera Kambala Kannada movie as guest role, make up pic goes viral.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 04:58 pm
HK News Staffer
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
05-09-26 08:58 pm
HK News Staffer
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm